ಸಂಪುಟಕ್ಕೆ ಭಾರೀ ಸರ್ಜರಿ? ಬಿಎಸ್‌ವೈ ಸ್ಥಾನ ಅಬಾಧಿತ, ಸೋಂಕು ತಗ್ಗಿದ ಬಳಿಕ ಬದಲಾವಣೆ


Team Udayavani, Jun 3, 2021, 7:30 AM IST

ಸಂಪುಟಕ್ಕೆ ಭಾರೀ ಸರ್ಜರಿ? ಬಿಎಸ್‌ವೈ ಸ್ಥಾನ ಅಬಾಧಿತ, ಸೋಂಕು ತಗ್ಗಿದ ಬಳಿಕ ಬದಲಾವಣೆ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎಂಬ ರಾಜ್ಯ ಬಿಜೆಪಿಯ ಕೆಲವು ಮುಖಂಡರ ವಾದಕ್ಕೆ ವರಿಷ್ಠರು ಬೆಂಬಲ ಸೂಚಿಸಿಲ್ಲ. ಬದಲಾಗಿ ಸಂಪುಟದಲ್ಲಿ ಇರುವ ಕೆಲವು ಹಿರಿಯ ಮತ್ತು ನಿಷ್ಕ್ರಿಯ ಸಚಿವರನ್ನು ಕೈಬಿಡಲು ನಿರ್ದೇಶಿಸಿದ್ದಾರೆ. ಇಂಥ ಕ್ರಮ ಕೈಗೊಳ್ಳುವ ಮೂಲಕ ಸರಕಾರ ಮತ್ತು ಪಕ್ಷವನ್ನು ಮತ್ತಷ್ಟು ಸಂಘಟಿಸಿ ಬಲಪಡಿಸುವ ಗುರಿ ಹಾಕಿಕೊಳ್ಳಲಾಗಿದೆ. ಈ ಮೂಲಕ 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಲು ವರಿಷ್ಠರು ತೀರ್ಮಾನಿಸಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊಸದಿಲ್ಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿದ ಅನಂತರ ಈ ಬೆಳವಣಿಗೆ ಘಟಿಸಿದೆ.

ಪಕ್ಷ ಸಂಘಟನೆಗೆ ಆದ್ಯತೆ
ಕೊರೊನಾ ಸಂಕಷ್ಟ ಮುಗಿದ ಬಳಿಕ ರಾಜ್ಯದಲ್ಲಿ ಪಕ್ಷದ ಬೇರುಗಳನ್ನು ಭದ್ರಗೊಳಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸನ್ನದ್ಧಗೊಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. 2023ರ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಈಗಿನಿಂದಲೇ ಪಕ್ಷ ಸಂಘಟನೆಗೆ ಆದ್ಯತೆ ನೀಡಲು ವರಿಷ್ಠರು ಇಚ್ಛಿಸಿದ್ದಾರೆ. ಅದಕ್ಕೆ ಪೂರಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಅವರಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿದು ಬಂದಿದೆ.

ವಲಸಿಗರ ಮೇಲೂ ಕಣ್ಣು
ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾರಣರಾಗಿರುವ ವಲಸಿಗರ ಪೈಕಿ ಕೆಲವರಿಗೆ ಸಂಪುಟದಿಂದ ಕೊಕ್‌ ನೀಡುವ ಬಗ್ಗೆಯೂ ವರಿಷ್ಠರು ಸೂಚನೆ ನೀಡಿದ್ದಾರೆ. ನಿಷ್ಕ್ರಿಯ ವಲಸಿಗ ಸಚಿವರನ್ನು ಕೈಬಿಟ್ಟು ಪಕ್ಷನಿಷ್ಠರು ಮತ್ತು ಹೊಸಬರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ.

