Kalaburagi: ಗುಂಡಿನ ದಾಳಿಗೈದು ಕುಖ್ಯಾತ ದರೋಡೆಕೋರನ ಸೆರೆ ಹಿಡಿದ ಪೊಲೀಸರು!
ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು, ಪೊಲೀಸರ ಮೇಲೆಯೇ ಚಾಕು ಎಸೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದ ಅವತಾರ್ ಸಿಂಗ್
Team Udayavani, Aug 31, 2024, 11:19 PM IST
ಕಲಬುರಗಿ: ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕುಖ್ಯಾತ ಆರೋಪಿ ಮೇಲೆ ನಗರ ಪೊಲೀಸರು ಗುಂಡಿನ ದಾಳಿ ನಡೆಸಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಲಿಗೆ ಗುಂಡು ತಗುಲಿ ಗಾಯಗೊಂಡ ದರೋಡೆಕೋರ ಅವತಾರ್ ಸಿಂಗ್ ನನ್ನುಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಕಲಬುರಗಿಯ ವಿವಿಧ ಠಾಣೆಗಳಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಅಗತ್ಯವಾಗಿದ್ದ.
ಕಾಲಿಗೆ ಗುಂಡು ಹೊಡೆದ ಇನ್ಸ್‌ಪೆಕ್ಟರ್ ಸಂತೋಷ್:
ಕಾರ್ಯಾಚರಣೆ ವೇಳೆ ಅವತಾರ್ ಸಿಂಗ್ ಬಲಗಾಲಿಗೆ ಗುಂಡು ಹೊಡೆದ ಸಬ್ ಅರ್ಬನ್ ಠಾಣೆ ಇನ್ಸ್ ಪೆಕ್ಟರ್ ಸಂತೋಷ್ ತಟ್ಟೆಪಲ್ಲಿ ಒಂದು ಸುತ್ತು ಗಾಳಿಯಲ್ಲಿ ಗುಂಡಿ ಹಾರಿಸಿ, ಬಳಿಕ ತನ್ನ ಆತ್ಮರಕ್ಷಣೆಗಾಗಿ ಅವತಾರ್ ಸಿಂಗ್ ಕಾಲಿಗೆ ಫೈರಿಂಗ್ ನಡೆಸಿದ್ದಾರೆ. ಈ ಹಿಂದೆ ಬೀದರ್ ನಲ್ಲಿ ರೌಡಿಯೊಬ್ಬ ಚಾಕುವಿನಿಂದ ಇರಿದ ಸಂದರ್ಭದಲ್ಲಿ ತಟ್ಟೆಪಲ್ಲಿ ಅವರು ಗುಂಡು ಹಾರಿಸಿದ್ದರು.
ಅವತಾರ್ ಸಿಂಗ್ ಮೇಲೆ ವಿವಿಧ ಠಾಣೆಗಳಲ್ಲಿ ದರೋಡೆ ಸೇರಿ 13 ಪ್ರಕರಣಗಳು ದಾಖಲಾಗಿವೆ. ನಗರದ ಹೊರವಲಯದ ಡಾಬಾವೊಂದರ ದರೋಡೆ ಕೇಸ್ ನಲ್ಲಿ ಪೊಲೀಸರಿಗೆ ಅವತಾರ ಸಿಂಗ್ ಅವಶ್ಯಕವಿದ್ದ. ಕಳೆದ ಮೂರು ದಿನಗಳಿಂದ ಅವತಾರ ಸಿಂಗ್ ಗಾಗಿ ಪೊಲೀಸರು ಹುಡುಕಾಡುತ್ತಿದ್ದರು. ಶನಿವಾರ ಉಪಳಾಂವ ಕ್ರಾಸ್ ಬಳಿಯಲ್ಲಿ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದರು. ಆದರೆ ಈ ವೇಳೆ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿಗೆ ಮುಂದಾದಾಗ ಫೈರಿಂಗ್ ನಡೆಸಲಾಗಿದೆ.
ಇಬ್ಬರು ಪೊಲೀಸರಿಗೆ ಗಾಯ:
ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಕಲಬುರಗಿ ನಗರ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.