ಕಿತ್ತೂರು-ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ
Team Udayavani, Dec 23, 2022, 7:25 AM IST
ಬೆಳಗಾವಿ: ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಗುರುವಾರ ಜರಗಿದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರ ಕಿತ್ತೂರು ಮತ್ತು ಮತ್ತು ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆಯನ್ನು ನೀಡಿದೆ.
ಪ್ರಸಕ್ತ ಸರಕಾರದ ಅವಧಿಯಲ್ಲಿ ನಡೆಯುತ್ತಿರುವ ಕೊನೆಯ ಅಧಿವೇಶನ ಸಂದರ್ಭದಲ್ಲೇ, ಈ ಭಾಗದ 13 ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿ 5,701.38 ಕೋಟಿ ರೂ. ಮಂಜೂರು ಮಾಡಲಾಗಿದೆ. ಇದರಿಂದ ಕಾಲಮಿತಿ ಯಲ್ಲಿ ಯೋಜನೆ ಪೂರ್ಣಗೊಳ್ಳಲು ಸಹಾಯವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಆಡಳಿತಾತ್ಮಕ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು :
- 365 ಕೋಟಿ ರೂ – ಕಲಬುರಗಿ ನಗರಕ್ಕೆ ಕುಡಿಯುವ ನೀರು ಪೂರೈಸಲು ಹುನಗುಂಟಾ ಗ್ರಾಮದ ಹತ್ತಿರ ಕಾಗಿಣಾ ನದಿಯ ಬಲದಂಡೆ ಯಲ್ಲಿ ಜಾಕ್ವೆಲ್ ಕಂ ಪಂಪ್ ಹೌಸ್ ನಿರ್ಮಿಸಿ, ಬೆಣ್ಣೆತೋರಾ ಜಲಾಶಯಕ್ಕೆ ತುಂಬಿಸುವುದು.
- 197 ಕೋಟಿ ರೂ – ಬಾಗಲಕೋಟೆಯ ಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಪೂರೈಕೆ ಮತ್ತು ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆ.
- 41 ಕೋಟಿ ರೂ – ಬೆಳಗಾವಿ ಜಿಲ್ಲೆಯ ಅಮ್ಮಾ ಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ ಯೋಜನೆ
- 520 ಕೋಟಿ ರೂ- ಕಿತ್ತೂರಿನಶ್ರೀ ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆ
- 546 ಕೋಟಿ ರೂ- ಸವದತ್ತಿ ತಾಲ್ಲೂಕಿನ ಶ್ರೀ ಸತ್ತೀಗೇರಿ ಏತ ನೀರಾವರಿ ಯೋಜನೆ
- 70 ಕೋಟಿ ರೂ- ಔರಾದ ತಾಲೂಕಿನ ಬಳತ (ಬಿ) ಹತ್ತಿರ ಹಾಲಹಳ್ಳಿ ಬ್ಯಾರೇಜ್ ಬಳಿ ಕೆರೆಗಳನ್ನು ನೀರು ತುಂಬಿಸುವುದು.
- 50 ಕೋಟಿ ರೂ – ಉತ್ತರಕನ್ನಡ ಜಿಲ್ಲೆಯ ಬೇಡ್ತಿ ನದಿ ಪಾತ್ರದಿಂದ ನೀರನ್ನು ಲಿಫ್ಟ್ ಮಾಡಿ 100 ಕೆರೆಗಳನ್ನು ತುಂಬಿಸುವ ಯೋಜನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.