Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್
Team Udayavani, Dec 4, 2024, 10:39 PM IST
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ಕಿರುಕುಳ ನೀಡಿದ್ದಕ್ಕೆ ಮನನೊಂದು ವಕೀಲೆ ಎಸ್. ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್, ಪ್ರಕರಣದ ತನಿಖೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ “ವಿಶೇಷ ತನಿಖಾ ತಂಡ’ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, 3 ತಿಂಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಗಡುವು ವಿಧಿಸಿದೆ.
ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಸಿಬಿಐ ಎಸ್ಪಿ ವಿನಾಯಕ್ ವರ್ಮಾ, ಗೃಹ ರಕ್ಷಕ ದಳದ ಎಸ್ಪಿ ಹಾಕೆ ಅಕ್ಷಯ್ ಮಂಚಿಂದ್ರ, ಆಂತರಿಕ ಭದ್ರತಾ ವಿಭಾಗದ ಎಸ್ಪಿ ನಿಶಾ ಜೇಮ್ಸ್ ಇದ್ದು, ವಿನಾಯಕ್ ವರ್ಮಾ ತಂಡದ ಮುಖ್ಯಸ್ಥರಾಗಿದ್ದಾರೆ.
ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಾಂತರ ಅರ್ಜಿ ಹಾಗೂ ತಮ್ಮ ವಿರುದ್ಧ ಬನಶಂಕರಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ವಕೀಲೆ ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಕನಕಲಕ್ಷ್ಮೀ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅಲ್ಲದೆ, ಭೋವಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿನ ಮಧ್ಯಾಂತರ ಆದೇಶ ಮುಂದುವರಿಯಲಿದೆ. ಅವುಗಳ ವಿಚಾರಣೆ ಯನ್ನು ಡಿ.19ಕ್ಕೆ ನಡೆಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.