ಜೆಡಿಯು ಅಭ್ಯರ್ಥಿ ಮೇಲೆ ಗುಂಡಿನ ದಾಳಿ : ಚುನಾವಣೆಗೆ ಒಂದು ದಿನ ಇರುವಾಗಲೇ ನಡೆಯಿತು ಘಟನೆ
Team Udayavani, Feb 27, 2022, 8:54 PM IST
ಮಣಿಪುರ : ಮಣಿಪುರದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಜನತಾ ದಳ (ಯುನೈಟೆಡ್) ಅಭ್ಯರ್ಥಿಯ ಮೇಲೆ ಗುಂಡಿನ ದಾಳಿ ನಡೆದಿದ್ದು ಪರಿಣಾಮ ಅಭ್ಯರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಇಂಫಾಲ್ ಪೂರ್ವ ಜಿಲ್ಲೆಯ ಕ್ಷೇತ್ರಗಾವ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜನತಾ ದಳ-ಯುನೈಟೆಡ್ ಅಭ್ಯರ್ಥಿ ವಹೆಂಗ್‌ಬಮ್ ರೋಹಿತ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರ ವಿಧಾನಸಭೆ ಚುನಾವಣೆ ಫೆಬ್ರವರಿ 28 ರಂದು ಮೊದಲ ಹಂತದಲ್ಲಿ ಕ್ಷೇತ್ರಗಾವ್ ಸೇರಿದಂತೆ 37 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ರಾತ್ರಿ 11.30 ರ ಸುಮಾರಿಗೆ ಅಭ್ಯರ್ಥಿ ಸಿಂಗ್ ತನ್ನ ನಿವಾಸದಿಂದ ಸುಮಾರು 3 ಕಿಮೀ ದೂರದಲ್ಲಿರುವ ನಹರೂಪ್ ಮಖಾಪತ್‌ನಲ್ಲಿ ತನ್ನ ಕೆಲವು ಬೆಂಬಲಿಗರನ್ನು ಭೇಟಿಯಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ದುಷ್ಕರ್ಮಿಗಳು ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಅಭ್ಯರ್ಥಿಯನ್ನು ಕೂಡಲೇ ಇಂಫಾಲ್‌ನಲ್ಲಿರುವ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ : ಬೆಲಾರಸ್ ಗಡಿಯಲ್ಲಿ ರಷ್ಯಾ ಜೊತೆ ಮಾತುಕತೆಗೆ ಉಕ್ರೇನ್ ಒಪ್ಪಿಗೆ !
ದುಷ್ಕರ್ಮಿಗಳು ಎರಡು ದ್ವಿಚಕ್ರ ವಾಹನಗಳಲ್ಲಿ ಬೇರೆ ಬೇರೆ ದಾರಿ ಮೂಲಕ ಬಂದಿದ್ದು. ಸಿಂಗ್ ಜೊತೆಗಿದ್ದ ಭದ್ರತಾ ಸಿಬ್ಬಂದಿ ಮತ್ತು ಅವರ ಬೆಂಬಲಿಗರು ಪ್ರತಿಕ್ರಿಯಿಸುವ ಮೊದಲೇ, ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸದ್ಯ ರೋಹಿತ್ ಸಿಂಗ್ ಚಿಕಿತ್ಸೆಗೆ ಸ್ಪಂಧಿಸಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶವಿರುವುದರಿಂದ ಸಿಂಗ್ ಅವರನ್ನು ಗುರಿಯಾಗಿಸಲಾಗಿದೆ ಎಂದು ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರು ಹೇಳಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.