Kaveri Aarathi: ಗಂಗಾ ಆರತಿ ಅಧ್ಯಯನಕ್ಕೆ ಮತ್ತೊಮ್ಮೆ ನಿಯೋಗ ಕಳಿಸುವುದೇಕೆ?: ಆರ್.ಅಶೋಕ್
ಸಚಿವರು ತಮ್ಮ ತಂಡದೊಂದಿಗೆ ಹರಿದ್ವಾರ, ಕಾಶಿಗೆ ಹೋಗಿ ಮಾಡಿದ್ದಾದರು ಏನು?: ವಿಪಕ್ಷ ನಾಯಕ
Team Udayavani, Sep 23, 2024, 11:03 PM IST
ಬೆಂಗಳೂರು: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ ಬಳಿಕ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಏತಕ್ಕೆ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಸರಕಾರಕ್ಕೆ ಹಿಂದೂಗಳ ಆಚಾರ-ವಿಚಾರ ಬಗ್ಗೆ ದಿಢೀರ್ ಆಸಕ್ತಿ:
ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು ಮಸ್ತಿ ಮಾಡಲು ಹೋಗಿದ್ದಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಅಯೋಧ್ಯೆ ಶ್ರೀ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷ ಹಳೆ ಪ್ರಕರಣಗಳ ಮತ್ತೆ ಓಪನ್ ಮಾಡಿಸಿ ಕರಸೇವಕರ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯ ಪೊಲೀಸ್ ವ್ಯಾನ್ ಗೂ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ ವಿಚಾರದ ಬಗ್ಗೆ, ಸಂಪ್ರದಾಯ ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ.
ತಾಯಿ ಕಾವೇರಿ ಮೆಚ್ಚುತ್ತಾಳಾ?
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ ಗಳನ್ನ ಒದ್ದು ಒಳಗೆ ಹಾಕಿ, ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್ ಗಳ ಒದ್ದು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್ ಗಳನ್ನು ಜೈಲಿಗೆ ಕಳಿಸಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ? ಎಂದು ವಿಪಕ್ಷ ನಾಯಕ ಅಶೋಕ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.