ರಾಜ್ಯೋತ್ಸವ ಪ್ರಯುಕ್ತ ಅ.28ಕ್ಕೆ ಕೋಟಿ ಕಂಠ ಗಾಯನ : ಸಚಿವ ಸುನಿಲ್‌ಕುಮಾರ್
Team Udayavani, Oct 7, 2022, 7:00 AM IST
ಬೆಂಗಳೂರು: ರಾಜ್ಯೋತ್ಸವ ಪ್ರಯುಕ್ತ ಅ.28ರಂದು ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳ ಗಾಯನ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯಾದ್ಯಂತ ಅಂದು ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ. ಕಳೆದ ವರ್ಷ ಕನ್ನಡ ರಾಜ್ಯೋತ್ಸವ ಪ್ರಯುಕ್ತ “ಮಾತಾಡ್ ಮಾತಾಡ್ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಲಕ್ಷ ಕಂಠ ಗಾಯನ ಯೋಜಿಸಲಾಗಿತ್ತು. ಈ ಬಾರಿ ಕೋಟಿ ಕಂಠ ಗಾಯನ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಅ.28 ರಂದು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ’, ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ’, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ’, ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ’ ಹಾಗೂ ಡಾ.ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುತಪಡಿಸಬಹುದಾಗಿದೆ ಎಂದು ಹೇಳಿದ್ದಾರೆ.
ಕನ್ನಡಿಗರು, ಅನಿವಾಸಿ ಕನ್ನಡಿಗರು, ಹೊರನಾಡ ಕನ್ನಡಿಗರು ಹಾಗೂ ಗಡಿನಾಡ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದು, ಪ್ರಪಂಚದಾದ್ಯಂತ ಕನ್ನಡದ ಕಂಪು ಪಸರಿಸುವ ವಿನೂತನ ಕಾರ್ಯಕ್ರಮ ಇದಾಗಲಿದೆ ಎಂದು ತಿಳಿಸಿದ್ದಾರೆ.
ಈ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು.
ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಡಿನ ಪ್ರಮುಖ ಪ್ರವಾಸಿ ಸ್ಥಳಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕೋಟಿ ಕಂಠ ಗಾಯನ ಅಭಿಯಾನ ನಡೆಯಲಿದ್ದು, ಸಮಸ್ತ ಕನ್ನಡಿಗರು ಅಭಿಮಾನ ಪೂರ್ವಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.