Kodagu: ಮತ್ತೆ ವರುಣಾರ್ಭಟ, ಹಾನಿ, ಭಾಗ ಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ
ಮಡಿಕೇರಿ- ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತ
Team Udayavani, Jul 31, 2024, 1:00 AM IST
ಮಡಿಕೇರಿ: ಜಿಲ್ಲೆಯಾದ್ಯಂತ ಮತ್ತೆ ವರುಣಾರ್ಭಟ ಆರಂಭಗೊಂಡಿದೆ. ಸೋಮವಾರ ರಾತ್ರಿಯಿಂದ ಹಲವೆಡೆ ನಿರಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯಾಗಬಹುದೆಂದು ಹವಾಮಾನ ಇಲಾಖೆ ತಿಳಿಸಿದ್ದು, ಜು. 31ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ತಲಕಾವೇರಿ ಹಾಗೂ ಭಾಗ ಮಂಡಲದಲ್ಲಿ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಭಾಗ ಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಏರ್ಪಟ್ಟಿದ್ದು, ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ನೀರು ಆವರಿಸಿದೆ. ಮಡಿಕೇರಿ ಮತ್ತು ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಳೆ ಮತ್ತಷ್ಟು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸಿದ್ದು, ನದಿ ಹಾಗೂ ಬೆಟ್ಟಗುಡ್ಡ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಕೆಲವು ಭಾಗಗಳಲ್ಲಿ ಗುಡ್ಡ ಮತ್ತು ಬರೆ ಕುಸಿದ ಘಟನೆಗಳು ನಡೆದಿದ್ದು, ಗ್ರಾಮೀಣ ಭಾಗದಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ದಕ್ಷಿಣ ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಕೇರಳದ ವಯನಾಡ್‌ನಲ್ಲಿ ಜಲಸ್ಫೋಟ ಸಂಭವಿಸಿರುವುದರಿಂದ ಕೊಡಗಿನಲ್ಲೂ ಮಳೆ ಅನಾಹುತದ ಬಗ್ಗೆ ಭಯ ಮೂಡಿದೆ.
ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಹೊಸಗದ್ದೆ, ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಕುಂಬಾರುಕೊಪ್ಪ ಮತ್ತು ಅಯ್ಯಂಗೇರಿಯಲ್ಲಿ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿದೆೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.