ಬರೇ ಚರ್ಚೆ, ಗದ್ದಲ; ವಿಶ್ವಾಸಮತ ಯಾಚನೆ ಮತ್ತೆ ಮುಂದೂಡಿಕೆ, ಮಂಗಳವಾರ ಡೆಡ್ ಲೈನ್
Team Udayavani, Jul 22, 2019, 11:58 PM IST
ಬೆಂಗಳೂರು:ಸಿಎಂ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷದ ಶಾಸಕರು ಸೋಮವಾರ ರಾತ್ರಿ 12.42ರವರೆಗೆ ಗಂಟೆವರೆಗೂ ಸುದೀರ್ಘವಾಗಿ ಚರ್ಚೆ, ಗದ್ದಲದಲ್ಲಿಯೇ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸದೇ ಕಲಾಪವನ್ನು ಮತ್ತೆ ಮಂಗಳವಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದ್ದಾರೆ.
ನಾಳೆ ವಿಶ್ವಾಸಮತ ಯಾಚನೆ ಮುಗಿಸುತ್ತೇವೆ ಎಂದು ಮನವಿ ಮಾಡಿದ ಸಿದ್ದರಾಮಯ್ಯಗೆ, ಎಷ್ಟು ಗಂಟೆಗೆ ಪೂರ್ಣಗೊಳಿಸುತ್ತೀರಿ ಎಂದು ಸ್ಪಷ್ಟವಾಗಿ ಹೇಳಿ ಎಂದು ಸ್ಪೀಕರ್ ತಾಕೀತು ಮಾಡಿದ್ದರು. ಮಂಗಳವಾರ 8ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದಾಗ ಬಿಜೆಪಿಯ ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ತದನಂತರ ನಾಳೆ ಮಂಗಳವಾರ 6ಗಂಟೆಗೆ ಅಂತಿಮ ಗಡುವು ಎಂದು ಹೇಳಿ ಕಲಾಪ ಮುಂದೂಡಿದ್ದರು.
ಸೋಮವಾರ 12ಗಂಟೆಗೆ ವಿಧಾನಸಭಾ ಕಲಾಪ ಆರಂಭವಾಗಿತ್ತು. ಮಧ್ಯಾಹ್ನ 2.30ರವರೆಗೆ ಕಲಾಪ ನಡೆದಿತ್ತು. ಸ್ಪೀಕರ್ ರಮೇಶ್ ಕುಮಾರ್ ಕಲಾಪವನ್ನು 3.30ಕ್ಕೆ ಮುಂದೂಡಿದ್ದರು. ನಂತರ ಮತ್ತೆ ಕಲಾಪ ಪುನರಾರಂಭಗೊಂಡಾಗಲು ವಿಶ್ವಾಸಮತ ಯಾಚನೆ ಮೇಲಿನ ಚರ್ಚೆ
ಮುಂದುವರಿದಿತ್ತು.
ಏತನ್ಮಧ್ಯೆ ವಿಶ್ವಾಸಮತ ಇಂದೇ ಯಾಚಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಸಿಎಂ ಕುಮಾರಸ್ವಾಮಿಗೆ ಸೂಚಿಸಿದ್ದರು. ಮಧ್ಯಾಹ್ನದ ಕಲಾಪದಲ್ಲಿ ಸಿಎಂ ಕುಮಾರಸ್ವಾಮಿ ಕಲಾಪಕ್ಕೆ ಹಾಜರಾಗದೇ ತಮ್ಮ ಕಚೇರಿಯಲ್ಲಿಯೇ ಕುಳಿತಿದ್ದರು. ಕಲಾಪದಲ್ಲಿ ಚರ್ಚೆ ಮುಂದುವರಿದಾಗ
ಬಿಜೆಪಿ ಹಿರಿಯ ಮುಖಂಡ ಬಿಎಸ್ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿ, ಇಂದು ರಾತ್ರಿ 1ಗಂಟೆಯಾದರೂ ತೊಂದರೆ ಇಲ್ಲ, ಇವತ್ತೆ ವಿಶ್ವಾಸಮತ ಯಾಚಿಸಿ ಎಂದು ಆಗ್ರಹಿಸಿದರು.
ಹೊಟ್ಟೆ ಹಸಿಯುತ್ತಿದೆ, ಡಯಾಬೀಟಿಸ್ ತೊಂದರೆ ಇರುವವರು ಇದ್ದಾರ. ಮಾನ್ಯ ಅಧ್ಯಕ್ಷರೇ ಕಲಾಪ ನಾಳೆಗೆ ಮುಂದೂಡಿ ಎಂದು ಕಾಂಗ್ರೆಸ್, ಜೆಡಿಎಸ್ ಶಾಸಕರು ಒತ್ತಾಯಿಸುವ ಮೂಲಕ ಗದ್ದಲ ಏರ್ಪಟ್ಟಾಗ ಸ್ಪೀಕರ್ ರಮೇಶ್ ಕುಮಾರ್ ಭೋಜನಕ್ಕೆ ತೆರಳಿದ್ದರು. ಬಳಿಕ ಡೆಪ್ಯುಟಿ
ಸ್ಪೀಕರ್ ಕೃಷ್ಣಾರೆಡ್ಡಿ ಅಧ್ಯಕ್ಷತೆಯಲ್ಲಿ ಕಲಾಪ ಮುಂದುವರಿದಿತ್ತು.
ಆದರೆ ಕಾಂಗ್ರೆಸ್, ಜೆಡಿಎಸ್ ಶಾಸಕರು ಗದ್ದಲ ಮುಂದುರಿಸಿದ್ದರು. ತದನಂತರ ಸ್ಪೀಕರ್ ರಮೇಶ್ ಕುಮಾರ್ ಆಗಮಿಸಿದಾಗ ಮತ್ತೆ ಕಲಾಪ ಆರಂಭವಾಗಿತ್ತು. ಕಾಂಗ್ರೆಸ್ ನ ಕೆಜೆ ಜಾರ್ಜ್, ಆರ್.ವಿ.ದೇಶಪಾಂಡೆ, ಜಮೀರ್ ಅಹ್ಮದ್, ಪ್ರಿಯಾಂಕಾ ಖರ್ಗೆ, ದಿನೇಶ್ ಗುಂಡೂರಾವ್
ಮಾತನಾಡಿ ಕಲಾಪ ಮುಂದೂಡುವಂತೆ ಮನವಿ ಮಾಡಿಕೊಂಡರು.
ಆದರೆ ಎಷ್ಟು ಹೊತ್ತಾದರೂ ತೊಂದರೆ ಇಲ್ಲ ನಮಗೆ ಊಟದ ವ್ಯವಸ್ಥೆ ಮಾಡಿ. ಇಂದೇ ವಿಶ್ವಾಸಮತ ಯಾಚನೆ ಮುಗಿದುಹೋಗಲಿ ಎಂದು ಬಿಎಸ್ ಯಡಿಯೂರಪ್ಪ ಪಟ್ಟು ಹಿಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.