ಬೈಬಲ್‌ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ


Team Udayavani, Feb 1, 2023, 9:13 PM IST

ಬೈಬಲ್‌ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ಕಾಸರಗೋಡು: ಬೈಬಲ್‌ಗೆ ಬೆಂಕಿ ಹಚ್ಚಿ ಅದರ ದೃಶ್ಯಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಪ್ರಕರಣದ ಆರೋಪಿ ಕಾನತ್ತೂರು ಎರಿಂಞಿಪುಳ ನಿವಾಸಿ ಮೊಹಮ್ಮದ್‌ ಮುಸ್ತಫ(38)ನನ್ನು ಬೇಡಗಂ ಪೊಲೀಸರು ಬಂಧಿಸಿದ್ದಾರೆ.

ಜ.29 ರಂದು ರಾತ್ರಿ ಬೈಬಲ್‌ಗೆ ಬೆಂಕಿ ಹಚ್ಚಿದ್ದು, ಆ ದೃಶ್ಯಗಳನ್ನು ವೀಡಿಯೋ ಮಾಡಿ ಯೂಟ್ಯೂಬ್‌ ಸಹಿತ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರ ಮಾಡಿದ ಸಂಬಂಧ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಇತ್ತೀಚೆಗೆ ಕ್ರಿಸ್ಮಸ್‌ ಹಬ್ಬದ ಅಂಗವಾಗಿ ಬೋವಿಕ್ಕಾನದ ಸಾಮೂಹಿಕ ಆರೋಗ್ಯ ಕೇಂದ್ರದ ಪರಿಸರದಲ್ಲಿ ನಿರ್ಮಿಸಿದ್ದ ಗೋದಲಿಯಿಂದ ಮೂರ್ತಿಗಳನ್ನು ಕಳವುಗೈದ ಪ್ರಕರಣದಲ್ಲೂ ಈತ ಆರೋಪಿಯೆಂದು ಪೊಲೀಸರು ತಿಳಿಸಿದ್ದಾರೆ.

**

45 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ : ಬಂಧನ
ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 45,43,913 ರೂ. ಮೌಲ್ಯದ 799 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡ ಕಸ್ಟಂಸ್‌ ದಳ ಈ ಸಂಬಂಧ ಕಾಸರಗೋಡು ನಿವಾಸಿ ಮೊಹಮ್ಮದ್‌ ನಸೀದಿಲ್‌ನನ್ನು ಬಂಧಿಸಿದೆ. ಮೆಟಲ್‌ ಬಕೆಟ್‌ನ ರೂಪದಲ್ಲಿ ಹಾಗು ಎಮರ್ಜೆನ್ಸಿ ಲೈಟರ್‌ನ ಒಳಗೆ ಚಿನ್ನವನ್ನು ಬಚ್ಚಿಟ್ಟು ಚಿನ್ನ ಸಾಗಿಸಲು ಯತ್ನಿಸಲಾಗಿತ್ತು. ದುಬಾೖಯಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಈತ ಬಂದಿಳಿದಿದ್ದನು.

**
31.26 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ
ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂಸ್‌ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 31,26,750 ರೂ. ಮೌಲ್ಯದ 550 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡು, ಈ ಸಂಬಂಧ ಕಾಸರಗೋಡು ನಿವಾಸಿ ಸುಹೈಬ್‌ ರಹ್ಮಾನ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಅಬುದಾಬಿಯಿಂದ ಗೋ ಫಾಸ್ಟ್‌ ವಿಮಾನದಲ್ಲಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಈತನ ಬ್ಯಾಗನ್ನು ತಪಾಸಣೆ ಮಾಡಿದಾಗ ಬಚ್ಚಿಡಲಾಗಿದ್ದ ಚಿನ್ನ ಪತ್ತೆಯಾಯಿತು.

ಇದನ್ನೂ ಓದಿ: ಗಂಗೊಳ್ಳಿ: ಸ್ಕೀಮ್‌ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.