ಸಮನ್ವಯಕ್ಕೆ ಒತ್ತು
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪಕ್ಷ ಮತ್ತು ಸರಕಾರದ ನಡುವೆ ಸಮನ್ವಯದ ಕೊರತೆ ಕಾಡುತ್ತಿದ್ದು, ಸಮನ್ವಯ ತರಲು ಬಿಜೆಪಿ ವರಿಷ್ಠರು ಗಮನಹರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದಲೂ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡುವ ಕುರಿತು ಆಲೋಚಿಸಿದ್ದಾರೆ. ಇದೇ ಕಾರಣಕ್ಕೆ ಸಂಪುಟದಲ್ಲಿ ಇರುವ ಹಿರಿಯ ಸಚಿವರನ್ನು ಸಂಘಟನಾತ್ಮಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಯೋಗೇಶ್ವರ್‌ ವಿರುದ್ಧ ದೂರು?
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡ ಬೇಕೆಂದು ಹೇಳುವ ಮೂಲಕ ಬಹಿರಂಗವಾಗಿ ಸರಕಾರದ ವಿರುದ್ಧ ಸಮರ ಸಾರಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್‌ ಬಣಕ್ಕೆ ಬಿಸಿ ಮುಟ್ಟಿಸಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ತೆರಳಿರುವ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಮಂಗಳವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿಯಾಗಿ ಯೋಗೇಶ್ವರ್‌ ವಿರುದ್ಧ ದೂರು ನೀಡಿದ್ದಾರೆ. ಸಂಪುಟ ಸಚಿವರಾಗಿ ಪಕ್ಷ ಮತ್ತು ಸರಕಾರಕ್ಕೆ ಮುಜುಗರ ತರುತ್ತಿರುವ ಯೋಗೇಶ್ವರ್‌ ಅವರನ್ನು ಸಂಪುಟದಿಂದ ಕೈ ಬಿಡಲು ಸೂಚನೆ ನೀಡಬೇಕೆಂದು ವಿಜಯೇಂದ್ರ ಅವರು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವರಿಷ್ಠರಿಂದ ಸೂಕ್ಷ್ಮ ಅವಲೋಕನ
ಬಿಜೆಪಿಯ ಇನ್ನೊಂದು ಬಣದ ಮೂಲಗಳ ಪ್ರಕಾರ ನಾಯಕತ್ವ ಬದಲಾವಣೆಯ ಪ್ರಯತ್ನ ಮುಂದುವರಿದಿದೆ. ಸಿಎಂ ಯಡಿಯೂರಪ್ಪ ಅವರ ಮೇಲೆ ಜಿಂದಾಲ್‌ ಪ್ರಕರಣದ ಆರೋಪ ಮಾಡುವುದು ಮತ್ತು ಅವರ ವಯಸ್ಸಿನ ಕಾರಣ ನೀಡಿ ಸಿಎಂ ಬದಲಾವಣೆ ಆಗ್ರಹ ಸರಿಯಲ್ಲ ಎಂಬ ಬಗ್ಗೆ ವಿಜಯೇಂದ್ರ ಅವರು ವರಿಷ್ಠರ ಗಮನ ಸೆಳೆದಿದ್ದಾರೆ ಎನ್ನಲಾಗಿದೆ.
ಆದರೆ ವರಿಷ್ಠರು ಸರಕಾರ ಮತ್ತು ಪಕ್ಷದೊಳಗಿನ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಯಾವುದೇ ಬಣದ ಪರವಾಗಿ ನಿಲ್ಲದೆ ಪಕ್ಷ ಬಲಪಡಿಸುವ ಮತ್ತು 2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಲೋಚನೆ ನಡೆಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಹಿರಿಯ ಸಚಿವರಿಗೆ ಕೊಕ್‌?
ಹಾಲಿ ಸಚಿವ ಸಂಪುಟದಲ್ಲಿ ಶೇ. 50ರಷ್ಟು ಸಚಿವರನ್ನು ಬದಲಿಸಿ ಹೊಸಬರನ್ನು ನೇಮಿಸಿ, ಭಾರೀ ಬದಲಾವಣೆ ಮಾಡುವ ಸೂಚನೆ ಇದೆ. ಕೆಲವು ಹಿರಿಯ ಮತ್ತು ನಿಷ್ಕ್ರಿಯ ಸಚಿವರನ್ನು ಕೈಬಿಡಲು ಚಿಂತನೆ ನಡೆದಿದೆ ಎನ್ನಲಾಗಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಿ 2023ರ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟಕ್ಕೆ ಸರ್ಜರಿ ನಡೆಸಲು ಯೋಜನೆ ರೂಪಿಸ ಲಾಗಿದೆ. ಸಂಪುಟದಿಂದ ಕೈಬಿಟ್ಟ ಸಚಿವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿ ಚುನಾವಣೆಗೆ ಸಜ್ಜಾಗು ವಂತೆ ಮಾಡುವುದು ವರಿಷ್ಠರ ಇರಾದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕೊರೊನಾ ಲಾಕ್‌ಡೌನ್‌ ಸಂದರ್ಭ ದಲ್ಲಿ ಸಕ್ರಿಯರಾಗಿ ಕೆಲಸ ಮಾಡದ ಮತ್ತು ತಮ್ಮ ಇಲಾಖೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸದ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.