ಗುಜರಾತ್ ಅಧ್ಯಯನಕ್ಕೆ ಹೊರಟ ಕೇರಳ :ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಯುಡಿಎಫ್ ಕಿಡಿ
Team Udayavani, Apr 29, 2022, 8:50 AM IST
ತಿರುವನಂತಪುರ/ಅಹ್ಮದಾಬಾದ್: ಗುಜರಾತ್ ಮಾದರಿ ಎಂದರೆ ಸಿಡಿದು ಬೀಳುವ ಕೇರಳದ ಎಲ್‌ಡಿಎಫ್ ಸರ್ಕಾರ ಈಗ ಅದೇ ರಾಜ್ಯಕ್ಕೆ ಅಧ್ಯಯನ ತಂಡ ಕಳುಹಿಸಿಕೊಟ್ಟಿದೆ.
ವಿಜಯ ರೂಪಾಣಿ ಗುಜರಾತ್ ಸಿಎಂ ಆಗಿದ್ದ ವೇಳೆ ನ್ಯಾಷನಲ್ ಇನ್ಫೊರ್ಮಾಟಿಕ್ ಸೆಂಟರ್ (ಎನ್‌ಐಸಿ) ಸಹಯೋಗದಲ್ಲಿ ಇ-ಆಡಳಿತ ವ್ಯವಸ್ಥೆಯಲ್ಲಿ ಜಾರಿ ತಂದಿರುವ ಡ್ಯಾಶ್‌ಬೋರ್ಡ್ ವ್ಯವಸ್ಥೆಯನ್ನು ಅರಿತುಕೊಳ್ಳಲು ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ನೇತೃತ್ವದಲ್ಲಿ ಇಬ್ಬರು ಸದಸ್ಯರ ತಂಡವನ್ನು ಗಾಂಧಿನಗರಕ್ಕೆ ಕಳುಹಿಸಿಕೊಟ್ಟಿದೆ. ಇತ್ತೀಚೆಗಷ್ಟೇ ಕಣ್ಣೂರಿನಲ್ಲಿ ಮುಕ್ತಾಯಗೊಂಡಿರುವ ಸಿಪಿಎಂ ಸಮ್ಮೇಳನದಲ್ಲಿ “ಕೇರಳ ಮಾದರಿ ಅಭಿವೃದ್ಧಿ’ಯನ್ನು ದೇಶಾದ್ಯಂತ ಪ್ರಚಾರ ಮಾಡಲು ನಿರ್ಣಯ ಕೈಗೊಂಡಿರುವಂತೆಯೇ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ.
ಈ ಬೆಳವಣಿಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ನ ಟೀಕೆಗೆ ಕಾರಣವಾಗಿದೆ. ಇದರಿಂದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಗಾಢ ಮೈತ್ರಿ ಜಾಹೀರಾಗಿದೆ ಎಂದು ಎಂದು ಕಾಂಗ್ರೆಸ್ ಟೀಕಿಸಿದೆ.
ತಂಡ ಕಳುಹಿಸುವ ಬಗ್ಗೆ ಸಿಪಿಎಂ ಅಧಿಕೃತವಾಗಿ ಹೇಳಿಕೆ ನೀಡದಿದ್ದರೂ, “ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ಜತೆಗೆ ಮಾತನಾಡಿದ ಪಕ್ಷದ ಹೆಸರು ಬಹಿರಂಗಪಡಿಸಲಿಚ್ಛಿಸದ ನಾಯಕರೊಬ್ಬರು ” ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆಗೆ ಮಾತನಾಡಿದ್ದ ವೇಳೆ ಗುಜರಾತ್‌ನಲ್ಲಿರುವ ವ್ಯವಸ್ಥೆಯ ಬಗ್ಗೆ ಅಧ್ಯಯನ ನಡೆಸುವಂತೆ ಸಲಹೆ ನೀಡಿದ್ದರು’ ಎಂದರು. ಗುಜರಾತ್ ಸರ್ಕಾರ ಕೂಡ ಕೇರಳ ತಂಡ ಆಗಮಿಸುತ್ತಿ ರುವ ಬಗ್ಗೆ ಖಚಿತಪಡಿಸಿದೆ.
ಬಿಜೆಪಿ ಸ್ವಾಗತ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಮಾತ ನಾಡಿ ಕೊನೆಗೂ ಪಿಣರಾಯಿ ವಿಜಯನ್ ಗುಜರಾತ್ ಮಾದರಿ ಆಡಳಿತ ಅಳವಡಿಸಿಕೊಳ್ಳುತ್ತಿದ್ದಾರೆ. ಇನ್ನಾದರೂ, ವೈಫಲ್ಯ ಕಂಡ ಕೇರಳ ಮಾದರಿಗೆ ವಿದಾಯ ಹೇಳಲಿ ಎಂದಿದ್ದಾರೆ.
ಏನಿದು ಡ್ಯಾಶ್‌ಬೋರ್ಡ್?
ಎನ್‌ಐಸಿ ಸಹಯೋಗದ ಜತೆಗೆ ಕೊರೊನಾ ಸೋಂಕು ವ್ಯವಸ್ಥೆ ನಿರ್ವಹಣೆ, ಸೋಂಕು ಸಂಖ್ಯೆಗಳ ಪರಿಶೀಲನೆ ಮತ್ತು ನಿಗಾ, ಆಸ್ಪತ್ರೆಗಳಲ್ಲಿ ಜನರಿಗೆ ಸೂಕ್ತವಾದ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆಯೇ, ಜನರ ಅಭಿಪ್ರಾಯಗಳ ಸಲ್ಲಿಕೆಗಳನ್ನು ನಿರ್ವಹಿಸುವ ನಿಟ್ಟಿನಲ್ಲಿ ಡ್ಯಾಶ್ ಬೋರ್ಡ್ ಅಳವಡಿಸಲಾಗಿತ್ತು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಅಧಿಕಾರಿಗಳು ಗುಜರಾತ್‌ಗೆ ಭೇಟಿ ನೀಡಿ ಅದರ ಅಧ್ಯಯನ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.