ಕೇರಳ ಅರಣ್ಯದಲ್ಲಿ ಸ್ಫೋಟಕ ಪತ್ತೆ: ಪಿಎಫ್ಐ ನಂಟು ಶಂಕೆ
Team Udayavani, Jun 15, 2021, 10:28 PM IST
ನವದೆಹಲಿ: ಕೇರಳದ ಅರಣ್ಯ ಪ್ರದೇಶವೊಂದರಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಇದರ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಭಾಗಿಯಾಗಿರುವ ಕುರಿತು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಪಥನಪುರಂನ ಕೇರಳ ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯ ಗೇರು ತೋಟದಲ್ಲಿ ಮಂಗಳವಾರ ಎರಡು ಜಿಲೆಟಿನ್ ಕಡ್ಡಿ, 4 ಡಿಟೋನೇಟರ್, ಬ್ಯಾಟರಿ ಹಾಗೂ ಕೆಲವೊಂದು ವಯರ್‌ಗಳು ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುವ ಸಲುವಾಗಿ ಈ ಸ್ಫೋಟಕಗಳನ್ನು ತಂದಿಟ್ಟಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಅರಣ್ಯದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಕುರಿತು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಕುರಿತು ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.