ಗೋ ಹತ್ಯೆ ತಡೆ ಕಾಯ್ದೆ: ಸೆಕ್ಷನ್‌ 5ರ ಜಾರಿಗೆ ಕೋರ್ಟ್‌ ಅಸ್ತು

2021ರ ಜನವರಿ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಬೇಕು

Team Udayavani, Apr 19, 2022, 1:21 PM IST

ಗೋ ಹತ್ಯೆ ತಡೆ ಕಾಯ್ದೆ: ಸೆಕ್ಷನ್‌ 5ರ ಜಾರಿಗೆ ಕೋರ್ಟ್‌ ಅಸ್ತು

ಬೆಂಗಳೂರು: ಜಾನುವಾರುಗಳ ಸಾಗಾಣೆಗೆ ಸಂಬಂಧಿಸಿದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸೆಕ್ಷನ್‌ 5ರ ಜಾರಿಗೆ ಅನುಮತಿ ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಆದರೆ, ಈ ಅನುಮತಿಯು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ. ಇದರಿಂದ ಕಾಯ್ದೆಯ ಜಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ದೂರವಾದಂತಾಗಿದೆ.

ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್‌ ಆರಿಫ್ ಜಮೀಲ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ನ್ಯಾಯಾಲಯದ ಆದೇಶದಂತೆ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಸಂರಕ್ಷಣಾ ಕಾಯ್ದೆ ಸೆಕ್ಷನ್‌ 5ರ ಜಾರಿಗೆ ನಿಯಮಗಳನ್ನು ರೂಪಿಸಲಾಗಿದೆ.

ಆದ್ದರಿಂದ ಕಾಯ್ದೆಯ ಸೆಕ್ಷನ್‌ 5ರ ಜಾರಿಗೆ ಅನುಮತಿ ನೀಡಬೇಕು. ಅದಕ್ಕಾಗಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು 2021ರ ಜನವರಿ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಬೇಕು ಎಂದು ಕೋರಿದರು.

ಅದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಕಾಯ್ದೆ ಮತ್ತು ನಿಯಮಗಳು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಸೆಕ್ಷನ್‌ 5ರ ಜಾರಿಗೆ ಅನುಮತಿಸಬಾರದು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ಮನವಿ ಮತ್ತು ಅರ್ಜಿದಾರ ಆಕ್ಷೇಪಣೆ ದಾಖಲಿಸಿಕೊಂಡ ನ್ಯಾಯಪೀಠ, ಕರ್ನಾಟಕ ಜಾರುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 ಅನ್ನು ಸರ್ಕಾರವು 2021ರ ಫೆ.15ರಂದು ಜಾರಿ ಮಾಡಿದೆ. 2021ರ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿದೆ. 2021ರ ಮೇ 25ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದೀಗ ಕಾಯ್ದೆ ಸೆಕ್ಷನ್‌ 5 ಮತ್ತದರ ಅಡಿ ನಿಯಮ ರೂಪಿಸಲಾಗಿದ್ದು, ಜಾರಿಗೊಳಿಸಲು ನ್ಯಾಯಾಲಯದ ಅನುಮತಿ ಕೋರಿದೆ. ಆದ್ದರಿಂದ 2021ರ ಜ.20ರಂದು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಲಾಗುತ್ತಿದ್ದು, ಸೆಕ್ಷನ್‌ 5ರ ಜಾರಿಗೆ ಅನುಮತಿ ನೀಡಲಾಗುತ್ತಿದೆ. ಆದರೆ, ಇದು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ಟಾಪ್ ನ್ಯೂಸ್

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.