J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
ಸಂವಿಧಾನದ ಮೂಲಭೂತ ತತ್ವಗಳ ಮೇಲಿನ ಆಕ್ರಮಣ ಎಂದ ಕಾಂಗ್ರೆಸ್ ಮುಖಂಡ ರವೀಂದರ್ ಶರ್ಮಾ
Team Udayavani, Oct 5, 2024, 9:28 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದು ಫಲಿತಾಂಶ ಪ್ರಕಟಕ್ಕೂ ಮೊದಲೇ ವಿಧಾನಸಭೆಗೆ ಐವರು ಸದಸ್ಯರ ನಾಮ ನಿರ್ದೇಶನಗೊಳಿಸಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ವಿಧಾನಸಭೆಗೆ ಐವರು ಸದಸ್ಯರ ನಾಮ ನಿರ್ದೇಶನಕ್ಕೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಈ ಕ್ರಮವನ್ನು ಪ್ರಜಾಪ್ರಭುತ್ವದ ತತ್ವಗಳು ಮತ್ತು ಸಂವಿಧಾನದ ಮೇಲಿನ ದಾಳಿ, ಈ ನಾಮನಿರ್ದೇಶನ ಸರ್ಕಾರ ರಚನೆಯ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಹೇಳಿದೆ ಹಾಗೂ ಐವರು ಪ್ರತಿನಿಧಿಗಳ ನಾಮನಿರ್ದೇಶನ ಅನುಮೋದಿಸದಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾಗೆ ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಹಿರಿಯ ಉಪಾಧ್ಯಕ್ಷ ರವೀಂದರ್ ಶರ್ಮಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್ ಐವರು ಶಾಸಕರ ನಾಮನಿರ್ದೇಶನವನ್ನು ನಾವು ವಿರೋಧಿಸುತ್ತೇವೆ. ಅಂತಹ ಯಾವುದೇ ಕ್ರಮವು ಪ್ರಜಾಪ್ರಭುತ್ವ, ಜನರ ಆದೇಶ ಮತ್ತು ಸಂವಿಧಾನದ ಮೂಲಭೂತ ತತ್ವಗಳ ಮೇಲಿನ ಆಕ್ರಮಣ ಎಂದು ಹೇಳಿದ್ದಾರೆ.
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವೇ ನಾಮನಿರ್ದೇಶನಗಳ ಮಾಡಬೇಕೆಂದು ಕಾಂಗ್ರೆಸ್ ಕರೆ ನೀಡಿದೆ. ಬೇರೆ ಯಾವುದೇ ವಿಧಾನವು ಜನರ ಆದೇಶಕ್ಕೆ ದ್ರೋಹವಾಗುತ್ತದೆ ಎಂದು ಸಮರ್ಥಿಸಿಕೊಂಡಿದೆ. ಲೆಫ್ಟಿನೆಂಟ್ ಗವರ್ನರ್ ಅನುಮೋದಿಸಿದ ನಾಮನಿರ್ದೇಶನಗಳು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ಕ್ಕೆ ಮಾಡಿದ ತಿದ್ದುಪಡಿಗಳ ಭಾಗವಾಗಿದೆ.
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯಡಿ, ಕಾಶ್ಮೀರಿ ಪಂಡಿತರು ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ನಿರಾಶ್ರಿತರಿಗೆ ಪ್ರಾತಿನಿಧ್ಯ ಸೇರಿದಂತೆ 5 ಸದಸ್ಯರನ್ನು ನಾಮನಿರ್ದೇಶಿಸುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಹೊಂದಿದ್ದಾರೆ. ಆದರೆ, ಲೆಫ್ಟಿನೆಂಟ್ ಗವರ್ನರ್ ಚುನಾವಣೆಯ ನಂತರ ರಚನೆಯಾಗುವ ಸಚಿವ ಸಂಪುಟ ಸಲಹೆ ಆಧರಿಸಿ ಮಾತ್ರ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ವಾದಿಸಿದೆ.
ಚುನಾವಣೆಯ ನಂತರದ ಬಹುಮತ ಅಥವಾ ಅಲ್ಪ ಮತ ಸ್ಥಿತಿ ಬದಲಾಯಿಸಲು ನಾಮನಿರ್ದೇಶನದ ನಿಬಂಧನೆ ದುರುಪಯೋಗಪಡಿಸಿಕೊಳ್ಳುವುದು ಒಳ್ಳೆಯದಲ್ಲ. ಸರ್ಕಾರ ರಚನೆಯ ಮೊದಲು ಅಂತಹ ನಾಮನಿರ್ದೇಶನ “ಅಸಾಂವಿಧಾನಿಕ” ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.