ಕಾಂಗ್ರೆಸ್ ಪಕ್ಷಕ್ಕೆ ಸ್ವತಂತ್ರವಾಗಿ ಹೋರಾಡುವ ಶಕ್ತಿ ಇಲ್ಲ: ಈಶ್ವರಪ್ಪ
Team Udayavani, Jul 23, 2020, 8:50 PM IST
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿಹೀನವಾಗಿದೆ ಎನ್ನುವುದಕ್ಕೆ ರೈತ ಸಂಘದ ಜತೆ ಸೇರಿ ಹೋರಾಟ ಮಾಡುತ್ತೇವೆ ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ಸಾಕ್ಷಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸ್ವತಂತ್ರವಾಗಿ ಹೋರಾಡುವ ಶಕ್ತಿ ಇದ್ದಿದ್ದರೆ ರೈತ ಸಂಘವನ್ನು ಯಾಕೆ ಸೇರಿಸಿಕೊಳ್ಳಬೇಕಾಗಿತ್ತು. ಅವರು ಹತಾಶರಾಗಿದ್ದಾರೆ. ಲೋಕಸಭೆಯಲ್ಲಿ ಒಂದೇ ಸ್ಥಾನ ಗೆದ್ದಿದ್ದು, ಅಧಿಕಾರ ಕಳೆದುಕೊಂಡಿದ್ದು ಎಲ್ಲವೂ ಉದಾಹರಣೆಯಾಗಿವೆ. ಈ ಕಾರಣಕ್ಕೆ ಜೀವ ಪಡೆದುಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕರ ನಡುವೆ ಪೈಪೋಟಿ ನಡೆಯುತ್ತಿದೆ. ನಾನು ಲೀಡರ್ ಆಗಬೇಕು. ನಾನು ಲೀಡರ್ ಆಗಬೇಕು ಎಂಬ ಪೈಪೋಟಿ. ಏನಾದರೂ ಆಪಾದನೆ ಮಾಡಿದರೆ ನಾಯಕರಾಗುತ್ತೇವೆ ಎಂಬ ಉದ್ದೇಶ ಹೊಂದಿದ್ದಾರೆ. ಜತೆಗೆ ಹೋರಾಟ ಮಾಡುತ್ತಿದ್ದೇನೆ ಎಂದು ಸೋನಿಯಾ ಗಾಂಧಿ ಅವರನ್ನು ತೃಪ್ತಿಪಡಿಸಬೇಕು ಅದಕ್ಕಾಗಿ ಹೀಗೆ ಮಾತನಾಡುತ್ತಾರೆ. ವಿರೋಧ ಪಕ್ಷದ ನಾಯಕರಾಗಿ ಜೀವಂತವಾಗಿದ್ದೇವೆ ಎಂದು ತೋರಿಸಬೇಕಲ್ಲ ಅದಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ಸಿನವರು ಈ ಪರಿಸ್ಥಿತಿಯಲ್ಲಿ ಪಕ್ಷಬೇಧ ಮರೆತು ಸರ್ಕಾರಕ್ಕೆ ಬೆಂಬಲ ಕೊಡಬೇಕಾಗಿತ್ತು. ಜನ ಸಂಕಷ್ಟದಲ್ಲಿದ್ದಾರೆ, ರಾಜಕೀಯ ಮಾಡಬಾರದು ಎಂದು ಆದರೆ, ಸಹಕಾರ ಕೊಡುವುದು ಬಿಟ್ಟು ಹುಳುಕು ಹುಡುಕುತ್ತಿದ್ದಾರೆ. ಇದನ್ನು ಜನ ಗಮನಿಸುತ್ತಾರೆ. ಇಂತಹ ಸಂದರ್ಭದಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಜನ ಸಿದ್ದರಾಮಯ್ಯ ಅವರಿಗೆ ಛೀಮಾರಿ ಹಾಕುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.