ಕೋವಿಡ್ ಸೋಂಕಿಗೆ ಮಹಿಳೆ ಬಲಿ! ಕೊಪ್ಪಳದಲ್ಲಿ ಮಹಾಮಾರಿಗೆ 6ನೇ ಸಾವು
Team Udayavani, Jul 11, 2020, 5:04 PM IST
ಕೊಪ್ಪಳ: ಕೊಪ್ಪಳದಲ್ಲಿ ಕೋವಿಡ್ ಸಾವಿನ ರಣಕೇಕೆ ಮುಂದುವರೆಸಿದ್ದು, ಶನಿವಾರ 60 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ಇದು ನಿಜಕ್ಕೂ ಜಿಲ್ಲೆಯ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ.
ಜಿಲ್ಲೆಯ ಕಾರಟಗಿಯ 60 ವರ್ಷದ ಮಹಿಳೆಯು ಸೋಂಕಿನಿಂದ ಬಳಲಿ ಜು.10 ರಂದು ರಾತ್ರಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಶನಿವಾರ ಬೆಳಗ್ಗೆ 11.15ಕ್ಕೆ ಮೃತಪಟ್ಟಿದ್ದಾಳೆ. ಈ ಮಹಿಳೆ ಸಾರಿ ಕೇಸ್ ನಡಿ ಆಸ್ಪತ್ರೆಗೆ ದಾಖಲಾಗಿದ್ದಳು. ಡಯಾಬಿಟಿಸ್ ಸೇರಿದಂತೆ ಸೋಂಕಿನ ಲಕ್ಷಣದಿಂದ ಬಳಲುತ್ತಿದ್ದಳು. ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ. ಜಿಲ್ಲಾಡಳಿತ ಸಂಜೆ ಈ ವಿಷಯ ಪ್ರಕಟ ಮಾಡಿದೆ.
ಜಿಲ್ಲೆಯಲ್ಲಿ ಈ ಮಹಿಳೆ ಸೇರಿದಂತೆ ಸಾವಿನ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ, ಇತ್ತೀಚೆಗೆ ಕೋವಿಡ್ ಸೋಂಕಿನಿಂದಾಗಿ 5 ಜನ ಮೃತ ಪಟ್ಟಿದ್ದರು. ಅದರಲ್ಲೂ ಕೇವಲ ಮೂರು ದಿನದಲ್ಲಿ ನಾಲ್ವರ ಸಾವು ಸಂಭವಿಸಿದೆ. ಇದು ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.