Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!
ಗುತ್ತಿಗೆದಾರ ಕೆಲಸ ಮಾಡಲು ಹೇಳಿದ್ದರು ಎಂದ ಬಾಲಕ, ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹೇಳಿದ್ದೇನು?
Team Udayavani, Nov 7, 2024, 9:57 PM IST
ಕೊರಟಗೆರೆ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚದ ಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನು ಬಾಲಕನಿಂದ ಸ್ವಚ್ಛ ಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಬೆಳಕಿಗೆ ಬಂದಿದೆ.
ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದ್ದು ತುಮಕೂರು ಮೂಲದ 10 ವರ್ಷದ ಬಾಲ ಕಾರ್ಮಿಕ ಹಾಗೂ ಓರ್ವ ವ್ಯಕ್ತಿ ಮಲವನ್ನು ಸ್ವಚ್ಛಗೊಳಿಸುತ್ತಿದ್ದ ವಿಡಿಯೋ ವೈರಲ್ ಆಗಿದೆ. ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆದಾರ ಕುಮಾರಣ್ಣ ಎಂಬವರು ನಮಗೆ ಈ ಕೆಲಸ ಮಾಡುವಂತೆ ಹೇಳಿದ್ದಾರೆ ಎಂದು ಬಾಲಕ ಹೇಳಿದ್ದಾನೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಿ.ಯಮುನಾ, ಪಟ್ಟಣ ಪಂಚಾಯಿತಿ ಸಿಬ್ಬಂದಿಯೊಂದಿಗೆ ತೆರಳಿ ಸ್ಥಳ ಪರಿಶೀಲಿಸಿದ್ದೇವೆ. ಕೆಎಸ್‌ಆರ್‌ಟಿಸಿಗೆ ನೋಟಿಸ್ ಕೊಡಲಾಗಿದ್ದು, ಏಜೆನ್ಸಿಯವರು ಬಾಲಕ ಯಾರೆಂದೇ ಗೊತ್ತಿಲ್ಲ ಎಂದಿದ್ದಾರೆ. ಈ ಕುರಿತು ಶುಕ್ರವಾರ ಸಿಸಿ ಕ್ಯಾಮೆರಾ ಪರಿಶೀಲಿಸಿ ತಹಶೀಲ್ದಾರ್‌ರ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಕಠಿನ ಕಾನೂನು ಅನಿವಾರ್ಯ
ಇಂತಹ ಘಟನೆ ರಾಜ್ಯದ ಯಾವುದೇ ಗ್ರಾಮಗಳಲ್ಲೂ ಸಂಭವಿಸಬಾರದು. ಈ ಘಟನೆ ನಾಗರಿಕ ಸಮಾಜದ ತಲೆ ತಗ್ಗಿಸುವಂತದ್ದು, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಮಲ ಹೊರುವ ಪದ್ದತಿ ಜಾತಿ ಪದ್ದತಿ ಜೀವಂತವಾಗಿರುವುದಕ್ಕೆ ಘಟನೆಯೇ ಸಾಕ್ಷಿ. ನಾನು ಈ ಘಟನೆಯ ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಇಂತಹ ಘಟನೆಗಳಿಗೆ ಅಂತ್ಯ ಕಾಣಿಸಲು ಇನ್ನೂ ಕಠಿನ ಕಾನೂನು ತರುವುದು ಅನಿವಾರ್ಯವಾಗಿದೆ ಎಂದು ಜೆಟ್ಟಿ ಸಾಮಾಜಿಕ ಹೋರಾಟಗಾರ ಅಗ್ರಹಾರ ನಾಗರಾಜು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.