ಕೋವಿಡ್ ಹಿನ್ನೆಲೆ : ಸಾಮೂಹಿಕ ಕೇಶ ಮುಂಡನೆ ಮಾಡಿ ಹರಕೆ ತೀರಿಸಿದ ಗ್ರಾಮಸ್ಥರು
ಕೊರೊನಾ ಹಿನ್ನೆಲೆಯಲ್ಲಿ ದೇವರಲ್ಲಿ ಹರಕೆ ಹೊತ್ತಿದ್ದ ಗ್ರಾಮಸ್ಥರು
Team Udayavani, Jan 1, 2022, 10:00 PM IST
ಭೋಪಾಲ್: ಕೊರೊನಾದಿಂದಾಗಿ ನಮ್ಮೂರಲ್ಲಿ ಒಂದೂ ಸಾವಾಗದಿರಲಿ ಎಂದು ಹರಕೆ ಹೊತ್ತಿದ್ದ ಗ್ರಾಮವೊಂದು ಶುಕ್ರವಾರ ಊರ ದೇವರಿಗೆ ವಿಶೇಷ ರೀತಿಯಲ್ಲಿ ಹರಕೆ ತೀರಿಸಿದೆ. ಊರಿನ 90ಕ್ಕೂ ಅಧಿಕ ಜನರು ಸಾಮೂಹಿಕವಾಗಿ ಕೇಶ ಮುಂಡನ ಮಾಡಿಸಿಕೊಂಡು ದೇವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಮಧ್ಯಪ್ರದೇಶದ ನೀಮುಂಚ್ ಜಿಲ್ಲೆಯ ದೇವ್ರಿ ಖಾವಸ ಗ್ರಾಮದಲ್ಲಿ ಇಂತಹ ವಿಶೇಷ ಆಚರಣೆ ನಡೆದಿದೆ. ಸುಮಾರು 2500 ಜನರಿರುವ ಈ ಗ್ರಾಮದಲ್ಲಿ 2021ರಲ್ಲಿ ಕೊರೊನಾ 2ನೇ ಅಲೆಯ ಸಮಯದಲ್ಲಿ 25-30 ಜನರಿಗೆ ಸೋಂಕು ದೃಢಪಟ್ಟಿತ್ತು. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿತ್ತಂತೆ. ಆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮದ ದೇವನಾರಾಯಣ ದೇಗುಲದಲ್ಲಿ ಹರಕೆ ಹೊತ್ತಿದ್ದಾರೆ. “ನಮ್ಮೂರಲ್ಲಿ ಈ ವರ್ಷ ಸೋಂಕಿಗೆ ಒಂದೂ ಬಲಿಯಾಗದಿದ್ದರೆ, ಸಾಮೂಹಿಕವಾಗಿ ಕೇಶ ಮುಂಡನ ಮಾಡಿಸಿಕೊಳ್ಳುತ್ತೇವೆ’ ಎಂದು ಹೇಳಿಕೊಂಡಿದ್ದಾರೆ.
ಅವರ ಬಯಕೆಯಂತೆಯೇ 2021ರಲ್ಲಿ ಗ್ರಾಮದಲ್ಲಿ ಕೊರೊನಾಕ್ಕೆ ಒಂದೂ ಬಲಿಯಾಗಿಲ್ಲ. ಆ ಹಿನ್ನೆಲೆಯಲ್ಲಿ ವರ್ಷಾಂತ್ಯದ ದಿನವಾದ ಶುಕ್ರವಾರ ಊರಿನಲ್ಲಿ ಹಬ್ಬವನ್ನೇ ಆಚರಿಸಲಾಗಿದೆ. ಊರವರೆಲ್ಲ ಸಂಭ್ರಮದಿಂದ ದೇವರಿಗೆ ಪೂಜೆ ಸಲ್ಲಿಸಿದ್ದು, 90ಕ್ಕೂ ಅಧಿಕ ಮಂದಿ ಕೇಶ ಮುಂಡನ ಮಾಡಿಸಿಕೊಂಡಿದ್ದಾರೆ. ಮಹಿಳೆಯರು, ಮಕ್ಕಳೆಲ್ಲ ಸೇರಿ ಭಜನೆ, ನೃತ್ಯ ಮಾಡಿ ಸಂಭ್ರಮಿಸಿದ್ದಾರೆ.
ಇದನ್ನೂ ಓದಿ : ತಿರುಮಲದ ಈ ಸೇವೆಗೆ 1.5 ಕೋಟಿ ರೂ.! ಇದು ಜಗತ್ತಿನಲ್ಲೇ ಅತ್ಯಂತ ದುಬಾರಿ ಸೇವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.