KPTCL, ESCOM; ವಿದ್ಯುತ್‌ಗೆ ವನ್ಯಜೀವಿಗಳ ಬಲಿ: ಎಸ್ಕಾಂಗಳಿಗೆ ನೋಟಿಸ್
ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಕರ್ನಾಟಕ ಹೈಕೋರ್ಟ್
Team Udayavani, Jul 20, 2024, 7:17 AM IST
ಬೆಂಗಳೂರು: ರಾಜ್ಯದಲ್ಲಿ ಆನೆಗಳೂ ಸೇರಿದಂತೆ ವನ್ಯಜೀವಿಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪುತ್ತಿರುವ ವಿಚಾರವಾಗಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ಸಂಬಂಧ ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಹಾಗೂ ಎಲ್ಲ ಎಸ್ಕಾಂಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ದಸರಾ ಆನೆ ಅಶ್ವತ್ಥಾಮ ಸಾವಿನ ಕುರಿತು ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ| ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಅರಣ್ಯ ಇಲಾಖೆ ಪರ ವಕೀಲರು ವಾದ ಮಂಡಿಸಿ, ಆನೆಗಳು ಸೇರಿದಂತೆ ಇತರ ವನ್ಯಜೀವಿಗಳ ಸಾವಿಗೆ ಅರಣ್ಯ ಪ್ರದೇಶದಲ್ಲಿ ಮುಖ್ಯವಾಗಿ ವನ್ಯಜೀವಿಧಾಮ, ಆನೆ ಕಾರಿಡಾರ್ ಪ್ರದೇಶಗಳಲ್ಲಿ ಅಳವಡಿಸಲಾಗುವ ಅಸುರಕ್ಷಿತ ವಿದ್ಯುತ್ ಮಾರ್ಗಗಳು, ಅರಣ್ಯದಂಚಿನ ಪ್ರದೇಶಗಳ ರೈತರು ತಮ್ಮ ಕೃಷಿ ಜಮೀನುಗಳಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವುದು, ವಿದ್ಯುತ್ ತಂತಿ ಬೇಲಿಗಳನ್ನು ಅಳವಡಿಸುವುದು ಮುಖ್ಯ ಕಾರಣವಾಗಿದೆ.
ಈ ವಿಚಾರವಾಗಿ ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಿಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ, ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳನ್ನು ಪ್ರತಿವಾದಿಗಳನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸಮ್ಮತಿಸಿದ ನ್ಯಾಯಪೀಠ, ಇಂಧನ ಇಲಾಖೆ, ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ, ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ (ಹೆಸ್ಕಾಂ), ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ (ಜೆಸ್ಕಾಂ), ಮಂಗಳೂರು ವಿದ್ಯುತ್ ಸರಬರಾಜು ನಿಗಮ (ಮೆಸ್ಕಾಂ)ಕ್ಕೆ ನೋಟಿಸ್ ಜಾರಿಗೊಳಿಸಿ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.