“ಸಮಗ್ರವಾಗಿ ಒಂದಷ್ಟು ಧನಾತ್ಮಕ ಪರಿಣಾಮಗಳ ನಿರೀಕ್ಷೆ’

Team Udayavani, Mar 5, 2022, 6:25 AM IST

“ಸಮಗ್ರವಾಗಿ ಒಂದಷ್ಟು ಧನಾತ್ಮಕ ಪರಿಣಾಮಗಳ ನಿರೀಕ್ಷೆ’

ರಾಜ್ಯದ 2022-23ನೇ ಸಾಲಿನ ಬಜೆಟ್‌ನಲ್ಲಿ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕ ಘಟಕಗಳಿಗೆ ಹೆಚ್ಚಿನ ಉತ್ತೇಜನಕಾರಿ ಅಂಶಗಳು ಕಂಡುಬರುತ್ತಿಲ್ಲ ಎಂಬ ವಿಶ್ಲೇಷಣೆಗಳು ಇವೆ. ಆದರೆ ಸಮಗ್ರವಾಗಿ ಪರಿಗಣಸಿದರೆ ಬಜೆಟ್‌ನಲ್ಲಿ ಘೋಷಿಸಿರುವ ಅಂಶಗಳು ಕೈಗಾರಿಕ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಒಂದಷ್ಟು ಧನಾತ್ಮಕ ಪರಿಣಾಮಗಳನ್ನು ಬೀರುವ ನಿರೀಕ್ಷೆ ಇದೆ.

ರಾಜ್ಯದ ಕರಾವಳಿ ಪ್ರದೇಶದ ಬಂದರು ಅಭಿವೃದ್ಧಿ ಹಾಗೂ ಕಡಲತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯವನ್ನು ನೀಡಲು ಅಂದಾಜು 1,800 ಕೋ.ರೂ. ವೆಚ್ಚದ ಯೋಜನೆಗಳನ್ನು ಯೋಜಿಸಿರುವುದು ಆರ್ಥಿಕ ಬೆಳವಣಿಗೆಗೆ ಪೂರಕ ಅಂಶ. ಕೆಐಎಡಿಬಿ ಮತ್ತು ಕೆ.ಎಸ್‌.ಎಸ್‌. ಐ.ಡಿ.ಸಿ. ಸ್ಥಾಪಿಸುವ ಹೊಸ ಕೈಗಾರಿಕ ಪ್ರದೇಶಗಳಲ್ಲಿ ಆರ್ಥಿಕ ದುರ್ಬಲ ವರ್ಗದವರು ಉದ್ಯಮ ಶೀಲ ರನ್ನಾಗುವಲ್ಲಿ ಉತ್ತೇಜನ ದಾಯಕ ವಾಗಿದೆ. ವಿದ್ಯುತ್‌ ಸರಬರಾಜು ಅಡಚಣೆ ನಿವಾರಿಸಲು ಘೋಷಿಸಿರುವ ಕ್ರಮಗಳು ಕೈಗಾರಿಕೆಗಳಿಗೆ ಪೂರಕವಾಗಲಿದೆ. ಬಜೆಟ್‌ನಲ್ಲಿ ಯಾವುದೇ ಹೆಚ್ಚುವರಿ ತೆರಿಗೆಗಳನ್ನು ವಿಧಿಸದಿರುವುದು ಕೈಗಾರಿಕ ವಲಯದಲ್ಲಿ ಸಮಾಧಾನ ಮೂಡಿಸಿದೆ.

ಕೆಐಟಿಎಸ್‌ ಅವರು ಎಲಿವೇಟ್‌ ಯೋಜನೆಯಡಿ ಗುರುತಿಸಲ್ಪಟ್ಟ ಮಹಿಳಾ ಉದ್ದಿಮೆದಾರರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 10 ಲ.ರೂ. ತನಕ ನೇರ ಸಾಲವನ್ನು ಒದಗಿಸಿಕೊಡುವುದು ವ್ಯಾಪಾರ ಉದ್ದಿಮೆಗಳಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ಉದ್ಯೋಗ ಸೃಜನೆಗೆ ಒತ್ತು ನೀಡುವ ಸಮಗ್ರ ಉದ್ಯೋಗ ನೀತಿ ಜಾರಿಗೊಳಿಸಿ ಕೈಗಾರಿಕೆಗಳಿಗೆ ಹೆಚ್ಚುವರಿ ಪ್ರೋತ್ಸಾಹ ನೀಡುವ ಕ್ರಮ ಉದ್ಯೋಗ ಸೃಷ್ಟಿಗೆ ಪೂರಕವಾಗಬಹುದು. ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸುವುದು ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನದಾಯಕವಾಗಲಿದೆ.

