Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!
ದೇಶದ ಎಲ್ಲ ಭಾಷೆಗಳಲ್ಲಿ ಪರೀಕ್ಷೆಗಳಿಗೆ ಹಾಜರಿ 4 ವಿಶ್ವ ದಾಖಲೆ, ಹಲವು ಪ್ರಶಸ್ತಿ ಪುರಸ್ಕಾರ
Team Udayavani, Oct 3, 2024, 7:27 AM IST
ಕಲಬುರಗಿ: ಗಡಿ ಭಾಗದ ಕನ್ನಡ ಶಿಕ್ಷಕರೊಬ್ಬರು ದೇಶದ 22 ರಾಜ್ಯಗಳ ಸೆಟ್, ನೆಟ್ ಮತ್ತು ಟಿಇಟಿ ಸೇರಿ ಒಟ್ಟು 77 ಪರೀಕ್ಷೆಗಳನ್ನು ಬರೆದು ತೇರ್ಗಡೆಯಾಗಿ ವಿಶ್ವ ದಾಖಲೆ ಮಾಡಿದ್ದಾರೆ!
ಧನಯ್ಯ ಕವಠಗಿಮಠ ಅವರು ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಅಕ್ಕಲಕೋಟೆಯಲ್ಲಿ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಮಂಗರೂಳೆ ಕನ್ನಡ ಪ್ರೌಢಶಾಲೆಯಲ್ಲಿ ಶಿಕ್ಷಕ. ಈಗ ದೇಶದ 22 ರಾಜ್ಯಗಳ ಸೆಟ್, ನೆಟ್, ಟಿಇಟಿ ಪರೀಕ್ಷೆಗಳನ್ನು ಬರೆಯುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಅಲ್ಲದೇ ತಮ್ಮದೇ ವೆಬ್‌ಸೈಟ್ ರಚನೆ ಮಾಡಿ ಅದರಲ್ಲಿ ನೆಟ್, ಸೆಟ್ ಮತ್ತು ಟಿಇಟಿ ಬರೆಯುವುದು ಹೇಗೆ ಎಂದು ಐಡಿಯಾಗಳನ್ನು ನೀಡುತ್ತಿದ್ದಾರೆ.
ಯಾವ ರಾಜ್ಯಗಳಲ್ಲಿ ಪರೀಕ್ಷೆ?
ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶ, ಛತ್ತೀಸ್‌ಗಡ, ಗುಜರಾತ್, ರಾಜಸ್ಥಾನ, ಪ. ಬಂಗಾಲ, ಹಿ. ಪ್ರದೇಶ, ಉತ್ತರಾಖಂಡ, ಆಸ್ಸಾಂ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್. ತ್ರಿಪುರಾ, ಸಿಕ್ಕಿಂ, ಜಮ್ಮು ಕಾಶ್ಮೀರ ರಾಜ್ಯಗಳ ನೆಟ್, ಸೆಟ್ ಹಾಗೂ ಟಿಇಟಿ ಪರೀಕ್ಷೆಗಳನ್ನು ಬರೆದಿದ್ದು ಒಡಿಶಾ, ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಈ ಪರೀಕ್ಷೆಗಳು ಇಲ್ಲ. ಇದರಿಂದಾಗಿ ಆ ರಾಜ್ಯಗಳಿಗೆ ಹೋಗಿಲ್ಲ ಎನ್ನುತ್ತಾರೆ ಧನಯ್ಯ. ಧನಯ್ಯ ಅವರಿಗೆ ವರ್ಲ್ಡ್ ರೆಕಾರ್ಡ್ ಇಂಡಿಯಾ, ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್, ವರ್ಲ್ಡ್ ರೆಕಾರ್ಡ್ ಆಫ್ ರಿಪಬ್ಲಿಕ್ ಸೇರಿದಂತೆ ಒಟ್ಟು 7 ವಿಶ್ವ ದಾಖಲೆಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಅಲ್ಲದೇ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿದ್ದಾರೆ.
ಡಿವೋರ್ಸ್‌ನಿಂದ ಡೈವರ್ಟ್ ಆಗಿದ್ದರು!
ಧನಯ್ಯ ಕವಠಗಿಮಠ 2010ರಲ್ಲಿ ಮೊದಲ ಹೆಂಡತಿಯಿಂದ ಡಿವೋರ್ಸ್ ಪಡೆದರು. ಈಗ ಎರಡನೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ ಡಿವೋರ್ಸ್‌ನಿಂದ ಆಘಾತಕ್ಕೊಳಗಾಗಿ ಮನಸ್ಸು ಹತೋಟಿಗೆ ಪಡೆಯಲು ಓದಿನೆಡೆಗೆ ಚಿತ್ತ ಹರಿಸಿದರು. ಪ್ರತಿ ರಾಜ್ಯದಲ್ಲಿನ ಆಯಾ ಭಾಷಾ ಪರೀಕ್ಷೆಗಳನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಲಾಗಿರುತ್ತಿತ್ತು. ಅವುಗಳನ್ನು ಬರೆಯುವ ಮೂಲಕ 22 ರಾಜ್ಯಗಳ 36 ಸೆಟ್, 36 ಟಿಇಟಿ, 4 ನೆಟ್ ಒಂದು ಪಿಎಚ್‌ಡಿ ಪರೀಕ್ಷೆಗಳನ್ನು ಬರೆದು ತೇರ್ಗಡೆಯಾಗಿದ್ದಾರೆ.
– ಸೂರ್ಯಕಾಂತ್ ಎಂ. ಜಮಾದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.