ಮೈತ್ರಿಯಲ್ಲಿ ಕದನ ವಿರಾಮ


Team Udayavani, May 15, 2019, 6:00 AM IST

samara

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ನಡುವಿನ ವಾಕ್ಸಮರ-ಟ್ವೀಟ್‌ ಸಮರಕ್ಕೆ ಮಂಗಳವಾರ ಅಲ್ಪ ವಿರಾಮ ಬಿದ್ದಿದ್ದು, “ಮುಂದಿನ ಮುಖ್ಯಮಂತ್ರಿ’ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಜತೆಗೆ ತನ್ನ ಅವಧಿಯ ಪ್ರಮುಖ ಯೋಜನೆಗಳ ಬಗ್ಗೆಯೂ ಪ್ರಸ್ತಾವಿಸಿ ಕುಟುಕಿದ್ದಾರೆ.

ಸಿದ್ದರಾಮಯ್ಯ ಮತ್ತು ವಿಶ್ವನಾಥ್‌ ನಡುವಿನ ವಾಗ್ವಾದ ಮತ್ತು ಟ್ವೀಟ್‌ ಸಮರ ಕುರಿತು ರಾಜ ಕೀಯ ವಲಯಗಳಲ್ಲಿ ನಾನಾ ರೀತಿಯ ವಾಖ್ಯಾನ ಗಳಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ಹೈಕಮಾಂಡ್‌ ಸಹ ಮಧ್ಯಪ್ರವೇಶಿಸಿ ಮನವಿ ಮಾಡಿದ್ದು, ಟ್ವೀಟ್‌ ಮೂಲಕವೇ ವಿವಾದಕ್ಕೆ ತೆರೆ ಬಿದ್ದಿದೆ.

ಕುಮಾರಸ್ವಾಮಿಯೊಂದಿಗೆ ಸಿದ್ದು ದೂರವಾಣಿ ಮೂಲಕ ಮಾತನಾಡಿ ತನ್ನ ಅಸಮಾಧಾನ ಹೊರ ಹಾಕಿದ್ದು, ಕುಮಾರಸ್ವಾಮಿಯವರು ಸಮಾಧಾನ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದರ ನಡುವೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಎಚ್‌. ವಿಶ್ವನಾಥ್‌ ಹೇಳಿಕೆಗಳ ಕುರಿತು ಬಹಿರಂಗವಾಗಿ ಚರ್ಚೆ ಮಾಡುವುದು ಸರಿಯಲ್ಲ. ಚುನಾವಣೆ ಬಳಿಕ ಸಮನ್ವಯ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಜನರು ಆಶೀರ್ವಾದ ಮಾಡಿದರೆ ಮತ್ತೆ ಸಿಎಂ ಆಗಬಾರದಾ? ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ನಾನು ಸಿಎಂ ಆಗುತ್ತೇನೆಂದು ಎಲ್ಲೂ ಹೇಳಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಸಹ ಮಾಡಿ, ಸಭೆ -ಸಮಾರಂಭಗಳಲ್ಲಿ ಜನರು ನೀವೇ ನಮ್ಮ ಮುಂದಿನ ಸಿಎಂ ಎಂದು ಕೂಗುತ್ತಾರೆ. ಆಗ ಮತ್ತೆ ತಾವೆಲ್ಲ ನಮ್ಮ ಪಕ್ಷಕ್ಕೆ ಬಹುಮತ ನೀಡಿದರೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅವರಿಗೆ ಹೇಳಿದ್ದೇನೆ. ಅಭಿಮಾನದಿಂದ ನೀವು ಮುಖ್ಯಮಂತ್ರಿಯಾಗಿ ಎಂದು ಹೇಳುವವರ ಬಾಯಿ ಮುಚ್ಚಿಸಲಾಗುತ್ತದೆಯೇ? ಎಂದಿದ್ದಾರೆ.

ಸಮ್ಮಿಶ್ರ ಸರಕಾರದ ಸಿಎಂ ಆಗಿ ಕುಮಾರ ಸ್ವಾಮಿಯವರು ಇದ್ದಾರೆ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಅಪ್ರಸ್ತುತ ಎಂದು ಈ ಕುರಿತಾಗಿನ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಜತೆಗೆ, ನನ್ನ ಯಾವ ಕಾರ್ಯಕ್ರಮವೂ ಹೆಸರು ಪಡೆದುಕೊಳ್ಳಲು ಮಾಡಿದ ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ… ಇವುಗಳನ್ನು ಯಾವುದೇ ಸರಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು ಎಂದು ಟ್ವೀಟ್‌ ಮೂಲಕವೇ ಕುಟುಕಿದ್ದಾರೆ.

