ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಇರಬೇಕು ಎಂದೇನಿಲ್ಲ: ಮಾಜಿ ಸಂಸದ
Team Udayavani, Jan 8, 2025, 7:20 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪಕ್ಷವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿದೆ ಹೊರತು, ಶಿವಕುಮಾರ್ ಕಿತ್ತುಕೊಂಡಿದ್ದಲ್ಲ. ಈ ಸ್ಥಾನ ಅಲಂಕರಿಸುವ ಆತುರ ಇದ್ದವರು ಯಾರಾದರೂ ಆಗಲಿ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೂ ಆಗಬಹುದು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಟಾಂಗ್ ಕೊಟ್ಟರು.
ಸಿಎಂ ಸೇರಿದಂತೆ ಅವರ ಆಪ್ತ ಬಣ ಔತಣಕೂಟ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುದ್ದಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಮುಂದಿರುವ ಸವಾಲು ತಿಳಿದು ಪಕ್ಷ ಸಂಘಟಿಸುವವರು ಆಯ್ಕೆಯಾಗಲಿ ಎಂದರು.
ಪಕ್ಷದ ಅಧ್ಯಕ್ಷ ಸ್ಥಾನವನ್ನು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಅಷ್ಟಕ್ಕೂ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಇರಬೇಕು ಎಂದೇನಿಲ್ಲ. ಅವರು ನಾಲ್ಕೈದು ವರ್ಷಗಳಿಂದ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ಆ ಹುದ್ದೆಗೆ ಸತೀಶ್ ಜಾರಕಿಹೊಳಿ, ರಾಜಣ್ಣ ಅಥವಾ ಡಾ.ಪರಮೇಶ್ವರ್ ಅವರು ಮತ್ತೊಮ್ಮೆ ಆದರೂ ಸಂತೋಷ. ಅಷ್ಟೇ ಯಾಕೆ, ಸ್ವತಃ ಸಿದ್ದರಾಮಯ್ಯ ಅವರೂ ಆಗಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.