ಪರಿಶಿಷ್ಟ ಜಾತಿಯವರ ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ಹೆಚ್ಚಳಕ್ಕೆ ನಿರ್ಧಾರ : ಕೋಟ
Team Udayavani, Aug 9, 2021, 7:51 PM IST
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನವನ್ನು 1.75 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾಣಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಥಮ ಸಭೆ ನಡೆಸಿ ನಂತರ ಮಾಧ್ಯಮಗಳೊಂದಗಿಎ ಮಾತನಾಡಿದ ಅವರು, ಇಂದು ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ಸಭೆ ಕರೆದಿದ್ದೆ. ಸಭೆಯಲ್ಲಿ ಕೆಲವು ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ 1 ಕೋಟಿ 20 ಲಕ್ಷ ಪರಿಶಿಷ್ಟ ಸಮಾಜ ಇದೆ. ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಲಿಕ್ಕೆ 1 ಲಕ್ಷದ 75 ಸಾವಿರ ರೂಪಾಯಿ ಮಾತ್ರ ನೀಡಲಾಗುತ್ತಿದೆ. ಹೀಗಾಗಿ ಮನೆ ನಿರ್ಮಿಸಲು ಆರ್ಥಿಕವಾಗಿ ತುಂಬಾ ಕಷ್ಟ ಇದೆ. ಎಲ್ಲ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್ ಕಲ್ಪಿಸುವ ವ್ಯವಸ್ಥೆ ಆಗಬೇಕು. ಅಲ್ಲದೆ ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತೆ ಆರೋಗ್ಯ ಇರಬೇಕು. ಈ ಕಾರಣಕ್ಕೆ ಅವರಿಗೆ ಕೊಡಬೇಕಿರುವ ಮನೆಗಳನ್ನು 5 ಲಕ್ಷಕ್ಕೆ ಏರಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸಿಎಂ ಹಾಗೂ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದುರು.
ಇನ್ನು ಇಲಾಖೆಯಲ್ಲಿ ಒಂದು ವರ್ಷಗಳ ಕಾಲ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಇದನ್ನೂ ಓದಿ :ಕೋಟ: ಕಾರ್ಪೆಂಟರ್ ಮಗ ಶ್ರೀನಿಧಿ ಆಚಾರ್ ಎಸೆಸೆಲ್ಸಿಯಲ್ಲಿ 625 ಅಂಕದ ಸಾಧನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.