ಬಟ್ಲರ್ ಆರ್ಭಟಕ್ಕೆ ಬೆಚ್ಚಿಬಿದ್ದ ಮುಂಬೈ : ರಾಜಸ್ಥಾನಕ್ಕೆ ಭರ್ಜರಿ ಗೆಲುವು
Team Udayavani, Apr 2, 2022, 8:58 PM IST
ಮುಂಬೈ : ಜೋಸ್ ಬಟ್ಲರ್ ಆರ್ಭಟದ ಬ್ಯಾಟಿಂಗ್ ಎದುರು ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ವೀರೋಚಿತ ಸೋಲನ್ನು ಅನುಭವಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ನಿಗದಿತ ಇಪ್ಪತ್ತು ಓವರ್‌ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 193 ರನ್ ಗಳಿಸಿತು.
ಈ ಬೃಹತ್ ಮೊತ್ತ ಬೆನ್ನಟ್ಟಿದ ಮುಂಬೈ ತಂಡದ ಗೆಲುವಿಗಾಗಿ ಕೀರಾನ್ ಪೋಲಾರ್ಡ್ 22 ರನ್ (24 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಹೋರಾಡಿದರು ಕೂಡ ಗೆಲುವು ದಕ್ಕಿಸಿಕೊಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಂಬೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 170 ರನ್ ಪೇರಿಸಿ 23 ರನ್ ಅಂತರದಿಂದ ರಾಜಸ್ಥಾನ ತಂಡಕ್ಕೆ ತಲೆ ಬಾಗಿತು.
ರಾಜಸ್ಥಾನ ತಂಡದ ಪರ ಯಶಸ್ವಿ ಜೈಸ್ವಾಲ್ 1 ಮತ್ತು ದೇವದತ್ ಪಡಿಕ್ಕಲ್ 7 ರನ್ ಸಿಡಿಸಿ ಔಟ್ ಆದರು. ಬಳಿಕ ಜೊತೆಯಾದ ಜೋಸ್ ಬಟ್ಲರ್ ಮತ್ತು ಸಂಜು ಸ್ಯಾಮ್ಸನ್ 3ನೇ ವಿಕೆಟ್‍ಗೆ 82 ರನ್ (50 ಎಸೆತ) ಜೊತೆಯಾಟವಾಡಿ ರಾಜಸ್ಥಾನ ತಂಡಕ್ಕೆ ನೆರವಾದರು. ಸಂಜು ಸ್ಯಾಮ್ಯನ್ 30 ರನ್ (21 ಎಸೆತ, 1 ಬೌಂಡರಿ, 3 ಸಿಕ್ಸ್) ಸಿಡಿಸಿ ಔಟ್ ಆದರು.
ಬಳಿಕ ಒಂದಾದ ಬಟ್ಲರ್ ಮತ್ತು ಶಿಮ್ರಾನ್ ಹೆಟ್ಮೆಯರ್ ಮುಂಬೈ ಆಟಗಾರರ ಬೆವರಿಸಿದರು, ಬಟ್ಲರ್ 100 ರನ್ (68 ಎಸೆತ) ಗಳಿಸಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ 15ನೇ ಆವೃತ್ತಿಯ ಮೊದಲ ಶತಕ ಸಿಡಿಸಿ ಮಿಂಚಿದರು.
ಇದನ್ನೂ ಓದಿ : ಅನ್ನ,ಆಹಾರ, ಧರ್ಮದ ವಿಚಾರದಲ್ಲಿ ‘ಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಇದೆಯಾ? : HDK
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.