![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 1, 2021, 7:14 PM IST
ಕೊಟ್ಟಿಗೆಹಾರ: ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಬೆಲೆಬಾಳುವ ಮರ ಪತ್ತೆಯಾದ ಘಟನೆ ಬಿದಿರುತಳದಲ್ಲಿ ನಡೆದಿದೆ.
ಬಾಳೂರು ಗ್ರಾಮದ ನಾಗೇಶ್ ಆಚಾರ್ ಎಂಬುವವರು ಬಿದಿರುತಳ ಗ್ರಾಮದಿಂದ ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದು ಬಿದಿರುತಳಕ್ಕೆ ಅರಣ್ಯ ಅಧಿಕಾರಿಗಳು ಹುಡುಕಲು ಹೋದ ಸಂದರ್ಭದಲ್ಲಿ ಬಿದಿರುತಳದ ಕೃಷ್ಣೆಗೌಡ ಅವರಿಗೆ ಸೇರಿದ ಮನೆಯಲ್ಲಿ ಮರವನ್ನು ಅಡಗಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೃಷ್ಣೆಗೌಡ ಅವರ ಮೇಲೆ ಅವರ ಮೇಲೆ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಬಸವರಾಜ್, ಅರಣ್ಯ ರಕ್ಷಕ ಪರಮೇಶ್ ಇದ್ದರು.
ಲಕ್ಷಾಂತರ ರೂ ಬೆಲೆಬಾಳುವ ಮರಗಳ ಸಂಗ್ರಹ ಮಾಡಿದ್ದರೂ ಕೂಡ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳ ಗಮನಕ್ಕೆ ಬಾರದೇ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿಯನ್ನು ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಪವಾರ್
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.