ಸಾಮಾನ್ಯ ಸೌಲಭ್ಯ ಕೇಂದ್ರಗಳು ಮತ್ತು ಪ್ಲಗ್‌ ಅಂಡ್‌ ಪ್ಲೇ ಮೂಲಸೌಕರ್ಯಗಳೊಂದಿಗೆ ಬಹುಮಹಡಿ ಕಾರ್ಖಾನೆ ಸಂಕೀರ್ಣ ಸ್ಥಾಪನೆಯ ಪ್ರಸ್ತಾವನೆ ಉತ್ತಮ ಕ್ರಮವಾಗಿದ್ದು ರಾಜ್ಯದಲ್ಲಿ ಹೆಚ್ಚಿನ ಕಡೆಗಳಿಗೆ ಇದನ್ನು ವಿಸ್ತರಿಸಿದರೆ ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಲಿದೆ. ರಾಜ್ಯದಲ್ಲಿ ಸೆಮಿಕಂಡಕ್ಟರ್‌ ತಯಾರಿಕೆಗೆ ಹೂಡಿಕೆದಾರರನ್ನು ಆಕರ್ಷಿಸಲು ವಿಶೇಷ ಪ್ರೋತ್ಸಾಹಕ ಕ್ರಮಗಳನ್ನು ಘೋಷಿಸಿರುವುದು ಹೆಚ್ಚಿನ ಉದ್ಯೋಗಾವಕಾಶಗಳ ಸೃಷ್ಟಿಗೆ ಪೂರಕವಾಗುವ ನಿರೀಕ್ಷೆ ಇದೆ. ಕೃಷಿ, ಮೀನುಗಾರಿಕೆ, ಆರೋಗ್ಯ, ಶಿಕ್ಷಣ, ಸಾರಿಗೆ ಮತ್ತು ಸಾಮಾಜಿಕ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಿರುವುದು ಸಮಗ್ರ ಅಭಿವೃದ್ಧಿಯಲ್ಲಿ ನಿರೀಕ್ಷಿತ ಫಲಿತಾಂಶ ನೀಡಬಹುದು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯ ವಿಧಾನವನ್ನು ಸುಧಾರಿಸುವ ಭರವಸೆ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಪೂರಕವಾಗುವ ಆಶಾವಾದ ಇದೆ. ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಸ್ಟಾರ್ಟ್‌ ಅಪ್‌ಗ್ಳನ್ನು ಉತ್ತೇಜಿಸಲು ಕರ್ನಾಟಕ ಡಿಜಿಟಲ್‌ ಎಕನಾಮಿ ಮಿಷನ್‌ನಿಂದ ಕ್ಲಸ್ಟರ್‌ಗಳ ಸ್ಥಾಪನೆಗಾಗಿ ಪ್ರಸಕ್ತ ಸಾಲಿನಲ್ಲಿ 12 ಕೋ.ರೂ.ಗಳ ಅನುದಾನ ನೀಡಿರುವುದು ಬೆಂಗಳೂರಿನಿಂದ ಹೊರಗೆ ಐಟಿ ಉದ್ದಿಮೆಗಳು ವಿಸ್ತರಣೆಯಾಗುವುದಕ್ಕೆ ಹೆಚ್ಚು ಬಲ ನೀಡಲಿದೆ. ಮಂಗಳೂರು ಬಂದರನ್ನು 350 ಕೋ.ರೂ. ವೆಚ್ಚದಲ್ಲಿ ವಿಸ್ತರಣೆ ಮಾಡುವ ಪ್ರಸ್ತಾವನೆ ಕರಾವಳಿ ಭಾಗದಲ್ಲಿ ವಾಣಿಜ್ಯ ವ್ಯವಹಾರಗಳ ಅಭಿವೃದ್ಧಿಗೆ ಹೆಚ್ಚು ಪೂರಕವಾಗಬಹುದು.

– ವಿಶಾಲ್‌ ಸಾಲಿಯಾನ್‌,
ಅಧ್ಯಕ್ಷರು, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ, ಮಂಗಳೂರು

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.