ಕಿರಿಯರ ತರಗತಿ ಆರಂಭ ವಿಳಂಬ?· ಹಿ.ಪ್ರಾಥಮಿಕ,ಪ್ರೌಢ ಶಾಲೆ,ದ್ವಿ.ಪಿಯು ಆರಂಭಕ್ಕೆ ಯತ್ನ
ಅರೋಗ್ಯ ಇಲಾಖೆಯ ಒಪ್ಪಿಗೆಗೆ ಕಾಯುತ್ತಿದೆ ಶಿಕ್ಷಣ ಇಲಾಖೆ
Team Udayavani, May 24, 2020, 6:15 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ ಯಾದರೂ ಆರೋಗ್ಯ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಕೋಶದಿಂದ ಹಸುರು ನಿಶಾನೆ ಸಿಕ್ಕಿಲ್ಲ.
ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಸಂಬಂಧಿಸಿ ದಂತೆ ಹಲವು ರೀತಿಯ ಚರ್ಚೆಗಳು ಆರಂಭವಾಗಿವೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಈಗಾಗಲೇ ಹಲವು ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಶಾಲೆ ಆರಂಭ ಯಾವಾಗ ಎನ್ನುವುದು ಸ್ಪಷ್ಟವಾಗಿಲ್ಲ. ಆರಂಭಿಸಿದರೂ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳನ್ನು ಇನ್ನಷ್ಟು ವಿಳಂಬವಾಗಿ ಆರಂಭಿಸುವ ಬಗ್ಗೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ.
ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ
ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿ ಯಾವಾಗ ಆರಂಭಿಸಿದರೆ ಸೂಕ್ತ ಎಂಬ ಬಗ್ಗೆ ಸಾರ್ವ ಜನಿಕರಿಂದ ಅಭಿಪ್ರಾಯ ಸಂಗ್ರಹವನ್ನು ಶಿಕ್ಷಣ ಸಚಿವರೇ ಮಾಡಿದ್ದಾರೆ. ಬಹುತೇಕರು ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳನ್ನು ವಿಳಂಬವಾಗಿ ಆರಂಭಿಸುವಂತೆ ಸಲಹೆ ನೀಡಿದ್ದಾರೆ.
ಹೀಗಾಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳನ್ನು ವಿಳಂಬವಾಗಿ ತೆರೆಯುವ ನಿಟ್ಟಿನಲ್ಲಿ ರೂಪುರೇಷೆಗಳು ಸಿದ್ಧವಾಗುತ್ತಿವೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ಖಚಿತಪಡಿಸಿವೆ.
ತರಗತಿ ಆರಂಭ ಸಂಬಂಧ ಶಿಕ್ಷಣ ಇಲಾಖೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಕೇಂದ್ರದ ಮಾನವ ಸಂಪದಭಿವೃದ್ಧಿ ಸಚಿವಾಲಯದ ನಿರ್ದೇಶನವನ್ನು ಪಾಲಿಸುವ ಜತೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣ ಕೋಶ ನೀಡುವ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುತ್ತದೆ.
ಜತೆಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕ ಅನಂತರವೇ ತರಗತಿ ಆರಂಭಿಸಲು ಸಾಧ್ಯ. ಯಾವ ರೀತಿಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದೂ ಆರೋಗ್ಯ ಇಲಾಖೆ ಸೂಚನೆ ನೀಡಲಿದೆ. ಅದರಂತೆ ಶೈಕ್ಷಣಿಕ ತರಗತಿ ಆರಂಭಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶೈಕ್ಷಣಿಕ ವರ್ಷದ ಆರಂಭ ಸಂಬಂಧ
ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರಕಾರದ ಅನುಮತಿ ಇಲ್ಲದೆ ಶಾಲೆ ಆರಂಭಿಸಲು ಸಾಧ್ಯವಿಲ್ಲ. ಹೀಗಾಗಿ ಹಲವು ಆಯಾಮಗಳ ಚರ್ಚೆ ನಡೆಸಿದ್ದೇವೆ. ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
-ಎಸ್.ಆರ್. ಉಮಾಶಂಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ
-ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.