ಜನಸಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್: ಡಾ. ಕೆ.ಸುಧಾಕರ್
ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ ಒತ್ತು; ವೈದ್ಯಕೀಯ ಶಿಕ್ಷಣಕ್ಕೆ ಕಾಯಕಲ್ಪ
Team Udayavani, Mar 4, 2022, 10:15 PM IST
ಬೆಂಗಳೂರು: ಕಾಮನ್ ಮ್ಯಾನ್ ಮುಖ್ಯಮಂತ್ರಿ ಅವರಿಂದ ಕಾಮನ್ ಮ್ಯಾನ್ ಬಜೆಟ್ ಇದಾಗಿದ್ದು, ಜನಸಾಮಾನ್ಯರ ಬದುಕು ಸುಗಮಗೊಳಿಸುವ ಆಯವ್ಯಯ ಇದಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿದ 2022-2023ರ ಬಜೆಟ್ ದೂರದೃಷ್ಟಿಯ ಆಯವ್ಯಯವಾಗಿದ್ದು, ಇದು ಕೇವಲ ಘೋಷಣೆಯಾಗದೆ ಜನಸಾಮಾನ್ಯರ ಬಜೆಟ್ ಆಗಿದೆ. ಮುಖ್ಯಮಂತ್ರಿ ಅವರು ನವ ಭಾರತಕ್ಕಾಗಿ ನವ ಕರ್ನಾಟಕ ಎನ್ನುವ ಕಲ್ಪನೆಯೊಂದಿಗೆ ಈ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸಮಾಜದ ಎಲ್ಲಾ ವರ್ಗ, ಕ್ಷೇತ್ರಗಳನ್ನು, ರಾಜ್ಯದ ಎಲ್ಲಾ ಪ್ರಾದೇಶಿಕ ಭಾಗಗಳ ಜನರ ಆಶೋತ್ತರಗಳನ್ನು ಮುಟ್ಟುವಂತಹ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್ ಇದಾಗಿದೆ. ಆರೋಗ್ಯ, ಶಿಕ್ಷಣ, ಕೃಷಿ ಸೇರಿದಂತೆ ಮೂಲಕ ಸೌಕರ್ಯಗಳಿಗೆ ಒತ್ತುಕೊಟ್ಟು ಬಜೆಟ್ ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ರಸ್ತೆಗಳ ಅಭಿವೃದ್ಧಿ, ಹಲವು ಆರೋಗ್ಯ ಯೋಜನೆಗಳು, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ, ಆಶಾ ಕಾರ್ಯಕರ್ತೆರ ಗೌರವ ಧನ ಹೆಚ್ಚಳ ಮಾಡಿ ಆರೋಗ್ಯ ಕರ್ನಾಟಕದ ಕಡೆಯೂ ಗಮನ ಕೊಡಲಾಗಿದೆ. ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆ ಮೂಲಕ ಉತ್ತರ ಕರ್ನಾಟಕ ಭಾಗದ ಹೃದ್ರೋಗ ಸಂಬಂಧ ಕಾಯಿಲೆಗಳಿಗೆ ಅಲ್ಲೇ ಚಿಕಿತ್ಸೆ ಸಿಗುವಂತೆ ಮಾಡುವ ಯೋಜನೆ ರೂಪಿಸಲಾಗಿದೆ. ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರವೂ ಸ್ಥಾಪನೆಯಾಗಲಿದೆ. ರಾಜ್ಯದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆ ಮಾಡಿ, ಸಾಂಕ್ರಾಮಿಕವಲ್ಲದ ರೋಗಗಳಿಗೆ ನಮ್ಮ ಕ್ಲಿನಿಕ್???ನಲ್ಲಿ ಚಿಕಿತ್ಸೆ ಕೊಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನೀರಾವರಿ ಯೋಜನೆಗಳಿಗೆ ಬಜೆಟ್??ನಲ್ಲಿ ಬರಪೂರ ಅನುದಾನ ಸಿಕ್ಕಿದೆ. ಮೇಕೆದಾಟು ಯೋಜನೆಗೆ 1000 ಕೋಟಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಹಾಗೂ ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ನೀಡುವ ಮೂಲಕ ನೀರಾವರಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದ ಜನರ ನೀರಿನ ಬವಣೆ ತೀರಿಸಲು ಸರ್ಕಾರ ಯೋಜನೆ ರೂಪಿಸಿ ಅನುದಾನ ನೀಡಿದೆ.
ಕಾಶಿ ಯಾತ್ರೆ ಮಾಡುವ 30 ಸಾವಿರ ಯಾತ್ರಾರ್ಥಿಗಳಿಗೆ 5 ಸಾವಿರ ರೂ.ಗಳ ಸಹಾಯಧನ ಸಿಗಲಿದೆ. ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಾಗಿಡುವುದು. ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ ನಿರ್ಮಾಣದಂತಹ ಕಾರ್ಯಗಳಿಗೆ ಯೋಜನೆ ರೂಪಿಸಲಾಗಿದೆ. ಇದೊಂದು ಉತ್ತಮ ಬಜೆಟ್ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʻಬ್ರಾಂಡ್ ಬೆಂಗಳೂರುʼ ಪರಿಕಲ್ಪನೆಯಡಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಗುರಿ
ಎಲ್ಲಾ ದೇವಸ್ಥಾನಗಳಿಗೆ ಸಮಾನ ಸಹಾಯ ಅನುದಾನ: ಧಾರ್ಮಿಕ ದತ್ತಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?
Budget: ಮಹಿಳೆಯರಿಗೆ ಶಕ್ತಿ ತುಂಬಲು ‘ಉದ್ಯಮ ಶಕ್ತಿ’ ಯೋಜನೆಯಡಿ 100 ಪೆಟ್ರೋಲ್ ಬಂಕ್
ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?
Budget ಕೆರೆ ಪುನರುಜ್ಜೀವನಕ್ಕೆ ಹಲವು ಕ್ರಮ; ಜಲಸಂಪನ್ಮೂಲ & ಸಣ್ಣನೀರಾವರಿಗೆ ಸಿಕ್ಕಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.