Jammu-Kashmir: ಮೂರು ಪ್ರತ್ಯೇಕ ಎನ್‌ಕೌಂಟರ್: 5 ಉಗ್ರರ ಹತ್ಯೆ
ಬಾರಾಮುಲ್ಲಾದಲ್ಲಿ ಕಾರ್ಯಾಚರಣೆ, ಪ್ರಧಾನಿ ಚುನಾವಣಾ ಸಭೆಗೂ ಮುನ್ನ ಈ ಘಟನೆ
Team Udayavani, Sep 15, 2024, 1:37 AM IST
ಶ್ರೀನಗರ: ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ ಜಮ್ಮು-ಕಾಶ್ಮೀರದಲ್ಲಿ ನಡೆದ 3 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 5 ಉಗ್ರ ರನ್ನು ಸದೆ ಬಡಿಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್ ಪ್ರದೇಶದ ಛಕ್ ಟೇಪರ್ ಕ್ರೀರಿಯಲ್ಲಿ ಶನಿವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಶುಕ್ರವಾರ ರಾತ್ರಿ ಕಥುವಾದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್Õ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೇ ಎನ್ ಕೌಂಟರ್ ನಡೆದ ಸ್ಥಳ ದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಚುನಾವಣೆ ಹೊಸ್ತಿಲಲ್ಲಿರುವ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೋದಿ ರ್ಯಾಲಿಗೆ ಕೆಲವೇ ಗಂಟೆಗಳ ಮುನ್ನ ಈ ಎನ್‌ಕೌಂಟರ್‌ಗಳು ನಡೆದಿವೆ.
ರಜೌರಿಯಲ್ಲಿ ಉಗ್ರರ ಒಳನುಸುಳುವಿಕೆ ವಿಫಲ: ಒಬ್ಬ ಯೋಧನಿಗೆ ಗಾಯ
ರಜೌರಿ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿನ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಒಳನುಸುಳಲು ಯತ್ನಿಸಿದ ಉಗ್ರರನ್ನು ಭದ್ರತಾ ಪಡೆ ಸಿಬಂದಿ ಹಿಮ್ಮೆಟ್ಟಿಸಿದ್ದಾರೆ. ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಭಯೋತ್ಪಾದಕರು ಒಳನುಸುಳಲು ಯತ್ನಿಸುತ್ತಿ ರುವ ಬಗ್ಗೆ ಗುಪ್ತಚರ ಮೂಲಗಳಿಂದ ಖಚಿತ ಮಾಹಿತಿ ಸಿಕ್ಕಿದ್ದ ಹಿನ್ನಲೆಯಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಕಾರ್ಯಾಚರಣೆ ವೇಳೆ ಭದ್ರತಾ ಸಿಬಂದಿ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಉಗ್ರರನ್ನು ಹಿಮ್ಮೆಟ್ಟಿಸಲಾಗಿದೆ. ಇದೇ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿ ಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ನೌಶೇರಾದಲ್ಲಿ ಕಳೆದ 1ವಾರದಲ್ಲಿ 2 ಬಾರಿ ಒಳ ನುಸುಳುವ ಪ್ರಯತ್ನಗಳು ನಡೆಸಿದ್ದು, ಸೆ.9ರಂದು ಇಬ್ಬರು ಉಗ್ರರನ್ನು ಭದ್ರತಾ ಪಡೆ ಕೊಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.