ಭವಿಷ್ಯದಲ್ಲಿ ಸಮರ್ಥ ಮುಸ್ಲಿಮರಿಗೂ ಬಿಜೆಪಿ ಟಿಕೆಟ್ : ಅರುಣ್ ಸಿಂಗ್
Team Udayavani, May 1, 2023, 8:54 PM IST
ವಿಜಯಪುರ : ಬಿಜೆಪಿ ಪಕ್ಷದ ಬಲವರ್ಧನೆಗೆ ಸಮರ್ಪಿಸಿಕೊಳ್ಳುವ ಗೆಲ್ಲುವ ಸಮರ್ಥ ಅಲ್ಪಸಂಖ್ಯಾತ ಮುಸ್ಲೀಮ ಸಮುದಾಯಕ್ಕೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಈ ಕೆಲಸವಾಗಿದೆ. ಎಲ್ಲರೊಂದಿಗೆ ಎಲ್ಲರ ಅಭಿವೃದ್ಧಿ ಘೋಷಣೆಗೆ ಸೀಮಿತವಾಗಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣಸಿಂಗ್ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಚುನಾವಣೆ ಪ್ರಣಾಳಿಕೆ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅರುಣಸಿಂಗ್, ಬಿಜೆಪಿ ಸರ್ಕಾರ ರೂಪಿಸುವ ಎಲ್ಲ ಸೌಲಭ್ಯಗಳನ್ನು ವರ್ಗಬೇಧ ಮಾಡದೇ ಎಲ್ಲರಿಗೂ ಕಲ್ಪಿಸುತ್ತಿದೆ. ಚುನಾವಣೆ ವಿಷಯ ಬಂದಾಗ ಬಿಜೆಪಿ ಪಕ್ಷದಲ್ಲಿ ಅಲ್ಪಸಂಖ್ಯಾತ ಮುಸ್ಲೀಂ ನಾಯಕತ್ವ ಚುನಾವಣೆಗೆ ಟಿಕೆಟ್ ಪಡೆಯುವಷ್ಟು, ಗೆಲ್ಲುವಲ್ಲಿ ಬಲಿಷ್ಠವಾಗಬೇಕಿದೆ ಎಂದರು.
ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ವಿಜಯ ಸಾಧಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ರಾಜ್ಯ-ಕೇಂದ್ರ ಸರ್ಕಾರಗಳ ಡಬಲ್ ಎಂಜಿನ್ ಸರ್ಕಾರಗಳು ಸಮನ್ವಯದಿಂದ ಮಾಡಿರುವ ಅಭಿವೃದ್ಧಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮರು ಸ್ಥಾಪಿಸುವಲ್ಲಿ ಸಹಕಾರಿ ಆಗಲಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಕೆಜಿ ಅಕ್ಕಿಯ ಜೊತೆಗೆ 5 ಕೆಜಿ ಸಿರಿಧಾನ್ಯ, ಬಿಪಿಎಲ್ ಕುಟುಂಬಕ್ಕೆ ಅರ್ಧ ಲೀಟರ್ ನಂದಿನಿ ಹಾಲು ಉಚಿತ, ಗಣೇಶ ಚತುರ್ಥಿ, ದೀಪಾವಳಿ, ಯುಗಾದಿ ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್, 10 ಲಕ್ಷ ಜನರಿಗೆ ನಿವೇಶನ ಹಮಚಿಕೆ, 3 ವರ್ಷಗಳಲ್ಲಿ ಮನೆಗಳನ್ನೂ ನಿರ್ಮಿಸುವುದು ನಮ್ಮ ಸಂಕಲ್ಪ ಎಂದರು.
ರೈಥರ ಸಾಲಮನ್ನಾ ಮಾಡುವುದಾಗಿ ರಾಜಸ್ತಾನ ರಾಜ್ಯದಲ್ಲಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಮೇಲೆ ಚಕಾರ ಎತ್ತಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ತಾನ ರಾಜ್ಯದಲ್ಲಿ ಜನರು ಜೀವನ ದುಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.
ಕೊಟ್ಟ ಭರವಸೆ ಈಡೇರಿಸದ ಕಾರಣಕ್ಕೆ ಉತ್ತರ ಪ್ರದೇಶ, ಗೋವಾ, ಆಸ್ಸಾಂ ಹೀಗೆ ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ತಿರಸ್ಕøತವಾಗಿದೆ. ಕರ್ನಾಟಕ ರಾಜ್ಯದಲ್ಲೂ ಕಾಂಗ್ರೆಸ್ ಇದೇ ಸ್ಥಿತಿ ಬರಲಿದೆ. ಸ್ಪಷ್ಟ ದೃಷ್ಟಿಕೋನವೇ ಇಲ್ಲದ ಪಕ್ಷ ಜೆಡಿಎಸ್ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಕಪ್ಪು ಹಣದ ವಿರುದ್ಧ ಮೊದಲ ದಿನದಿಂದಲೇ ಕಾರ್ಯಪ್ರವೃತ್ತವಾಗಿದೆ. ಅನಧಿಕೃತವಾಗಿ ವಿದೇಶದಲ್ಲಿ ಕಪ್ಪು ಹಣ ಕೂಡಿಟ್ಟವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಮೊದಲ ಸಚಿವ ಸಂಪುಟದಲ್ಲೇ ಈ ಬಗ್ಗೆ ಕಠಿಣ ನಿರ್ಧಾರ ಮಾಡಲಾಗಿದೆ. ಆದರೆ ಕಪ್ಪು ಹಣ ಹೊಂದಿದ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಈ ಸಮರದ ವಿರುದ್ಧ ಆಕ್ಷೇಪ ಎತ್ತುತ್ತಲೇ ಇದ್ದಾರೆ, ಆದರೂ ಸರ್ಕಾರ ತನ್ನ ಕೆಲಸ ಮಾಡುತ್ತಿದೆ ಎಂದು ಸಮಜಾಯಿಷಿ ನೀಡಿದರು.
ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಸಂಜಯ ಪಾಟೀಲ ಕನಮಡಿ, ವಿವೇಕಾನಂದ ಡಬ್ಬಿ, ವಿಜಯ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಇದರ ಜೊತೆಗೆ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಅತ್ಯಂತ ಕೀಳುಮಟ್ಟದ ಶಬ್ದ ಪ್ರಯೋಗಿಸಿ ಪ್ರಚೋದನೆ ಮಾಡುತ್ತಿರುವ ಕ್ರಮವೂ ಸರಿಯಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವುದನ್ನು, ಶಬ್ದ ಪ್ರಯೋಗ ಬಿಡಬೇಕು. ಇಂಥ ವತರ್ಗನೆಗೆ ತೆರೆ ಎಳೆಯಬೇಕು.
– ಅರುಣಸಿಂಗ್, ರಾಜ್ಯ ಉಸ್ತುವಾರಿ ಕರ್ನಾಟಕ-ಬಿಜೆಪಿ
ಇದನ್ನೂ ಓದಿ: ವಾಡಿ: ಮಾವನ ಕೊರಳಿಗೆ ಬಿಜೆಪಿ ಶಾಲು… ಆಕ್ರೋಶ ಹೊರಹಾಕಿದ ಸೊಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.