ಮಾತೃಭಾಷೆ ಶಿಕ್ಷಣದಲ್ಲಿ ಕರ್ನಾಟಕವೇ ಮುಂದೆ! ರಾಜ್ಯದಲ್ಲಿ ಶೇ.53ರಷ್ಟು ಮಕ್ಕಳು ಕನ್ನಡ ಮಾಧ್ಯಮ
Team Udayavani, Jul 3, 2021, 9:43 PM IST
ಹೊಸದಿಲ್ಲಿ : ದಕ್ಷಿಣ ಭಾರತದಲ್ಲೇ ಮಾತೃ ಭಾಷೆಯ ಮೇಲೆ ಹೆಚ್ಚು ಪ್ರೀತಿ ಇರುವುದು ಕರ್ನಾಟಕದಲ್ಲಿ!
2019-20ರ ಯೂನಿಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಂ ಫಾರ್ ಎಜುಕೇಷನ್ (ಯುಡಿಐಎಸ್‌ಇ) ವರದಿ ಈ ಅಂಶವನ್ನು ಬಹಿರಂಗಪಡಿಸಿದೆ. ಕರ್ನಾಟಕದಲ್ಲಿ ಆಂಗ್ಲ ಶಾಲೆಗಳ ಪ್ರಮಾಣ ಶೇ. 20ರಷ್ಟು ಹೆಚ್ಚಾಗಿದ್ದರೂ ಮಾತೃಭಾಷೆಯಲ್ಲಿ ಕಲಿಯುತ್ತಿರುವವರ ಸಂಖ್ಯೆ ಹೆಚ್ಚಿದೆ ಎಂದು ಈ ವರದಿ ತಿಳಿಸಿದೆ. ಶೇ. 53.5ರಷ್ಟು ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ರಾಜ್ಯವಾರು ಲೆಕ್ಕಾಚಾರ
ಆಂಧ್ರಪ್ರದೇಶ, ತೆಲಂಗಾಣಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಅಲ್ಲಿ ತೆಲುಗು ಮಾಧ್ಯಮದಲ್ಲಿ ಕಲಿಯುತ್ತಿರುವ ಮಕ್ಕಳ ಸಂಖ್ಯೆ ಶೇ. 25ಕ್ಕಿಂತ ಕಡಿಮೆ. ಶೇ. 73.8ರಷ್ಟು ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ಆಂಧ್ರ ದಲ್ಲಿ ಶೇ. 35ರಷ್ಟು ಮಕ್ಕಳು ತೆಲುಗು ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ಕೇರಳದಲ್ಲಿ ಶೇ. 35ರಷ್ಟು ಮಕ್ಕಳು ಮಾತ್ರ ಮಲಯಾಳದಲ್ಲಿ ಕಲಿಯುತ್ತಿದ್ದಾರೆ.
ಇದನ್ನೂ ಓದಿ :ದುರಹಂಕಾರ ಇರುವವರಿಗೆ ಲಸಿಕೆ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ತಮಿಳುನಾಡಿನಲ್ಲಿ ಎಷ್ಟು?
ಮಾತೃಭಾಷೆಯ ಮೇಲೆ ಉತ್ಕಟ ಅಭಿಮಾನ ಇರುವ ತಮಿಳುನಾಡಿನಲ್ಲಿಯೂ ತಮಿಳಿನಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪ್ರಮಾಣ ಗಣನೀಯವಾಗಿ ಇಳಿದಿದೆ. 5 ವರ್ಷಗಳ ಹಿಂದೆ ಶೇ. 57.6ರಷ್ಟಿದ್ದ ಮಕ್ಕಳ ಸಂಖ್ಯೆ ಈಗ ಶೇ. 42.6ಕ್ಕೆ ಇಳಿ ಕೆ ಯಾ ಗಿ ದೆ.
ಮಾದರಿ ಬಂಗಾಲ!
ದೇಶದಲ್ಲಿ ಆಂಗ್ಲ ಶಿಕ್ಷಣಕ್ಕೆ ಮೊರೆ ಹೋಗಿರುವ ಮಕ್ಕಳ ಪ್ರಮಾಣ ಅತೀ ಕಡಿಮೆ ಇರುವ ರಾಜ್ಯ ಪಶ್ಚಿಮ ಬಂಗಾಲ. ಅಲ್ಲಿ ಅವರ ಸಂಖ್ಯೆ ಶೇ. 5.3ರಷ್ಟು ಮಾತ್ರ! ಶೇ. 89.8ರಷ್ಟು ಮಕ್ಕಳು ಬಂಗಾಲಿಯಲ್ಲೇ ಕಲಿಯುತ್ತಿದ್ದಾರೆ. ಇದರ ಪರಿಣಾಮ ಈಶಾನ್ಯ ರಾಜ್ಯಗಳ ಮೇಲೂ ಇದ್ದು, ಒಡಿಶಾದಲ್ಲಿ ಬಂಗಾಲಿಯಲ್ಲಿ ಕಲಿಯುವವರ ಪ್ರಮಾಣ ಶೇ. 80ರಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.