ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯ: ಪ್ರದೀಪ್ ಈಶ್ವರ್
Team Udayavani, Jul 13, 2023, 6:33 AM IST
ಬೆಂಗಳೂರು: ಸರಕಾರಿ ಶಾಲೆ ಮತ್ತು ಆಸ್ಪತ್ರೆ ನಮ್ಮಂಥ ಕೋಟ್ಯಂತರ ಜನರ ಪಾಲಿಗೆ ದೇವಾಲಯವಾಗಿದ್ದು, ಸರಕಾರ ಇವುಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಅವರು, 1ರಿಂದ 10ನೇ ತರಗತಿ ವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರಕಾರದ ಪ್ರೋತ್ಸಾಹ ಅಗತ್ಯವಾಗಿದೆ. ಉನ್ನತ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಸರಕಾರವೇ ತೆಗೆದುಕೊಳ್ಳಬೇಕು. ಉತ್ತಮ ರ್‍ಯಾಂಕ್‌ನೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಇನ್ನಷ್ಟು ಸಾಧನೆ ಮಾಡುವುದಕ್ಕೆ ಇದರಿಂದ ಅವಕಾಶವಾಗುತ್ತದೆ ಎಂದರು.
ಟ್ರೋಲ್ ಬಗ್ಗೆ ಭಯ ಬೇಡ
ಪ್ರದೀಪ್ ಈಶ್ವರ್ ಭಾಷಣ ಪ್ರಾರಂಭಿಸುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಯು.ಟಿ.ಖಾದರ್, ನೀವು ವಿಧಾನಸಭೆಯಲ್ಲಿ ಅತ್ಯಂತ ಆತ್ಮವಿಶ್ವಾಸದಿಂದ ಮಾತನಾಡಿ. ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಬಹುದೆಂಬ ಭಯ ಬೇಡ. ನಾವೆಲ್ಲರೂ ಟ್ರೋಲ್ ಆಗಿಯೇ ಈ ಸ್ಥಾನಕ್ಕೆ ಬಂದಿದ್ದೇವೆ. ನೀವು ಧೈರ್ಯದಿಂದ ಮಾತನಾಡಿ ಎಂದು ಸಲಹೆ ನೀಡಿದರು.
ಕೆಲವು ದಿನಗಳ ಹಿಂದೆ ಪ್ರದೀಪ್ ಈಶ್ವರ್ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿತ್ತು. “ಯೇ ಪ್ರದೀಪ್, ಸಾವು ಆಗಿಲ್ಲ ಮಾರಾಯ ಕೂತ್ಕೊ” ಎಂದು ಸ್ಪೀಕರ್ ಖಾದರ್ ಕೋಪಗೊಂಡಿದ್ದೂ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
MUST WATCH
ಹೊಸ ಸೇರ್ಪಡೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.