ಜಾಧವ್ ರಾಜೀನಾಮೆ ಸಸ್ಪೆನ್ಸ್ ಮುಂದುವರಿಕೆ
ರಾಜೀನಾಮೆ, ಅನರ್ಹತೆ ಕುರಿತಂತೆ ವಿಚಾರಣೆ ಪೂರ್ಣ; ತೀರ್ಪು ಕಾಯ್ದಿರಿಸಿದ ಸ್ಪೀಕರ್ ರಮೇಶ್ ಕುಮಾರ್
Team Udayavani, Mar 26, 2019, 6:00 AM IST
ಬೆಂಗಳೂರು: ಕಾಂಗ್ರೆಸ್ ಶಾಸಕತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಕಲಬುರಗಿ ಅಭ್ಯರ್ಥಿಯಾಗಿರುವ ಉಮೇಶ ಜಾಧವ್ ಅವರ ಸದಸ್ಯತ್ವ ಅನರ್ಹತೆ ಪ್ರಕರಣದ ತೀರ್ಪು ಕಾಯ್ದಿರಿಸಲಾಗಿದೆ.
ಹೀಗಾಗಿ, ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾಗುತ್ತಾ? ಅನರ್ಹತೆ ತೂಗುಕತ್ತಿ ಮುಂದುವರಿಯುತ್ತಾ? ಬಿಜೆಪಿ ಅಭ್ಯರ್ಥಿಯಾಗಿ ಉಮೇಶ್ ಜಾಧವ್ ಕಲಬುರಗಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವುದು ಮಾನ್ಯ ಆಗುತ್ತದೆಯೇ ಎಂಬ ಪ್ರಶ್ನೆಗಳಿಗಿನ್ನೂ ಉತ್ತರ ಸಿಕ್ಕಲ್ಲ.
ದೇಶದಲ್ಲಿ ಇದೇ ಮೊದಲ ಬಾರಿಗೆ ಶಾಸಕತ್ವಕ್ಕೆ ರಾಜೀನಾಮೆ ನೀಡಿದ ಶಾಸಕನ ಕ್ಷೇತ್ರದ ಮತದಾರರನ್ನು ಕರೆದು ಅದಾಲತ್ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸುವ ಸಂಪ್ರದಾಯ ಹುಟ್ಟುಹಾಕಿದ ಸ್ಪೀಕರ್ ರಮೇಶ್‌ಕುಮಾರ್ ವಿಧಾನಸೌಧದಲ್ಲಿ ಸೋಮವಾರ ವಿಚಾರಣೆ ನಡೆಸಿದ ನಂತರ, ತೀರ್ಪು ಕಾಯ್ದಿರಿಸಿರುವುದಾಗಿ ತಿಳಿಸಿದರು. ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಜಮೀರ್ ಅಹಮದ್ ಹಾಗೂ ಇತರೆ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಸಹ ನಮ್ಮ ಮುಂದಿದೆ. ಎಲ್ಲವನ್ನೂ ಪರಿಶೀಲಿಸಿ ಆಮೇಲೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.
ಜಾಧವ್ ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳ ಸಂಘ-ಸಂಸ್ಥೆಗಳು ಹಾಗೂ ಮತದಾರರ ಅಭಿಪ್ರಾಯ ಆಲಿಸಿದ್ದೇನೆ. ನನಗೂ ಸಂಪೂರ್ಣ ತಿಳುವಳಿಕೆ ಇಲ್ಲದ ಕಾರಣ ಕಾನೂನು ಪರಿಣಿತರ ಸಲಹೆ ಪಡೆಯಬೇಕಿದೆ ಎಂದರು.
