ಹುಬ್ಬಳ್ಳಿ -ಅಂಕೋಲಾ ರೈಲು ಅತ್ಯಗತ್ಯ: ಶೆಟ್ಟರ್
Team Udayavani, Mar 14, 2020, 6:30 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮರ್ಥ ನಾಯಕತ್ವದಲ್ಲಿ ನಾವು ಸಾಗುತ್ತಿದ್ದೇವೆ. ಸರಕಾರ ಅಥವಾ ಯಾವುದೇ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ, ನಾಯಕತ್ವ ಬದಲಾವಣೆಯ ಪ್ರಸ್ತಾವನೆಯೂ ಇಲ್ಲ ಎಂದು ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
“ಉದಯವಾಣಿ’ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಬಿ.ವೈ. ವಿಜಯೇಂದ್ರ ಸಹಿತ ಮುಖ್ಯಮಂತ್ರಿ ಕುಟುಂಬದ ಯಾರೂ ಕೂಡ ಸರಕಾರ ಅಥವಾ ಇಲಾಖೆಯ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಈ ಬಗ್ಗೆ ಆರೋಪ ಮಾಡುವವರು ಪತ್ರ ಬರೆಯುವ ಬದಲು, ಧೈರ್ಯದಿಂದ ಬಹಿರಂಗವಾಗಿ ಹೇಳಿಕೆ ನೀಡಲಿ ಎಂದು ಸವಾಲು ಹಾಕಿದರು.
ಸರಕಾರದ ವಿರುದ್ಧ ಆರೋಪ ಮಾಡು ವವರು ಧೈರ್ಯದಿಂದ ಹೆಸರು ಹೇಳಿಕೊಂಡು ಮುಂದೆ ಬರಬೇಕು. ಸರಕಾರಕ್ಕೆ ಕೆಟ್ಟ ಹೆಸರು ತರುವ ಸಂಬಂಧ ಪತ್ರ ಮೂಲಕ ಅಸ್ಥಿರ ಮಾಡಲು ಸಾಧ್ಯವಿಲ್ಲ. ನಿಜವಾಗಿಯೂ ಅವರಿಗೆ ಧೈರ್ಯವಿದ್ದರೆ ಬಹಿರಂಗವಾಗಿ ಹೇಳಿಕೆ ನೀಡಲಿ. ಸುಳ್ಳು ಸುದ್ದಿ ಹಬ್ಬಿಸುವುದು ಸರಿಯಲ್ಲ. ಅಧಿಕಾರದಲ್ಲಿ ರುವವರ ಬಗ್ಗೆ ಹಗುರವಾಗಿ ಮಾತನಾಡುವುದು, ಅಪಪ್ರಚಾರ ಮಾಡುವುದು ಸಹಜ, ಇಂಥವರ ವಿರುದ್ಧ ತನಿಖೆ, ದೂರು ನೀಡುವುದು ಸರಕಾರಿ ಮಟ್ಟದಲ್ಲಿ ನಡೆಯುತ್ತಿರುತ್ತದೆ ಎಂದು ಎಚ್ಚರಿಕೆ ನೀಡಿದರು.
ಪರ್ಯಾಯ ನಾಯಕತ್ವ
ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ನಾಯಕರಿದ್ದಾಗ ಪರ್ಯಾಯದ ವಿಚಾರವೇ ಆಗತ್ಯವಿಲ್ಲ. ನರೇಂದ್ರ ಮೋದಿ ಅವರು ಮಾಸ್ ನಾಯಕರಿದ್ದಾರೆ. ಅವರ ಅನಂತರ ಯಾರು ಎಂಬುದನ್ನು ಈಗ ವಿಚಾರ ಮಾಡಲು ಸಾಧ್ಯವಿಲ್ಲ. ವಾಜಪೇಯಿ ಅವರು ಇದ್ದಾಗ ಮುಂದೆ ಯಾರು ಎಂಬುದು ಚರ್ಚೆಯಾಗಿಲ್ಲ. ಅನಂತರ ಮೋದಿ ಅವರು ವಿಶ್ವನಾಯಕರಾಗಿ ಬೆಳೆದರು. ಈಗ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಇದ್ದಾರೆ. ಮುಂದಿನ ಮೂರೂವರೆ ವರ್ಷಗಳ ಕಾಲ ನಮ್ಮ ಸರಕಾರ ಇರಲಿದೆ. ಹೀಗಾಗಿ ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ. ವೈಯಕ್ತಿಕವಾಗಿ ಅವರು ಬರುತ್ತಾರೆ, ಇವರು ಬರುತ್ತಾರೆ ಎನ್ನುವುದು ಸರಿಯಲ್ಲ. ಯಡಿಯೂರಪ್ಪ ಬಿಟ್ಟು ಬೇರೆ ಯಾರು ಎಂಬುದರ ಕಲ್ಪನೆಯೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮರ್ಥ ಸರಕಾರ ಮತ್ತು ಉತ್ತಮ ಆಡಳಿತ ನಡೆಯುತ್ತಿದೆ. ದೃಢ ನಿರ್ಧಾರದ ಕೆಲವೊಂದು ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಸಚಿವ ರಾಗಿಲ್ಲ ಅಥವಾ ಇನ್ನಾವುದೋ ಕಾರಣಕ್ಕೆ ಸಣ್ಣಪುಟ್ಟ ಅಸಮಾಧಾನಗಳು ಇರುವುದು ಸಾಮಾನ್ಯ. ಅವೆಲ್ಲವನ್ನೂ ಹೊರತುಪಡಿಸಿ, ಸರಕಾರ ಸದೃಢವಾಗಿದೆ, ಜನಪರ ಯೋಜನೆಗಳನ್ನು ಜನ ಸದಾ ನೆನೆಯುತ್ತಿರುತ್ತಾರೆ ಎಂದರು..
ಕಾಂಗ್ರೆಸ್ ಅಸಮರ್ಥವಾಗಿದೆ
ಕಾಂಗ್ರೆಸ್‌ನವರೇ ರಾಜೀನಾಮೆ ಕೊಟ್ಟು ಬಂದರೆ ಅದಕ್ಕೆ ಬಿಜೆಪಿ ಹೊಣೆಯಲ್ಲ. ಅದು ಕಾಂಗ್ರೆಸ್‌ನ ದೌರ್ಬಲ್ಯ. ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದೇ ಇರುವುದು ಕಾಂಗ್ರೆಸ್‌ನ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಸಚಿವ, ಅನಂತರ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಈಗ ಸಚಿವನಾಗಿದ್ದರೂ ನನ್ನ ವ್ಯಕ್ತಿತ್ವದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಿಂದೆ ಹೇಗೆ ಇದ್ದೇನೋ ಹಾಗೆಯೇ ಸೌಮ್ಯ ಮತ್ತು ಸರಳವಾಗಿಯೇ ಇದ್ದೇನೆ.
– ಜಗದೀಶ್ ಶೆಟ್ಟರ್,
ಕೈಗಾರಿಕೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.