ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ


Team Udayavani, Mar 31, 2023, 7:47 AM IST

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ಬೆಂಗಳೂರು : ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಹಂಚಿಕೆ ಪ್ರಕ್ರಿಯೆಗಳು ವೇಗ ಪಡೆದುಕೊಳ್ಳುತ್ತಿವೆ. ಎ. 4ರಂದು ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಗೆ ಮುಹೂರ್ತ ನಿಗದಿಯಾಗಿದೆ. ಹೀಗಾಗಿ ರಾಜ್ಯದ ಆಡಳಿತಾರೂಢ ಪಕ್ಷದ ಶಾಸಕರಲ್ಲಿ ಆತಂಕ, ತಳಮಳ ಆರಂಭವಾಗಿದೆ. ಟಿಕೆಟ್‌ ಆಕಾಂಕ್ಷಿಗಳ ಎದೆಬಡಿತ ಹೆಚ್ಚಿಸಿದೆ.

ಇನ್ನೊಂದೆಡೆ ಬಾಕಿ ಉಳಿದ 100 ಕ್ಷೇತ್ರಗಳ ಟಿಕೆಟ್‌ ಹಂಚಿಕೆಗೆ ಗುರುವಾರ ಕಾಂಗ್ರೆಸ್‌ ಸ್ಕ್ರೀನಿಂಗ್‌ ಕಮಿಟಿ ಸಭೆ ಸೇರಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಹೀಗಾಗಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ತಲೆಯಲ್ಲೂ ಏನೇನೋ ಲೆಕ್ಕಾಚಾರಗಳು ಓಡುತ್ತಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿನ ಟಿಕೆಟ್‌ ಹಂಚಿಕೆ ಚಟುವಟಿಕೆಗಳು ಟಿಕೆಟ್‌ ಆಕಾಂಕ್ಷಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿವೆ.

ಮೊದಲ ಹಂತದಲ್ಲಿ ಕಾಂಗ್ರೆಸ್‌ 124 ಹಾಗೂ ಜೆಡಿಎಸ್‌ 93 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೆ ಬಿಜೆಪಿಯಿಂದ ಇದುವರೆಗೂ ಒಂದೇ ಒಂದು ಕ್ಷೇತ್ರದ ಅಭ್ಯರ್ಥಿ ತೀರ್ಮಾನ ಆಗಿಲ್ಲ. ಈಗ ಎಲ್ಲರ ಚಿತ್ತ ಬಿಜೆಪಿ ಟಿಕೆಟ್‌ ಹಂಚಿಕೆಯತ್ತ ನೆಟ್ಟಿದೆ. ಇದಕ್ಕೆ ಪೂರಕವಾಗಿ ಈಗಾಗಲೇ ಹಲವು ಪ್ರಕ್ರಿಯೆಗಳು ನಡೆದಿವೆ. ಜತೆಗೆ ಶುಕ್ರವಾರ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಜಿಲ್ಲಾವಾರು ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. 39 ಸಂಘಟನಾತ್ಮಕ ಜಿಲ್ಲೆಗಳಿಗೆ ತಲಾ ಮೂವರು ಪ್ರಮುಖರನ್ನು ಒಳಗೊಂಡ ತಂಡ ನೇಮಿಸಿದ್ದು, ಈ ತಂಡಗಳು ಪ್ರತೀ ಕ್ಷೇತ್ರದಲ್ಲೂ ಅಭಿಪ್ರಾಯ ಸಂಗ್ರಹಿಸಲಿವೆ.

