ಗ್ರಾಮ ಪಂಚಾಯತ್ ಚುನಾವಣೆ : ಕಲಬುರಗಿಯಲ್ಲಿ ಶೇ.42.7ರಷ್ಟು ಮತದಾನ

Team Udayavani, Dec 22, 2020, 3:23 PM IST

ಗ್ರಾಮ ಪಂಚಾಯತ್ ಚುನಾವಣೆ : ಕಲಬುರಗಿಯಲ್ಲಿ ಶೇ.42.7ರಷ್ಟು ಮತದಾನ

ಕಲಬುರಗಿ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಆರು ತಾಲೂಕುಗಳಲ್ಲಿ 126 ಗ್ರಾಮ ಪಂಚಾಯಿತಿಗಳ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆಗೆ ವೇಳೆ ಶೇ.42.7ರಷ್ಟು ಮತದಾನವಾಗಿದೆ.

ಕಲಬುರಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ ಹಾಗೂ ಶಹಾಬಾದ್ ತಾಲೂಕುಗಳಲ್ಲಿ 2,096 ಸ್ಥಾನಗಳಿಗೆ ಬಿರುಸಿನಿಂದ ಮತದಾನ ನಡೆಯುತ್ತಿದೆ. 141 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, 2,096 ಸ್ಥಾನಗಳಿಗೆ 5,876 ಜನ ಕಣದಲ್ಲಿದ್ದಾರೆ.

ಬೆಳಿಗ್ಗೆ 7ರಿಂದ ಮತದಾನ ಶುರುವಾಗಿದ್ದು, ಬೆಳಿಗ್ಗೆಯಿಂದಲೇ ಗ್ರಾಮಸ್ಥರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಅಲ್ಲದೇ, ಕಲಬುರಗಿ ಪಟ್ಟಣದಲ್ಲಿ ವಾಸವಾಗಿರುವ ನಗರವಾಸಿಗಳು, ಕೂಲಿ ಅರಸಿ ಬೆಂಗಳೂರು, ಮುಂಬೈ, ಪುಣೆ ಮುಂತಾದ ನಗರಗಳಿಗೆ ತೆರಳಿದ್ದ ಗ್ರಾಮಸ್ಥರು ಮತದಾನಕ್ಕಾಗಿಯೇ ಹಳ್ಳಿಗಳಿಗೆ ಬಂದಿದ್ದಾರೆ.

ಹಲವು ಕಡೆಗಳಲ್ಲಿ ತೀವ್ರ ಜಿದ್ದಾಜಿದ್ದಿನ ಏರ್ಪಟ್ಟಿದ್ದು, ಅಭ್ಯರ್ಥಿಗಳು, ಅಭ್ಯರ್ಥಿಗಳ ಕುಟುಂಬದವರು ಮತದಾರರ ಮನ ಸೆಳೆಯಲು ಕೊನೆ ಹಂತದ ಕಸರತ್ತು ನಡೆಸುತ್ತಿರುವುದು ಗ್ರಾಮಗಳಲ್ಲಿ ಕಂಡು ಬರುತ್ತಿದೆ.

ಕಲಬುರಗಿ ತಾಲೂಕಿನ ಕರಿಭೋಸಗಾ, ಪಟ್ಟಣ ಗ್ರಾಮಗಳು ಹಾಗೂ ಆಳಂದ ತಾಲೂಕಿನ ಕಡಗಂಚಿ, ನರೋಣಾ, ಶಹಾಬಾದ್ ತಾಲೂಕಿನ ಮರತೂರ ಸೇರಿ ಹಲವು ಗ್ರಾಮಗಳಲ್ಲಿ ಜನರು ತಂಡೋಪತಂಡವಾಗಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ. ವೃದ್ಧರು, ಮಹಿಳೆಯರು, ಯುವಕ-ಯುವತಿಯರು ಮತದಾನದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ;ಲಂಡನ್ ನಿಂದ ಬಂದ ಮಹಿಳೆಗೆ ಕೋವಿಡ್ ಭೀತಿ: ಬೆಳಗಾವಿ ಜನರಲ್ಲಿ ಹೆಚ್ಚಿದ ಆತಂಕ

