ಈಗ ಇಟಲಿಯಲ್ಲೂ ಲಾಕ್ ಡೌನ್ ಸಡಿಲಿಕೆಯ ಮಾತು
Team Udayavani, Apr 19, 2020, 2:15 PM IST
ಇಟಲಿ: ಕೋವಿಡ್ ವೈರಸ್ ಸೋಂಕಿತರ ಸಂಖ್ಯೆ ಇಟಲಿಯಲ್ಲಿ ಕಡಿಮೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರೂ ಮತ್ತು ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಈ ಕಾರಣಕ್ಕೆ ಸರಕಾರ ಲಾಕ್‌ಡೌನ್ ಅನ್ನು ತುಸು ಸಡಿಲಿಸುವ ಕುರಿತು ಚಿಂತನೆ ನಡೆಸುತ್ತಿದೆ. ಕೋವಿಡ್ -19 ವೈರಸ್ ಪ್ರಾರಂಭವಾದ ಬಳಿಕ ಮೊದಲ ಬಾರಿಗೆ ಚಿಕಿತ್ಸೆ ಪಡೆಯುತ್ತಿರುವ ಜನರ ಸಂಖ್ಯೆ ಗಣನೀಯ ಇಳಿಕೆಯಾಗಿದೆ.
ಉತ್ತರ ಮಿಲನ್‌ನ ಲೊಂಬಾರ್ಡಿಯಲ್ಲಿ 11 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಲಾಕ್‌ಡೌನ್ ಒಂದೆಡೆ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆ ಮಾಡುತ್ತಿದ್ದರೂ, ದೇಶದ ಆರ್ಥಿಕತೆಯ ಮೇಲೂ ಭಾರೀ ಪರಿಣಾಮ ಬೀರುತ್ತಿದೆ. ಈ ಕುರಿತಂತೆ ಸರಕಾರದ ಮಟ್ಟದಲ್ಲಿ ಮಾತುಕತೆಯಾಗಿದ್ದು, ಕೆಲವೆಡೆ ಪ್ರಾಯೋಗಿಕವಾಗಿ ಲಾಕ್‌ಡೌನ್ ತೆರವುಗೊಳಿಸುವ ಸಾಧ್ಯತೆ ಇದೆ. ಲಾಕ್‌ಡೌನ್ ಸಡಿಲಗೊಳಿಸುವುದು ಹೇಗೆ? ಮತ್ತು ಯಾವಾಗ ಪ್ರಾರಂಭಿಸಬೇಕು ಎಂಬ ಬಗ್ಗೆ ಇನ್ನೂ ಚರ್ಚೆಗಳು ಚಾಲ್ತಿಯಲ್ಲಿವೆ.
ಪ್ರಸ್ತುತ ರಾಷ್ಟ್ರೀಯ ನಿರ್ಬಂಧಗಳು ಮೇ 3ರಂದು ಮುಕ್ತಾಯಗೊಳ್ಳಲಿದ್ದು, ಹೊಸ ಪ್ರಕರಣಗಳು ತೀವ್ರವಾಗಿ ಕುಸಿದಿರುವ ಪ್ರದೇಶಗಳಲ್ಲಿ ಮನೆಯಲ್ಲಿಯೇ ಇರುವ ಆದೇಶಗಳನ್ನು ಭಾಗಶಃ ಸರಕಾರ ತೆಗೆದು ಹಾಕಬಹುದು. ರೋಮ್‌ನ ದಕ್ಷಿಣದ ಪ್ರದೇಶಗಳಲ್ಲಿನ ನಿರ್ಬಂಧವನ್ನು ಸದ್ಯಕ್ಕೆ ತೆಗೆದು ಹಾಕಲು ನಿರ್ಧರಿಸಿಲ್ಲ ಎನ್ನಲಾಗಿದೆ.
ಲಾಕ್‌ಡೌನ್ ಬಳಿಕ ಲಕ್ಷಾಂತರ ಮಂದಿ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ದೇಶದ ವಿತ್ತೀಯ ಬೆಳವಣಿಗೆಗಳು ಶೂನ್ಯಕ್ಕೆ ತಲುಪಿದೆ. ಎರಡನೆಯ ಮಹಾಯುದ್ಧದ ಅನಂತರದ ಅತ್ಯಂತ ಕೆಟ್ಟ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಿನ ಪರಿಣಾಮಗಳನ್ನು ಇಟಲಿ ಎದುರಿಸುತ್ತಿದೆ.ಇಟಲಿ ಕೋವಿಡ್-19ನ ಆರ್ಭಟಕ್ಕೆ ತತ್ತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.