ಬಿಜೆಪಿಯಲ್ಲಿ ಲಾಬಿಗೆ ಮಣಿದು ಟಿಕೇಟ್ ಕೊಡುವ ಪದ್ಧತಿ ಇಲ್ಲ : ಈಶ್ವರಪ್ಪ
Team Udayavani, Jun 12, 2020, 12:38 PM IST
ಚಿತ್ರದುರ್ಗ: ಬಿಜೆಪಿಯಲ್ಲಿ ಯಾವುದೇ ಲಾಬಿಗೆ ಮಣಿದು ಟಿಕೇಟ್ ನೀಡುವ ಪದ್ಧತಿ ಇಲ್ಲ, ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಅಭ್ಯರ್ಥಿಗಳ ಆಯ್ಕೆ ನಡೆಯುತ್ತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರದ ನಾಯಕರು ಪ್ರಮುಖ ಕಾರ್ಯಕರ್ತರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ್ದಾರೆ. ಜೂನ್ 15 ರಂದು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ ಎಂದರು.
ಬಿಜೆಪಿಯಲ್ಲಿ ಪ್ರಮುಖ ನಾಯಕರು ಕೂಡ ಕಾರ್ಯಕರ್ತರು. ನಮಗ್ಯಾರಿಗೂ ಕೊಂಬಿಲ್ಲ, ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವ ನಾಯಕರ ಸೋಲು ಗೆಲುವಿನ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಯಾವುದೇ ಟಿಕೆಟ್ ವಿಚಾರದಲ್ಲಿ ಕೇಂದ್ರದ ಹಿರಿಯ ನಾಯಕರ ತೀರ್ಮಾನವೇ ಅಂತಿಮ.ಬಿಜೆಪಿಗೆ ಬಂದವರೆಲ್ಲಾ ಬಿಜೆಪಿ ಕಾರ್ಯಕರ್ತರು
ಅವರೆಲ್ಲಾ ಕಾಂಗ್ರೆಸ್, ಜೆಡಿಎಸ್ ನವರಲ್ಲ.
ಮುನಿರತ್ನ, ಪ್ರತಾಪ್ ಗೌಡ ಪಾಟೀಲ್, ರೋಷನ್ ಬೇಗ್ ಬಿಜೆಪಿಯವರಾಗಿ ಟಿಕೇಟ್ ಕೇಳುವುದು ತಪ್ಪಲ್ಲ. ಕಾಂಗ್ರೆಸ್ ಅಥವಾ ಜೆಡಿಎಸ್ ನಲ್ಲಿದ್ದೆ ಟಿಕೆಟ್ ಕೊಡಿ ಎನ್ನುವುದು ತಪ್ಪು.
ಬಿಜೆಪಿಯಲ್ಲಿರುವ ಎಲ್ಲಾ ಕಾರ್ಯಕರ್ತರಿಗೂ ಎಂಎಲ್ ಸಿ ಟಿಕೆಟ್ ಕೇಳುವ ಅರ್ಹತೆ ಇದೆ. ಬಿಜೆಪಿಯಲ್ಲಿ ಜಾತಿವಾರು ಟಿಕೆಟ್ ಕೊಡುವ ಪ್ರಶ್ನೆಯಿಲ್ಲ ಎಂದರು. ರಾಜ್ಯದಲ್ಲು ಬಿಎಸ್ ವೈ ವರ್ಚಸ್ಸು ಕಡಿಮೆಯಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದು ಪತ್ರಕರ್ತರ ಭ್ರಮೆಯಷ್ಟೇ! ರಾಜ್ಯದಲ್ಲಿ ಎಲ್ಲರು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.