ಜಿಂದಾಲ್‌ಗೆ ಜಮೀನು: ಇಂದು ನಿರ್ಧಾರ? ಇಂದಿನ ಸಂಪುಟ ಸಭೆಯಲ್ಲಿ ಪರಭಾರೆ ಬಗ್ಗೆ ಚರ್ಚೆ
Team Udayavani, May 27, 2021, 7:20 AM IST
ಬೆಂಗಳೂರು: ರಾಜ್ಯ ಸರಕಾರ ಜಿಂದಾಲ್ ಕಬ್ಬಿಣ ಮತ್ತು ಉಕ್ಕು ಸಂಸ್ಥೆಗೆ ರಾಜ್ಯ ಸರಕಾರ ಕಡಿಮೆ ದರದಲ್ಲಿ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಅಲ್ಲದೇ ಆನಂದ್ ಸಿಂಗ್ ಸೇರಿದಂತೆ ಕೆಲವು ಸಚಿವರು ಸರಕಾರದ ನಿರ್ಧಾರವನ್ನು ವಾಪಸ್ ಪಡೆಯುವಂತೆ ಸಿಎಂಗೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
ರಾಜ್ಯ ಸರಕಾರ ಜಿಂದಾಲ್ ಸಂಸ್ಥೆಗೆ ಕಡಿಮೆ ದರದಲ್ಲಿ ಜಮೀನು ಮಾರಾಟ ಮಾಡಿರುವುದಕ್ಕೆ ಪಕ್ಷದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ ಸೇರಿದಂತೆ ಅನೇಕ ಶಾಸಕರು ಕಡಿಮೆ ದರದಲ್ಲಿ ಜಮೀನು ಮಾರಾಟ ಮಾಡಿರುವುದರಿಂದ ಪಕ್ಷ ಹಾಗೂ ಸರಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದಿದ್ದಾರೆ. ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಸುಮಾರು 15ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್‌ಗೂ ದೂರು ಸಲ್ಲಿಸಿ, ಸರಕಾರದ ನಿರ್ಧಾರ ವಾಪಸ್ ಪಡೆಯಲು ಮುಖ್ಯಮಂತ್ರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೆ ಆಗ್ರಹ
ಜಿಂದಾಲ್‌ಗೆ ಜಮೀನು ನೀಡಿರುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಶೀರ್ಘವೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬಿಜೆಪಿ ಶಾಸಕರು ಪಕ್ಷದ ನಾಯಕರಿಗೆ ಆಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಜೂ. 7ರಂದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಸಿಎಂ ಸ್ಪಷ್ಟ ಪಡಿಸಲಿ: ಸಿ.ಟಿ. ರವಿ
ಜಿಂದಾಲ್‌ಗೆ ಕಡಿಮೆ ದರದಲ್ಲಿ ಜಮೀನು ನೀಡಿರುವ ಬಗ್ಗೆ ರಾಜ್ಯದ ಜನತೆ ಹಾಗೂ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಸಂಶಯಗಳು ಮೂಡಿವೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟೀಕರಣ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಉದಯವಾಣಿಯೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೈತ್ರಿ ಸರಕಾರ ತೆಗೆದುಕೊಂಡ ತೀರ್ಮಾನದ ವಿರುದ್ಧ ನಮ್ಮ ಪಕ್ಷದ ರಾಜ್ಯಾಧ್ಯಕ್ಷರೂ ಹಾಗೂ ವಿಪಕ್ಷದ ನಾಯಕರೂ ಆಗಿದ್ದ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ಹೋರಾಟ ಮಾಡಿದ್ದೆವು. ಈಗ ಯಡಿಯೂರಪ್ಪ ಅವರೇ ಜಮೀನು ನೀಡಿದ್ದಾರೆ. ಈ ಬಗ್ಗೆ ಪಕ್ಷದ ಶಾಸಕರು ಹಾಗೂ ಸಾರ್ವಜನಿಕರಲ್ಲಿ ಪ್ರಶ್ನೆಗಳು, ಸಂಶಯಗಳು ಮೂಡಿವೆ. ಅವುಗಳಿಗೆ ಉತ್ತರಿಸುವ ಹೊಣೆ ಮುಖ್ಯಮಂತ್ರಿಗಿದೆ ಎಂದು ತಿಳಿಸಿದ್ದಾರೆ.
ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, ಊಹಾ ಪೋಹದ ಸುದ್ದಿಗಳಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನಾನು ಪ್ರತಿಕ್ರಿಯಿಸು ವುದಿಲ್ಲ. ಯಾರಿಗಾದರೂ ಸಮಸ್ಯೆ ಇದ್ದರೆ, ಪಕ್ಷದ ವೇದಿಕೆ ಒಳಗೆ ಚರ್ಚಿಸ ಬೇಕು. ಯಾವಾಗ ಯಾವ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದನ್ನು ನಮ್ಮ ಪಕ್ಷದ ಸಂಸದೀಯ ಮಂಡಳಿ ತೀರ್ಮಾನಿಸುತ್ತದೆ. ಯಡಿಯೂರಪ್ಪ 2 ವರ್ಷ ಅವಧಿ ಪೂರ್ಣಗೊಳಿಸುತ್ತಾರೋ ಇಲ್ಲವೊ ಎಂಬ ಪ್ರಶ್ನೆಗೆ, ಪಕ್ಷದ ಸಂಸದೀಯ ಮಂಡಳಿ ತೀರ್ಮಾನ ಮಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.