ಜತೆಗೆ ಎ. 1, 2ರಂದು ಬೆಂಗಳೂರಿನಲ್ಲಿ ಜಿಲ್ಲಾ ಕೋರ್‌ ಕಮಿಟಿ ಸಭೆಗಳನ್ನು ನಿಗದಿಪಡಿಸಲಾಗಿದೆ. ಆ ಸಭೆಯಲ್ಲಿ ಶುಕ್ರವಾರ ಸಂಗ್ರಹಿಸುವ ಅಭಿಪ್ರಾಯಗಳ ವರದಿಯನ್ನು ಸಮಗ್ರವಾಗಿ ಚರ್ಚಿಸಿದ ಬಳಿಕ ಹಾಲಿ ಶಾಸಕರು ಸೇರಿದಂತೆ ಟಿಕೆಟ್‌ ಆಕಾಂಕ್ಷಿಗಳ ಸಂಭವನೀಯ ಪಟ್ಟಿ ಸಿದ್ಧವಾಗಲಿದೆ. ಹೀಗಾಗಿ ಹಾಲಿ ಶಾಸಕರು, ಸಚಿವರಲ್ಲಿ ಟಿಕೆಟ್‌ ಸಿಗುವುದೋ ಇಲ್ಲವೋ ಎಂಬ ಆತಂಕ ಮನೆ ಮಾಡಿದೆ. ಜತೆಗೆ ಉಳಿದ ಕ್ಷೇತ್ರಗಳಿಗೆ ಟಿಕೆಟ್‌ ಆಕಾಂಕ್ಷಿಗಳಾಗಿರುವವರಲ್ಲಿಯೂ ಒಂದು ರೀತಿ ತಳಮಳ ಆರಂಭವಾಗಿದೆ. ಎ. 4ರಂದು ನಿಗದಿಯಾಗಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್‌ ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ. ಬಹುತೇಕ 7ರಂದು ಮೊದಲ ಪಟ್ಟಿ ಹಾಗೂ 10ರ ವೇಳೆಗೆ ಅಂತಿಮ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಕೊನೇ ಘಳಿಗೆಯಲ್ಲಿ  ಗೆದ್ದ ಅಖಂಡ, ರಾಮಪ್ಪ

ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಮೊದಲ 124 ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದಿದ್ದ ಹಾಲಿ 6 ಮಂದಿ ಶಾಸಕರ ಪೈಕಿ ಪುಲಕೇಶಿನಗರದ ಅಖಂಡ ಶ್ರೀನಿವಾಸ ಮೂರ್ತಿ, ಹರಿಹರದ ರಾಮಪ್ಪ ಅವರು ಕೊನೆಗೂ ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ತೀರ್ಥಹಳ್ಳಿಯಿಂದ ಹಾಗೂ ಸಂತೋಷ್‌ ಲಾಡ್‌ ಕಲಘಟಗಿ, ಮಾಜಿ ಮೇಯರ್‌ ಸಂಪತ್‌ರಾಜ್‌ ಸಿ.ವಿ. ರಾಮನ್‌ ನಗರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಗುರುವಾರ ನಡೆದ ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಇವರ ಸ್ಪರ್ಧೆಗೆ ಹಸಿರು ನಿಶಾನೆ ದೊರೆತಿದೆ. ಕೇಂದ್ರ ಚುನಾವಣ ಸಮಿತಿಯ ಅಂತಿಮ ಮುದ್ರೆಯಷ್ಟೇ ಬಾಕಿ ಇದೆ.

ಎ. 5ರಂದು ರಾಹುಲ್‌ ಗಾಂಧಿಯವರ ಕೋಲಾರ ಭೇಟಿ ಬಳಿಕ, 6 ಅಥವಾ 7ರಂದು 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಉಳಿದ ಕ್ಷೇತ್ರಗಳಲ್ಲಿ ಅಧಿಸೂಚನೆ ಹೊರಡಿಸುವ ದಿನಾಂಕದ ಆಚೀಚೆ ಬಿಡುಗಡೆಯಾಗಲಿದೆ ಎಂದು ಮೂಲಗಳು ಹೇಳಿವೆ.