ಅದರಲ್ಲೂ ಈ ಬಾರಿ ಅನೇಕ ಕಡೆಗಳಲ್ಲಿ ಯುವಕರೇ ಅತಿ ಹೆಚ್ಚಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹೀಗಾಗಿ ಚುನಾವಣೆ ಪೈಪೋಟಿಯಿಂದ ಕೂಡಿದೆ. ಯುವ ಮತದಾರರು, ಮೊದಲ ಬಾರಿ ಮತ ಚಲಾವಣೆ ಮಾಡುವವರ ಸಾಲೇ ಮತಗಟ್ಟೆಗಳು ಮುಂದೆ ಇದೆ. ಜತೆಗೆ ಮನೆಯಲ್ಲಿನ ಹಿರಿಯರನ್ನು ಕರೆದುಕೊಂಡು ಬಂದು ಮತ ಚಲಾವಣೆ ಮಾಡಿಸುತ್ತಿದ್ದಾರೆ.

ಪ್ರಸಕ್ತ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನಿಂತಿದ್ದಾರೆ. ಈ ಹಿಂದೆ ನಿಂತು ಚುನಾವಣೆಯಲ್ಲಿ ಗೆದ್ದರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗ ಯುವಕರು ಸ್ಪರ್ಧೆ ಮಾಡಿರುವುದರಿಂದ ಮತ್ತಷ್ಟು ಅಭಿವೃದ್ಧಿಯ ನಿರೀಕ್ಷೆ ಇದೆ. ಅಭಿವೃದ್ಧಿ ಪರವಾದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದ್ದೇವೆ. ಮೇಲಾಗಿ ಮತದಾನ ನಮ್ಮ ಹಕ್ಕು ಅದನ್ನು ನಾವು ಇವತ್ತು ಚಲಾವಣೆ ಮಾಡಿದ್ದೇವೆ ಎಂದು ಯುವ ಮತದಾರರಾದ ಜ್ಯೋತಿ, ಅಂಬಿಕಾ, ಪ್ರಿಯಾ, ಅಭಿಷೇಕ್ ಕುಮಾರ್ ಹೇಳಿದರು.

ವಾಹನಗಳ ವ್ಯವಸ್ಥೆ: ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳು ತಮ್ಮ ಗ್ರಾಮದಿಂದ ದುಡಿಯಲು ಬೆಂಗಳೂರು, ಮುಂಬೈ, ಪುಣೆ, ಕಲ್ಯಾಣ್‌ ಮುಂತಾದ ಕಡೆಗಳಿಗೆ ತೆರಳಿದ ಜನರಿಗಾಗಿ ವಾಹನಗಳ ವ್ಯವಸ್ಥಗಳ ವ್ಯವಸ್ಥೆ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ವಾಹನಗಳನ್ನು ಕಳುಹಿಸಿ ಮತದಾರರನ್ನು ಕರೆಸಿಕೊಂಡಿದ್ದಾರೆ.

ಪಟ್ಟಣ ಹಾಗೂ ನರೋಣಾ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳು ಜನರನ್ನು ಕರೆಸಿಕೊಂಡಿದ್ದಾರೆ. ಸೋಮವಾರ ರಾತ್ರಿಯೇ ಜನರು ಮುಂಬೈ, ಪುಣೆಯಿಂದ ಹೊರಟಿದ್ದು, ಮಧ್ಯಾಹ್ನದ ವೇಳೆಗೆ ಗ್ರಾಮಗಳಿಗೆ ತಲುಪಿದ್ದಾರೆ. ಅಲ್ಲದೇ, ಮತದಾರರಿಗಾಗಿ ಮನೆಯಿಂದ ಮತಗಟ್ಟೆಗಳಿಗೆ ಕರೆ ತರಲೂ ವಾಹನಗಳು, ಟಂಟಂ, ಆಟೋಗಳ ವ್ಯವಸ್ಥೆ ಮಾಡಲಾಗಿದೆ.

