Haryana Results: ಬಿಜೆಪಿಯ ಕ್ಯಾಪ್ಟನ್ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!
ಎರಡು ಸಾವಿರ ಮತಗಳ ಅಂತರದ ಮುನ್ನಡೆ ಸಾಧಿಸಿದ್ದರು.
Team Udayavani, Oct 8, 2024, 11:44 AM IST
ಚಂಡೀಗಢ್: ಹರ್ಯಾಣ ವಿಧಾನಸಭೆಯ ಜುಲಾನಾ (Julana) ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿನೇಶ್ ಫೋಗಾಟ್ (Vinesh Phogat) ತಮ್ಮ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಕ್ಯಾಪ್ಟನ್ ಯೋಗೇಶ್ ಬೈರಾಗಿ ತೀವ್ರ ಪೈಪೋಟಿ ನಡೆದಿದೆ.
ಮಂಗಳವಾರ (ಅ.08) ಬೆಳಗ್ಗೆ 8ಗಂಟೆಗೆ ಹರ್ಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭಗೊಂಡಿದ್ದು, ಮೊದಲ ಸುತ್ತಿನ ಮತಎಣಿಕೆಯಲ್ಲಿ ಕಾಂಗ್ರೆಸ್ ನ ವಿನೇಶ್ ಫೋಗಾಟ್, ಬಿಜೆಪಿಯ ಯೋಗೇಶ್ ಅವರಿಗಿಂತ ಕೇವಲ 200 ಮತಗಳ ಅಂತರದ ಮುನ್ನಡೆ ಸಾಧಿಸಿದ್ದರು.
2ನೇ ಸುತ್ತಿನ ಮತಎಣಿಕೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬೈರಾಗಿ ಅವರು ಕಾಂಗ್ರೆಸ್ ನ ವಿನೇಶ್ ಫೋಗಾಟ್ ಅವರಿಗಿಂತ ಎರಡು ಸಾವಿರ ಮತಗಳ ಅಂತರದ ಮುನ್ನಡೆ ಸಾಧಿಸಿದ್ದರು.
ನಾಲ್ಕನೇ ಸುತ್ತಿನ ಮತಎಣಿಕೆಯಲ್ಲೂ ಕಾಂಗ್ರೆಸ್ ನ ವಿನೇಶ್ ಫೋಗಾಟ್ 3,000 ಮತಗಳ ಹಿನ್ನಡೆ ಕಂಡಿದ್ದು, ಬಿಜೆಪಿಯ ಕ್ಯಾಪ್ಟನ್ ಬೈರಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಿನ್ನಡೆ ಅನುಭವಿಸುತ್ತಿರುವುದನ್ನು ಕಂಡ ಫೋಗಾಟ್ ಜಿಂದ್ ಮತಎಣಿಕೆ ಕೇಂದ್ರದಿಂದ ಹೊರ ನಡೆದಿರುವುದಾಗಿ ವರದಿ ತಿಳಿಸಿದೆ.
90 ಸದಸ್ಯರ ಬಲದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 48 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೀವ್ರ ಹಿನ್ನಡೆ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.