ಕಾಕ್ಲಿಯಾರ್ ಇಂಪ್ಲಾಂಟ್: ಈ ವರ್ಷ 115 ಶಸ್ತ್ರಚಿಕಿತ್ಸೆ
Team Udayavani, Mar 3, 2023, 7:12 AM IST
ಬೆಂಗಳೂರು: ರಾಜ್ಯ ಸರಕಾರದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂಥ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರತಿ ವರ್ಷ ಮಾ. 3ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಎಲ್ಲ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆ ತರಲಾಗಿದೆ ಎಂದರು.
2,00,305 ಮಂದಿಗೆ ಶ್ರವಣ ದೋಷ
ರಾಜ್ಯದಲ್ಲಿ 2008-09ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾÃಣ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲ ಜಿÇÉೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಎನ್‌ಪಿಪಿಸಿಡಿ ಕಾರ್ಯಕ್ರಮ ವಿಭಾಗದಿಂದ 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲ ಇ.ಎನ್.ಟಿ. ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.