ಸಚಿವ ಅಶೋಕ್‌ ವಿರುದ್ಧ ಸಿಂಧ್ಯಾ

ಈ ಮಧ್ಯೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೀದರ್‌ ಜಿಲ್ಲೆಯ ಬಸವಕಲ್ಯಾಣದಿಂದ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಪಿ.ಜಿ.ಆರ್‌. ಸಿಂಧ್ಯಾ ಅವರನ್ನು ಕಂದಾಯ ಸಚಿವ ಆರ್‌. ಅಶೋಕ್‌ ವಿರುದ್ಧ ಪದ್ಮನಾಭನಗರದಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಕಳೆದ ಮೂರು ಚುನಾವಣೆಗಳಲ್ಲಿಯೂ ಹೊಸ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಕಾಂಗ್ರೆಸ್‌ ಯಶಸ್ವಿಯಾಗಿಲ್ಲ. ಈಗ 4ನೇ ಬಾರಿಗೆ ಮತ್ತೂಮ್ಮೆ ಹೊಸ ಪ್ರಯೋಗಕ್ಕೆ ಸಿಂಧ್ಯಾ ಮೂಲಕ ಮುಂದಾಗಿದೆ. 2008ರಲ್ಲಿ ಡಾ| ಬಿ. ಗುರಪ್ಪ ನಾಯ್ಡು, 2013ರಲ್ಲಿ ಎಲ್‌.ಟಿ.ಎಸ್‌. ಚೇತನಗೌಡ ಹಾಗೂ 2018ರಲ್ಲಿ ಎಂ. ಶ್ರೀನಿವಾಸ್‌ ಅವರನ್ನು ಕಣಕ್ಕಿಳಿಸಿತ್ತು. ಈ ಮೂರು ಚುನಾವಣೆಗಳಲ್ಲಿಯೂ ಕಾಂಗ್ರೆಸ್‌ ಸೋತಿತ್ತು. ಈಗ ಹೊಸ ಲೆಕ್ಕಾಚಾರದಲ್ಲಿ ಸಿಂಧ್ಯಾ ಅವರನ್ನು ಕರೆತಂದಿದೆ. ಕೆಲವು ದಿನಗಳ ಹಿಂದೆ ಸಿಂಧ್ಯಾ ಅವರ ಪುತ್ರಿಯನ್ನು ಈ ಕ್ಷೇತ್ರದ ಸಂಚಾಲಕಿಯಾಗಿ ನೇಮಿಸಿ ಕಾಂಗ್ರೆಸ್‌ ಆದೇಶ ಹೊರಡಿಸಿತ್ತು.

ಒಟ್ಟಿಗೇ ಸೇರ್ಪಡೆ

ಇನ್ನೊಂದೆಡೆ ಕಾಂಗ್ರೆಸ್‌  ಸೇರಲು ಮುಂದಾಗಿರುವ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ  ಹಾಗೂ ಜೆಡಿಎಸ್‌ನ ಶಿವಲಿಂಗೇಗೌಡ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳಲು ಕಾಂಗ್ರೆಸ್‌ ಸ್ಕ್ರೀನಿಂಗ್‌ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ.

ಶಿವಲಿಂಗೇಗೌಡ ಈಗಾಗಲೇ ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ್ದಾರೆ. ಗೋಪಾಲಕೃಷ್ಣ ಅವರು ರಾಜ್ಯ ಉಸ್ತು ವಾರಿ ರಣದೀಪ್‌ ಸಿಂಗ್‌ ಸುಜೇìವಾಲಾ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಜತೆ ಚರ್ಚಿಸಿದ್ದು, ಟಿಕೆಟ್‌ ಖಾತರಿಯಾಗಿದೆ. ಈ ಮೂಲಕ ಜೆಡಿಎಸ್‌ ಮತ್ತು ಬಿಜೆಪಿಯಿಂದ ಶಾಸಕರೂ ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ ಎಂಬ ಸಂದೇಶ ರವಾನಿಸಲು ತೀರ್ಮಾನಿಸಲಾಗಿದೆ.

ಈ ಮಧ್ಯೆ ಸಚಿವ ಬೈರತಿ ಬಸವರಾಜ್‌ ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತಾದರೂ ಇದೆಲ್ಲಾ ಸುಳ್ಳು. ಆ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

10

Kaup ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.