ಎರಡು ಮೂರು ತಿಂಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ: ಎಚ್‌ಡಿಡಿ
ಅತೃಪ್ತ ಪರಿಷತ್ ಸದಸ್ಯ ಕರೆಸಿ ಸಮಾಧಾನ ಮಾಡಿದ ಮಾಜಿ ಪ್ರಧಾನಿ
Team Udayavani, Oct 31, 2019, 9:47 PM IST
ಬೆಂಗಳೂರು:ಎರಡು-ಮೂರು ತಿಂಗಳುಗಳಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿದ್ದ ಪರಿಷತ್ ಸದಸ್ಯರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತನಾಡಿದ ದೇವೇಗೌಡ ಅವರು, ನಿಮಗೆ ಬೇಸರ ಆಗಿರುವುದು ಗೊತ್ತಿದೆ. ತಪ್ಪಾಗಿದೆ ನಿಜ. ನಾನೇ ಸರಿಪಡಿಸುತ್ತೇನೆ. ಮತ್ತೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ನಿಮಗೆಲ್ಲ ಒಳ್ಳೆಯದಾಗಲಿದೆ ಎಂದು ಹೇಳಿದರು.
ಮುಂದಿನ ವಾರ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ವಿಧಾನಪರಿಷತ್ ಸದಸ್ಯರ ಸಭೆ ನಡೆಸಿ ಎಲ್ಲವನ್ನೂ ಬಗೆಹರಿಸಲಾಗುವುದು. ನೀವೆಲ್ಲ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೀರಿ, ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು ಎಂದು ತಿಳಿದು ಬಂದಿದೆ.
ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ, ಆಪ್ಪಾಜಿಗೌಡ, ಟಿ.ಎ.ಶರವಣ, ತೂಪಲ್ಲಿ ಚೌಡರೆಡ್ಡಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮ ಮೇಲೆ ನಮಗೆ ಯಾವುದೇ ಬೇಸರವಿಲ್ಲ. ಆದರೆ ಅಧಿಕಾರ ಇದ್ದಾಗ ಕುಮಾರಸ್ವಾಮಿ ಮತ್ತು ರೇವಣ್ಣ ಅವರು ಪರಿಷತ್ ಸದಸ್ಯ ಮನವಿಗೆ ಸ್ಪಂದಿಸಿಲ್ಲ ಎಂದು ಮೇಲ್ಮನೆ ಸದಸ್ಯರು ತಮ್ಮ ನೋವು ತೋಡಿಕೊಂಡರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.