Sarojini Mahishi ವರದಿ ಶಾಸನವಾಗಿ ರೂಪುಗೊಳ್ಳಲಿ: ಪುರುಷೋತ್ತಮ ಬಿಳಿಮಲೆ
Team Udayavani, Sep 1, 2024, 11:53 PM IST
ಮಂಗಳೂರು: ರಾಜ್ಯದ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಅವಕಾಶಕ್ಕಾಗಿ ಡಾ| ಸರೋಜಿನಿ ಮಹಿಷಿ ವರದಿ ಶಾಸನ ಆಗಬೇಕು. ಮುಂದಿನ ಅಧಿವೇಶನದಲ್ಲಿ ಸರಕಾರ ವರದಿಯನ್ನು ಶಾಸನ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ರವಿವಾರ ನಗರದ ಸಕೀìಟ್ ಹೌಸ್‌ನಲ್ಲಿ ಸಮಾನ ಮನಸ್ಕರ ಜತೆ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ವರದಿಯಲ್ಲಿ 58 ವಿಭಾಗಗಳಿದ್ದು, ಕೇವಲ 14 ವಿಭಾಗಗಳು ಮಾತ್ರ ಅನುಷ್ಠಾನಕ್ಕೆ ಯೋಗ್ಯವಾಗಿವೆ.
ಹಾಗಾಗಿ ಈ ವರದಿಯ ಯಥಾವತ್ ಜಾರಿ ಸಾಧ್ಯವಾಗದು. ಈ 14 ಶಿಫಾರಸನ್ನು ಅನುಷ್ಠಾನಕ್ಕೆ ತರಬೇಕಾದರೆ ವರದಿಯು ಶಾಸನ ರೂಪಕ್ಕೆ ಮಾರ್ಪಾಡಾಗಬೇಕು. ಅದಕ್ಕಾಗಿ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡನೆಯಾಗಿ ಬಳಿಕ ಶಾಸನ ರೂಪ ಪಡೆಯಬೇಕು. ಈ ಕುರಿತಂತೆ ಮುಖ್ಯಮಂತ್ರಿ ಸಹಿತ ಎಲ್ಲ ಶಾಸಕರಿಗೆ ಮನವಿ ಸಲ್ಲಿಸಲಾಗುವುದು. ಈ ವರದಿ ಕಾನೂನು ರೂಪ ಪಡೆದರೆ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಕಾನೂನು ಬದ್ಧವಾಗಿ ಪಡೆಯಲು ಸಾಧ್ಯವಾಗಲಿದೆ ಎಂದರು.
ಕನ್ನಡ ಕಡ್ಡಾಯ ಸೂಚನೆ
ರಾಜ್ಯದ ಎಲ್ಲ ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲವರನ್ನು ನೇಮಕ ಮಾಡುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸ್ಥಳೀಯ ಸಾಮಾನ್ಯರ ಒಡನಾಟ ಹೊಂದಿರುವ ಬ್ಯಾಂಕ್, ಆಸ್ಪತ್ರೆ ಹಾಗೂ ಪಶು ವಿಶ್ವವಿದ್ಯಾನಿಲಯಗಳಲ್ಲಿ ಕನ್ನಡ ಭಾಷೆ ತಿಳಿದಿರುವವರ ಅಗತ್ಯವಿದೆ. ನ. 1ರೊಳಗೆ ರಾಜ್ಯದ ಎಲ್ಲ ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲ ಒಬ್ಬರಾದರೂ ಇರಬೇಕು ಎಂದು ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕನ್ನಡ ಅನುಷ್ಠಾನ ಸಮಿತಿಗಳಿದ್ದು, ಅವುಗಳ ಮೂಲಕ ಜಿಲ್ಲಾಡಳಿತ ಅಧೀನದ ಎಲ್ಲ ಇಲಾಖೆಗಳಲ್ಲೂ ಕನ್ನಡ ಕಡ್ಡಾಯ ಅನುಷ್ಠಾನಕ್ಕೆ ಸೂಚನೆ ನೀಡಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ನೀಡುವ ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಮುಂದೆ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಗೂ ಈ ಆದೇಶವನ್ನು ವಿಸ್ತರಿಸಲಾಗುವುದು ಎಂದರು.
ಕೆಪಿಎಸ್‌ಸಿ ನಡೆಸಿದ ಪ್ರೊಬೆಷನರಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆ ತಪ್ಪಾಗಿ ಮುದ್ರಿಸಿ 1.35 ಲಕ್ಷ ಕನ್ನಡಿಗ ವಿದ್ಯಾರ್ಥಿಗಳ ಉದ್ಯೋಗಾಕಾಂಕ್ಷೆಗೆ ತಣ್ಣೀರು ಎರಚಲಾಗಿದೆ. ಈ ಬಗ್ಗೆ ಪ್ರಾಧಿಕಾರದ ನೋಟಿಸ್‌ಗೆ ಕೆಪಿಎಸ್‌ಸಿ ಉತ್ತರಿಸಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದರಿಂದ ಮರು ಪರೀಕ್ಷೆ ನಡೆಸಲು ಸೂಚಿವಂತೆ ಸರಕಾರವನ್ನು ಕೋರಲಾಗುವುದು ಎಂದರು.
ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಸಂಚಾಲಕ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ವಕ್ತಾರ ಎಂ.ಜಿ. ಹೆಗಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ. ನಿರ್ದೇಶಕ ರಾಜೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.