![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jun 22, 2024, 2:31 PM IST
ಬೆಂಗಳೂರು: ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ. 23ರಿಂದ ಭಾರಿ ಮಳೆಯಾಗಲಿದೆ. ಹೀಗಾಗಿ ಜೂನ್ 25ರ ವರೆಗೆ ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ವೇಳೆ ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಜೂ.24ರಂದು ಭಾರಿ ಮಳೆ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಸೇರಿದಂತೆ ಉತ್ತರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್:
ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಪೈಕಿ ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು, ಇದು ಜೂನ್ 25ರ ವರೆಗೆ ಭಾರಿ ಮಳೆ ಮುಂದುವರಿಯಲಿದೆ. ಕರಾವಳಿಯಲ್ಲಿ ಜೂ.22ರಂದು ಆರೆಂಜ್ ಹಾಗೂ ಜೂ.23 ಮತ್ತು 24ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಪೈಕಿ ಬೆಂಗಳೂರಿನ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಂತರಗಳಲ್ಲೂ ಭಾರಿ ಮಳೆ ಸಾಧ್ಯತೆಯ ಹವಾಮಾನ ಇಲಾಖೆ ಹೇಳಿದೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ, ಕೆಲೆವೆಡೆ ಸಾಧಾರಣ ಮಳೆಯಾಗಿದೆ. ಆದರೆ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದಿದೆ.
ಜೂನ್ 22 ರಿಂದ ಜೂನ್ 30 ರವರೆಗೆ #ಮಳೆ #ಮುನ್ಸೂಚನೆ (ಮೂಲ: SHAR-ISRO): ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 23 ರವರೆಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ, ನಂತರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ
ಜೂನ್ 29 ರವರೆಗೆ, ಕರಾವಳಿ, ಮಲೆನಾಡು ಮತ್ತು pic.twitter.com/XCzMaZEYRA— Karnataka State Natural Disaster Monitoring Centre (@KarnatakaSNDMC) June 22, 2024
ಈ ಬಾರಿ ಮುಂಗಾರು ಪ್ರವೇಶ ಕೊಂಚ ಬೇಗವಾಗಿದ್ದರೂ ಜೂನ್ ತಿಂಗಳಲ್ಲಿ ಮಳೆ ಕೊರತೆ ಕಾಡಲಿದೆ ಎಂದು ಇಲಾಖೆ ಸೂಚಿಸಿದೆ. ದೇಶದಲ್ಲಿ ಸರಾಸರಿ ಮಳೆ ಪ್ರಮಾಣದಲ್ಲಿ ಶೇಕಡಾ 20 ರಷ್ಟು ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂ.1ರಿಂದ 18ರೊಳಗೆ 64.5 ಮಿ.ಮೀ ಮಳೆಯಾಗುವ ಮೂಲಕ ಶೇ.20ರಷ್ಟು ಕೊರತೆಯಾಗಿದೆ. ಉತ್ತರ ಭಾರತದ ಹಲವೆಡೆ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಆದರೆ ದಕ್ಷಿಣ ಭಾರತದಲ್ಲಿ 106.6 ಮಿ.ಮೀ ಮಳೆಯಾಗುವ ಮೂಲಕ ಶೇ.16ರಷ್ಟು ಅಧಿಕ ಮಳೆಯಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.