ಟ್ರಂಪ್‌ಗೆ ಮತ್ತೂಂದು ಆಘಾತ : ಎಚ್-1ಬಿ ವೀಸಾ ನಿಬಂಧನೆಗಳಿಗೆ ಕೋರ್ಟ್ ತಡೆ
Team Udayavani, Dec 2, 2020, 5:44 PM IST
ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಮತ್ತೂಂದು ಆಘಾತ ಉಂಟಾಗಿದೆ.
ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳಿಗಾಗಿ ಇರುವ ಎಚ್-1ಬಿ ವೀಸಾ ಹೇರಲಾಗಿದ್ದ ನಿಬಂಧನೆಗಳಿಗೆ ಉತ್ತರ ಕ್ಯಾಲಿಫೋರ್ನಿಯಾ ಜಿಲ್ಲೆಯ ನ್ಯಾಯಾಧೀಶ ಜೆಫ್ರಿ ಎಸ್.ವೈಟ್ ತಡೆಯಾಜ್ಞೆ ನೀಡಿದ್ದಾರೆ. ಇದರಿಂದಾಗಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳು ನಿಟ್ಟುಸಿರು ಬಿಡುವಂತಾಗಿದೆ.
ಟ್ರಂಪ್ ಸರ್ಕಾರ ಎಚ್-1 ಬಿ ವೀಸಾ ಹೊಂದಿರುವವರಿಗೆ ಅಮೆರಿಕದ ಕಂಪನಿಗಳು ಹೆಚ್ಚಿನ ವೇತನ ನೀಡಬೇಕು ಎಂದು ಆದೇಶಿಸಿತ್ತು.
ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಕೂಡ ಟ್ರಂಪ್ ಸರ್ಕಾರದ ಕೆಲವು ನಿಯಮಗಳನ್ನು ಪರಿಶೀಲಿಸಿ ಜಾರಿ ಮಾಡುವುದಾಗಿ ಹೇಳಿದ್ದರು. ಅದಕ್ಕೆ ಪೂರಕವಾಗಿ ಈ ತೀರ್ಪು ಪ್ರಕಟವಾಗಿದೆ.
ಇದನ್ನೂ ಓದಿ:ಏಕತಾ ಪ್ರತಿಮೆ ಪ್ರವೇಶ ಶುಲ್ಕ ಸಂಗ್ರಹಿಸುವ ಸಿಬ್ಬಂದಿಯಿಂದ 5.24 ಕೋಟಿ ರೂ. ವಂಚನೆ
ಮತ್ತೂಂದು ಮಹತ್ವದ ಆದೇಶದಲ್ಲಿ ನ್ಯಾಯಾಧೀಶರು ಎಚ್-1ಬಿ ವೀಸಾ ಅರ್ಹತೆಯನ್ನು ಅಮೆರಿಕದ ಕಂಪನಿಗಳೇ ನಿರ್ಧರಿಸಬೇಕು ಎಂಬ ಆದೇಶವನ್ನೂ ರದ್ದುಗೊಳಿಸಿದ್ದಾರೆ. ಇದರ ಜತೆಗೆ ವೇತನಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ನೀಡಿದ್ದ ಸೂಚನೆಯೂ ಮಾನ್ಯವಾದುದಲ್ಲ ಎಂದು ಮಂಗಳವಾರ ತೀರ್ಪು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.