ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ
Team Udayavani, Jan 16, 2022, 4:17 PM IST
ದಾವಣಗೆರೆ: ಕೊರೊನಾ, ಒಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ನಿಯಮ, ಮಾರ್ಗಸೂಚಿ ಉಲ್ಲಂಘಿಸಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ ಭಾನುವಾರ ನೂರಾರು ಜನರ ನಡುವೆ ಅದ್ದೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ.
ಕೆ.ಬಿ. ಬಡಾವಣೆಯ ಗುಳ್ಳಮ್ಮನ ದೇವಸ್ಥಾನದ ಪಕ್ಕದಲ್ಲೇ ಬೃಹತ್ ಶಾಮಿಯಾನ, ವೇದಿಕೆಯಲ್ಲಿ ಜನ್ಮದಿನ ಆಚರಿಸಿಕೊಂಡರು.
ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಆಡಳಿತಾರೂಢ ಪಕ್ಷದ ಕೆಲ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಸರತಿ ಸಾಲಲ್ಲಿ ನಿಂತು ಜನ್ಮದಿನದ ಶುಭ ಕೋರಿದರು.
ಅಚ್ಚರಿ ಮತ್ತು ಆಶ್ಚರ್ಯ ಎಂದರೆ ಕೊರೊನಾ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯೇ ಸರತಿ ಸಾಲಲ್ಲಿ ಬಂದು ಶುಭ ಕೋರಿದರು.
ಜನಸಾಮಾನ್ಯರು ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದಂತೆ ನೋಡಿಕೊಳ್ಳಬೇಕಾದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವೇದಿಕೆಗೆ ತೆರಳಿ ಶುಭ ಕೋರಿದರು.
ಕೊರೊನಾ ಮಾರ್ಗಸೂಚಿ ನಿಯಮಗಳು ಖುಲ್ಲಾಂಖುಲ್ಲ ಉಲ್ಲಂಘನೆ ಆಗುತ್ತಿದ್ದ ಜನ್ಮ ದಿನದ ಸಮಾರಂಭಕ್ಕೆ ಸ್ವತಃ ಪೊಲೀಸ್ ಇಲಾಖೆಯಿಂದಲೇ ಭದ್ರತೆ ಒದಗಿಸಲಾಗಿತ್ತು.
ಒಬ್ಬ ಅಧಿಕಾರಿಯಂತೂ, ಜನ್ಮ ದಿನದ ಸಮಾರಂಭಕ್ಕೆ ಬಂದ ಪರಿಚಯಸ್ಥರನ್ನು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿ, ವೇದಿಕೆಯತ್ತ ಹೋಗಲು ಅನುವು ಮಾಡಿಕೊಡುತ್ತಿದ್ದರು. ಇತರರು ಸಾಥ್ ನೀಡಿದರು.
ಜನ್ಮ ದಿನದ ಸಮಾರಂಭಕ್ಕೆ ಬಂದವರಿಗೆ ವಿವಿಧ ಬಗೆಯ ಭಕ್ಷ್ಯ ಗಳ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ವ್ಯವಸ್ಥೆಗೆಂದು ಪೆಂಡಾಲ್ ಸಹ ಹಾಕಲಾಗಿತ್ತು. ಅದಕ್ಕಾಗಿ ರಸ್ತೆಯನ್ನೇ ಬಂದ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Bantwal: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಢಿಕ್ಕಿ; ದಂಪತಿಗೆ ಗಾಯ
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.