ಗೆಳೆಯ ಜಿ.ಟಿ. ದೇವೇಗೌಡ ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್‌ ವಿರುದ್ಧ ಮಾತನಾಡತೊಡಗಿದ್ದರು.

ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಹೇಳುವ ಮೂಲಕ ಟಾಂಗ್‌ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ 104 ಸೀಟು ಬಂದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಅನಂತರ ಮೂರೇ ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಷ್ಟಾದರೂ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹಲವು ಬಾರಿ ಹೇಳಿದ್ದಾರೆ. ಈಗೀಗ ಇಂತಹ ಹೇಳಿಕೆಗೆ ಜನ ನಗಲು ಆರಂಭ ಮಾಡಿದ್ದಾರೆ ಎಂದು ಯಡಿಯೂರಪ್ಪ ಅವರನ್ನು ಲೇವಡಿ ಮಾಡಿದ್ದಾರೆ.

ಸಿದ್ದು ಬೇಸರ, ಎಚ್‌ಡಿಕೆ ಸಮಾಧಾನ
ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಹುಬ್ಬಳ್ಳಿಯ ಒಂದೇ ಹೊಟೇಲ್‌ನಲ್ಲಿ ವಾಸ್ತವ್ಯ ಇದ್ದರೂ ಮುಖಾಮುಖೀ ಭೇಟಿಯಾಗಲಿಲ್ಲ, ಆದರೆ ದೂರವಾಣಿ ಮೂಲಕ ಕುಮಾರಸ್ವಾಮಿ ಜತೆ ಮಾತನಾಡಿದ ಸಿದ್ದರಾಮಯ್ಯ ತೀವ್ರ ಅಸಮಾಧಾನ ಹೊರ ಹಾಕಿದರು. ಇಂತಹ ಹೇಳಿಕೆಗಳು ನಿಮ್ಮ ರಾಜ್ಯಾಧ್ಯಕ್ಷರಿಗೆ ಶೋಭೆ ತರುತ್ತಾ? ಈಗ ಈ ರೀತಿ ಮಾತನಾಡಿರುವವರು ಇನ್ನು ಲೋಕಸಭೆ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿರಬಹುದು. ಇಂಥದ್ದು ಸರಿಯಲ್ಲ ಎಂದು ಹೇಳಿದರು. ಇದಕ್ಕೆ ಕುಮಾರಸ್ವಾಮಿಯವರು, ಬೇಸರ ಮಾಡಿಕೊಳ್ಳಬೇಡಿ, ನಾನು ಸರಿಪಡಿಸುತ್ತೇನೆ, ವಿಶ್ವನಾಥ್‌ ಜತೆ ಮಾತನಾಡುತ್ತೇನೆ ಎಂದು ಸಮಾಧಾನಪಡಿಸಿದರು ಎಂದು ಹೇಳಲಾಗಿದೆ.

ಸಿದ್ದು ಪರ ಬ್ಯಾಟಿಂಗ್‌
ಇಷ್ಟೆಲ್ಲದರ ನಡುವೆಯೂ ಸಿದ್ದರಾಮಯ್ಯ ಪರ ಕಾಂಗ್ರೆಸ್‌ನ ಮಾಜಿ ಶಾಸಕರು ಬ್ಯಾಟಿಂಗ್‌ ಮುಂದುವರಿಸಿದ್ದಾರೆ. ಕೆ.ಆರ್‌.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌, ಐದು ವರ್ಷ ಗಳ ಕಾಲ ಸಿದ್ದರಾಮಯ್ಯ ಒಂದೇ ಒಂದು ಹಗರಣಕ್ಕೆ ಸಿಲುಕದೆ ಪ್ರಾಮಾಣಿಕವಾಗಿ ಆಡಳಿತ ನಡೆಸಿ¨ªಾರೆ. ಚುನಾವಣೆ ಸಮಯದಲ್ಲಿ ತಾವು ಕೊಟ್ಟ ಎಲ್ಲ ಆಶ್ವಾಸನೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ. ಹಾಗಾಗಿ ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗಲಿ ಎಂದು ಬಯಸುವುದರಲ್ಲಿ ತಪ್ಪೇನಿಲ್ಲ.

ನಮ್ಮಲ್ಲಿ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಇ¨ªಾರೆ. ಅಂತಿಮವಾಗಿ ರಾಹುಲ್‌ ಗಾಂಧಿ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.