ಎರಡು ಕಡೆ ಚಿಹ್ನೆ ಬದಲು: ಈ ನಡುವೆ ಕಮಲಾಪುರ ತಾಲೂಕಿನ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳ ಚಿಹ್ನೆಗಳು ಬದಲಾವಣೆಯಾಗಿ, ಕೆಲ‌ ಗೊಂದಲ ಉಂಟಾಯಿತು. ಅಲ್ಲದೇ, ಎರಡೂ ಕಡೆಗಳಲ್ಲಿ ಮತದಾನ ಸಹ ಸ್ಥಗಿತಗೊಳಿಸಿದ ಪ್ರಸಂಗ ಸಹ ನಡೆದಿದೆ.

ಶ್ರೀಚಂದ್ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡ್‌ ನಲ್ಲಿ ಅಭ್ಯರ್ಥಿ ಗಜಾನಂದ ದತ್ತಾಪ್ರಸಾದ ಎಂಬುವವರು ‘ಹಲ್ಲುಜ್ಜುವ ಪೇಸ್ಟ್ ಚಿಹ್ನೆ’ ಪಡೆದು ಪ್ರಚಾರ ಮಾಡಿದ್ದರು. ಆದರೆ ಮತ ಪತ್ರದಲ್ಲಿ ಹಲ್ಲುಜ್ಜುವ ಬ್ರಷ್ ಪ್ರಿಂಟ್ ಇದೆ. ಇದರಿಂದ ಅಭ್ಯರ್ಥಿ ಗಜಾನಂದ ತಕರಾರು ತೆಗೆದರು. ಹೀಗಾಗಿ ಕೆಲಕಾಲ ಮತದಾನ ಸ್ಥಗಿತಗೊಳಿಸಲಾಗಿತ್ತು.

ಅದೇ ರೀತಿ ಕಿಣ್ಣಿ ಸಡಕ್ ಗ್ರಾಮ ಪಂಚಾಯಿತಿಯ 7ನೇ ವಾರ್ಡ್ ನಲ್ಲೂ ಚಿಹ್ನೆ ಬದಲಾವಣೆ ಆಗಿದೆ. ಜಯರಾಜ ಎ. ಹಲಗಿ ಅವರಿಗೆ 145 ತುತ್ತೂರಿ ಚಿಹ್ನೆ ನೀಡಲಾಗಿತ್ತು. ಇದೆ ಚಿಹ್ನೆ ಮೂಲಕ ಪ್ರಚಾರ ಕೈಗೊಂಡಿದ್ದಾರೆ. ಆದರೆ ಮತಪತ್ರದಲ್ಲಿ 181 ಕಹಳೆ ಊದುತ್ತಿರುವ ಮನುಷ್ಯನ ಚಿಹ್ನೆ ಮುದ್ರಣಗೊಂಡಿದೆ.

ಅಭ್ಯರ್ಥಿ ಜಯರಾಜ ಮತ ಚಲಾಯಿಸಲು ಹೋದಾಗ ಬದಲಿ ಚಿಹ್ನೆ ಕಂಡು ಗಾಬರಿಗೊಂಡಿದ್ದಾರೆ. ನಂತರ ಚಿಹ್ನೆ ಬದಲಾವಣೆ ಬಗ್ಗೆ ಗಮನಿಸಿ ಮತಗಟ್ಟೆ ಅಧಿಕಾರಿಗೆ ತಿಳಿಸಿದರು‌. ಆಗ ತಕ್ಷಣ ಮತದಾನ ಸ್ಥಗಿತ ಗೊಳಿಸಲಾಯಿತು. ಚುನಾವಣಾಧಿಕಾರಿ ವಿರುದ್ದ ಕ್ರಮ ಕೈಗೊಳ್ಳುವಂತೆ ಪ್ರತಿಭಟಿಸಿದ ಅಭ್ಯರ್ಥಿ ಕಣ್ಣೀರು ಸಹ ಹಾಕಿದರು.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.