Karnataka Poll: ಕುಷ್ಟಗಿಗೆ ಪ್ರಧಾನಿ ಮೋದಿ… ದೊಡ್ಡನಗೌಡ ಪಾಟೀಲ್ ಮಾಹಿತಿ
Team Udayavani, Apr 21, 2023, 8:29 PM IST
ದೋಟಿಹಾಳ: ಕುಷ್ಟಗಿ ನಗರಕ್ಕೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು
ಸಮೀಪದ ಕೆ.ಬೋದೂರ್ ತಾಂಡದಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ 20 ಕಡೆಗಳಲ್ಲಿ ರ್ಯಾಲಿ ಮತ್ತು ಪ್ರಚಾರ ಮಾಡಲಿದ್ದಾರೆ. ಹೀಗಾಗಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕುಷ್ಟಗಿ ನಗರಕ್ಕೆ ಆಗಮಿಸಲಿದ್ದಾರೆ. ಇವರ ಜೊತೆಗೆ ನಟ ಸುದೀಪ್ ಕೂಡ ಆಗಮಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ಕುಷ್ಟಗಿ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ದೊಡ್ಡನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು.
ಈ ಕ್ಷೇತ್ರದ ವಿಶೇಷತೆ: ಕುಷ್ಟಗಿ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿಯವರೆಗೆ ಯಾವ ಅಭ್ಯರ್ಥಿಯು ಸತತವಾಗಿ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿಲ್ಲ. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರವರು ಮತ್ತೊಮ್ಮೆ ಗೆಲುವು ಸಾಧಿಸುವ ಮೂಲಕ ಈ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿಯವರು ಈ ಕ್ಷೇತ್ರಕ್ಕೆ ಭೇಟಿ ನೀಡಿ ರ್ಯಾಲಿ, ಪ್ರಚಾರ ಮಾಡುವದರಿಂದ ಪಕ್ಷದ ಅಭ್ಯರ್ಥಿಗೆ ಯಾವ ರೀತಿ ಅನುಕೂಲವಾಗುತ್ತದೆ ಎಂಬುದು ಕಾದು ನೋಡಬೇಕಿದೆ. ಈ ಬಾರಿ ಕೊಪ್ಪಳದಲ್ಲಿ ಮೋದಿ ಕಾರ್ಯಕ್ರಮ ಆಯೋಜನೆ ಮಾಡುವ ಬದಲು ಕುಷ್ಟಗಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ದೊಡ್ಡನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ಈ ಬಾರಿ ಚುನಾವಣೆಯಲ್ಲಿ ಮತದಾರರ ಒಲವು ನನ್ನ ಕಡೆ: ಎಚ್.ಆಂಜನೇಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.