ಕರಾವಳಿಯ ಭಕ್ತರಿಂದ ಭಗವಂತನ ಅಂತರಂಗ ಪೂಜೆ: ಡಾ| ಹೆಗ್ಗಡೆ
ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ
Team Udayavani, Feb 16, 2022, 5:10 AM IST
ಕೋಟೇಶ್ವರ: ಕರಾವಳಿಯು ಪವಿತ್ರ, ಪುರಾತನ ಕ್ಷೇತ್ರಗಳ ಐತಿಹ್ಯ ಹೊಂದಿದೆ. ಈ ಭಾಗದ ಜನರು ಸದ್ಭಕ್ತಿಯಿಂದ, ಅಂತರಂಗದಿಂದ ಭಗವಂತನನ್ನು ಆರಾಧಿಸುತ್ತಾರೆ. ಭಗವಂತನ ಸಾನ್ನಿಧ್ಯವು ಸ್ವತ್ಛತೆಯಿಂದ ಕೂಡಿರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಂತವಾದ ವಾತಾವರಣದಲ್ಲಿ ಭಗವಂತನ ಸಾನ್ನಿಧ್ಯವನ್ನು ಕಾಣುತ್ತೇವೆ. ಅಲ್ಲಿ ಚೈತನ್ಯ ಜಾಗೃತಿಯಾಗುತ್ತದೆ. ಶ್ರೀಕ್ಷೇತ್ರದ ವತಿಯಿಂದ ಸುಮಾರು 350 ಪುರಾತನ ದೇಗುಲಗಳ ಪುನರ್ನಿರ್ಮಾಣ ಮಾಡಲಾಗುತ್ತಿದೆ. ಸದ್ಭಾವನೆಯಿಂದ ಭಗವಂತನನ್ನು ಪೂಜಿಸಿದಲ್ಲಿ ಶ್ರೇಯಸ್ಸಾಗುವುದು ಎಂದರು.
ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಭಗವಂತನನ್ನು ಸಾಕ್ಷಾತ್ಕಾರಿಸಲು ಭಕ್ತಿ ಮಾರ್ಗ ಪ್ರಮುಖವಾದುದು. ಶ್ರದ್ಧೆ, ಭಕ್ತಿಯಿಂದ ಧ್ಯಾನಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಶ್ರೀ ಕೋಟಿಲಿಂಗೇಶ್ವರನ ಸಾನ್ನಿಧ್ಯವು ಸದ್ಭಕ್ತರ ಶ್ರಮದಿಂದ ಅಭಿವೃದ್ಧಿ ಕಂಡುಕೊಳ್ಳುತ್ತಿದೆ ಎಂದರು.
ಇದನ್ನೂ ಓದಿ:ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲಕ್ಕೆ ಡಾ| ಡಿ.ವೀರೇಂದ್ರ ಹೆಗ್ಗಡೆ ಭೇಟಿ
ವೇದಿಕೆಯಲ್ಲಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ಕಾರ್ಯನಿರ್ವಹಣಾಧಿ ಕಾರಿ ಗಣೇಶ ಗೌಡ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ದೇಗುಲದ ಪ್ರಧಾನ ತಂತ್ರಿ ಪ್ರಸನ್ನಕುಮಾರ್ ಐತಾಳ, ಶ್ರೀ ಕುಂದೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಕಾರ್ಯದರ್ಶಿ ಸುರೇಶ ಬೆಟ್ಟಿನ್, ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ದೇವರಾಯ ಶೇರುಗಾರ್, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಮಾತನಾಡಿದರು.
ವ್ಯವಸ್ಥಾಪನ ಸಮಿತಿ ಸದಸ್ಯ ನೇರಂಬಳ್ಳಿ ರಾಘವೇಂದ್ರ ರಾವ್ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಪ್ರಸ್ತಾವಿಸಿದರು. ನಟಿ, ನಿರೂಪಕಿ ಅಪರ್ಣಾ ಎನ್. ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ ಬೆಟ್ಟಿನ್ ವಂದಿಸಿದರು.
ಪುರ ಮೆರವಣಿಗೆ, ಪೂರ್ಣಕುಂಭ ಸ್ವಾಗತ
ಡಾ| ಹೆಗ್ಗಡೆ ಮತ್ತು ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರನ್ನು ರಥಬೀದಿಯಿಂದ ದೇಗುಲದ ವರೆಗೆ ಸಾಲಂಕೃತ ವಾಹನದಲ್ಲಿ ಕುಳ್ಳಿರಿಸಿ, ಭಕ್ತರ ಸಮ್ಮುಖದಲ್ಲಿ ಪುರ ಮೆರವಣಿಗೆಯಲ್ಲಿ ಕರೆತರಲಾಯಿತು. ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ತೆರಳಿದ ಅವರು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ, ಬ್ರಹ್ಮಕಶೋತ್ಸವ ಸಮಿತಿಯ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್, ಸಮಿತಿಗಳ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.