ಅನರ್ಹ ಮಾಡಿ ಎಂದ ಕಾಂಗ್ರೆಸ್
ಕಾಂಗ್ರೆಸ್ ಪರವಾಗಿ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಪಿ.ಆರ್.ರಮೇಶ್ ಭಾಗಿಯಾಗಿದ್ದರು. ಕಾಂಗ್ರೆಸ್ ಪರವಾಗಿ ವಕೀಲ ಶಶಿಕಿರಣ್ ವಾದ ಮಂಡಿಸಿ, ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಂಗೀಕಾರಕ್ಕೆ ಮುನ್ನವೇ ಬಿಜೆಪಿ ಸೇರಿದ್ದು, ಇದು ಪಕ್ಷಾಂತರ ಕಾಯ್ದೆಯಡಿ ಬರುತ್ತದೆ. ಜತೆಗೆ, ಪಕ್ಷದ ವಿಪ್ ಉಲ್ಲಂಘನೆಗೆ ಸಂಬಂಧಿಸಿದಂತೆ ಅನರ್ಹತೆ ದೂರು ಸಹ ಇತ್ಯರ್ಥವಾಗಿಲ್ಲ. ಹೀಗಾಗಿ, ರಾಜೀನಾಮೆ ಅಂಗೀಕಾರ ಮಾಡದೆ ಅನರ್ಹತೆಗೊಳಿಸಬೇಕು ಎಂದು ವಾದ ಮಂಡಿಸಿದರು.
ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗಲ್ಲ
ಜಾಧವ್ ಪರ ಪರ ವಕೀಲ ಸುದೀಪ್ ಪಾಟೀಲ್ ವಾದ ಮಂಡಿಸಿ, ಮಾ. 4 ಕ್ಕೆ ಜಾಧವ್ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 6 ಕ್ಕೆ ಬಿಜೆಪಿ ಸೇರಿದ್ದಾರೆ. ಪಕ್ಷಾಂತರ ಕಾಯ್ದೆ ಅನ್ವಯ ಆಗುವುದಿಲ್ಲ . ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರ ಮಾಡಿ. ಕಾಂಗ್ರೆಸ್ ಕೊಟ್ಟಿರುವ ಅನರ್ಹತೆ ಅರ್ಜಿ ವಿಚಾರಣೆ ಮುಂದುವರಿಸಲು ನಮ್ಮದೇನೂ ಅಭ್ಯಂತರವಿಲ್ಲ ಎಂದರು.
ಸಂವಿಧಾನದ ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿರುವ ಅನರ್ಹತೆ ಕುರಿತು ನಿಯಮಗಳು ನೂನ್ಯತೆಯಿಂದ ಕೂಡಿವೆ. ಅದರ ಬದಲಾವಣೆ ಆಗುವ ಅವಶ್ಯಕತೆಯಿದೆ. ನಾನು ಒಂದೊಮ್ಮೆ ಅನರ್ಹತೆಗೊಳಿಸಿದರೂ ಚಿಂಚೋಳಿಯಿಂದ ಅವರು ಮತ್ತೆ ಸ್ಪರ್ಧೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆ ಬದಲಾವಣೆಯಾಗಬೇಕು. ಆದರೆ, ಅದು ಸಂಸತ್‌ಗೆ ಬಿಟ್ಟ ವಿಚಾರ.
– ರಮೇಶ್‌ಕುಮಾರ್, ಸ್ಪೀಕರ್
ನನಗೆ ಮತ ಹಾಕಿ ಗೆಲ್ಲಿಸಿ ಇಲ್ಲಿಗೆ ಬಂದ ನಿಮಗೆ ಧನ್ಯವಾದ. ಕಳೆದ 6 ತಿಂಗಳಿಂದ ಏನೆಲ್ಲಾ ನಡೆದಿದೆ ಎಲ್ಲರಿಗೂ ಗೊತ್ತಿದೆ. ಅದನ್ನು ನಾನು ಈಗ ಹೇಳಲ್ಲ. ಸ್ಪೀಕರ್ ಅವರು ಏನೇ ತೀರ್ಮಾನ ತೆಗೆದುಕೊಂಡರೂ ನಾನು ಅದಕ್ಕೆ ಬದ್ಧನಾಗಿರುತ್ತೇನೆ.
– ಉಮೇಶ್ ಜಾಧವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.