Kerala By Poll: ವಯನಾಡ್ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ
ಸಹೋದರನ ಕ್ಷೇತ್ರಕ್ಕೆ ಸಹೋದರಿಯಿಂದ ಚುನಾವಣೆ ರಾಜಕೀಯಕ್ಕೆ ಪ್ರವೇಶ, ಕೇರಳದ 2 ವಿಧಾನಸಭಾ ಕ್ಷೇತ್ರಕ್ಕೂ ಹೆಸರು ಅಂತಿಮ
Team Udayavani, Oct 15, 2024, 9:53 PM IST
ಹೊಸದಿಲ್ಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಬಹು ನಿರೀಕ್ಷಿತ ಉಪಚುನಾವಣೆಗೆ ನ.13ರಂದು ಚುನಾವಣೆ ಆಯೋಗ ದಿನಾಂಕ ನಿಗದಿಪಡಿಸಿದ ಬೆನ್ನಲ್ಲೇ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಹಿಡಿತದಲ್ಲಿದ್ದ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ (Priyanka Vadra) ಹೆಸರು ಅಂತಿಮಗೊಳಿಸಿ ಎಐಸಿಸಿ (ಭಾರತ ರಾಷ್ಟ್ರೀಯ ಕಾಂಗ್ರೆಸ್) ಅಧಿಕೃತ ಪ್ರಕಟಣೆ ಹೊರಡಿಸಿದೆ.
ಈ ಮೂಲಕ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಪ್ರವೇಶ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕೌತುಕ ಹೆಚ್ಚಿಸಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡರಲ್ಲೂ ಜಯ ಸಾಧಿಸಿದ್ದರು. ಬಳಿಕ ಕಾಂಗ್ರೆಸ್‌ನ ಗಾಂಧಿ ಕುಟುಂಬದ ಪಾರಂಪರಿಕ ಕ್ಷೇತ್ರವಾದ ರಾಯ್ ಬರೇಲಿಗೆ ಸಂಸದರಾಗಲು ಬಯಸಿದ್ದರಿಂದ ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಖಾಲಿಯಾಗುವಂತಾಗಿದೆ.
Priyanka Gandhi Vadra to contest from Wayanad Parliamentary constituency, in the by-election to Lok Sabha.
Ramya Haridas and Rahul Mamkootathil to contest from Chelakkara and Palakkad Assembly constituencies respectively for the by-election to Kerala Assembly. pic.twitter.com/4RZtZRa0it
— ANI (@ANI) October 15, 2024
ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ:
ಇದೀಗ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ ವಯನಾಡ್ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಹಾಗೂ ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರಕ್ಕೆ ರಾಹುಲ್ ಮಮುಕುಟ್ಟಿಲ್, ಚಲೆಕ್ಕರ ವಿಧಾನಸಭಾ ಕ್ಷೇತ್ರಕ್ಕೆ ರಮ್ಯಾ ಹರಿದಾಸ್ ಹೆಸರು ಘೋಷಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.
ಉಪಚುನಾವಣೆಯ ಫಲಿತಾಂಶ ನ.23ರಂದು ಹೊರಬೀಳಲಿದ್ದು, ಒಂದು ವೇಳೆ ಪ್ರಿಯಾಂಕಾ ಗೆಲುವು ಸಾಧಿಸಿದರೆ ಪ್ರಸಕ್ತ ಸಂಸತ್ತಿನಲ್ಲಿ ಅವರು ಗಾಂಧಿ ಕುಟುಂಬದ ಮೂರನೇ ಸಂಸದರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.