Jammu-Kashmir: ಏಳು ವಲಸಿಗ ಕಾರ್ಮಿಕರ ಹ*ತ್ಯೆಗೈದ ಉಗ್ರರು, ಕೆಲವರಿಗೆ ಗಾಯ
ದಾಳಿಕೋರರ ಪತ್ತೆಹಚ್ಚಲು ಸೇನೆ, ಪೊಲೀಸರಿಂದ ಕಾರ್ಯಾಚರಣೆ
Team Udayavani, Oct 20, 2024, 10:28 PM IST
ಶ್ರೀನಗರ: ಜಮ್ಮು-ಕಾಶ್ಮೀರದ ಗಾಂದರ್‌ಬಲ್ ಜಿಲ್ಲೆಯ ಸೋನ್‌ಮಾರ್ಗ್ ಪ್ರದೇಶದಲ್ಲಿ ರವಿವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ವೈದ್ಯರೊಬ್ಬರು ಸೇರಿ ಒಟ್ಟು ಏಳು ಮಂದಿ ವಲಸಿಗ ಕಾರ್ಮಿಕರು ಮೃತಪಟ್ಟಿದ್ದರೆ, ಕೆಲವು ಕಾರ್ಮಿಕರು ಗಾಯಗೊಂಡಿದ್ದಾರೆ.
ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ನಡೆಯುತ್ತಿರುವ ಗಗನೀರ್‌ನಿಂದ ಸೋನ್‌ಮಾರ್ಗ್ ಸಂಪರ್ಕಿಸುವ ಸುರಂಗ ನಿರ್ಮಾಣ ಕಾರ್ಯದಲ್ಲಿ ನಿಯೋಜಿತರಾಗಿದ್ದ ಖಾಸಗಿ ಕಂಪನಿಯ ಕಾರ್ಮಿಕರ ಕ್ಯಾಂಪ್‌ಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಸೇನೆ ಮತ್ತು ಪೊಲೀಸರು ಈ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಶುಕ್ರವಾರವಷ್ಟೇ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಹತನಾದ ಬಿಹಾರ ಮೂಲದ ಕಾರ್ಮಿಕನ ಶವ ಪತ್ತೆಯಾಗಿತ್ತು.
ಸಿಎಂ ಒಮರ್ ಅಬ್ದುಲ್ಲಾ ಖಂಡನೆ:
ಈ ಭಯೋತ್ಪಾದಕ ದಾಳಿಯ ಕುರಿತು ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ “ನಿರಾಯುಧ ಅಮಾಯಕರ” ಮೇಲಿನ ಉಗ್ರ ದಾಳಿಯ ತೀವ್ರವಾಗಿ ಖಂಡಿಸಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. “ಸೋನಾಮಾರ್ಗ್ ಪ್ರದೇಶದ ಗಗಾಂಗಿರ್‌ನಲ್ಲಿ ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ಹೇಡಿತನದ ದಾಳಿ ಅತ್ಯಂತ ದುಃಖದ ಸಂಗತಿ . ಈ ಪ್ರದೇಶದಲ್ಲಿ ಮೂಲಸೌಕರ್ಯ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿರಾಯುಧ ಅಮಾಯಕ ಕಾರ್ಮಿಕರ ಮೇಲೆ ಉಗ್ರರ ದಾಳಿಯ ನಾನು ಬಲವಾಗಿ ಖಂಡಿಸುತ್ತೇನೆ ಹಾಗೂ ಮೃತಪಟ್ಟ ಕಾರ್ಮಿಕರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.